
ಮಂಗಳೂರು: ಬಂಟ್ವಾಳದಲ್ಲಿ ಅಬ್ದುಲ್ ರಹಿಮಾನ್ ಎಂಬ ಯುವಕನ ಹತ್ಯೆ ಬೆನ್ನಲ್ಲೇ ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ 5 ತಾಲೂಕುಗಳ ವ್ಯಾಪ್ತಿಯಲ್ಲಿ ಮೂರು ದಿನ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಕಡಬ, ಪುತ್ತೂರು ಮತ್ತು ಸುಳ್ಯ ತಾಲೂಕುಗಳಲ್ಲಿ ಮೇ 27ರ ಸಂಜೆ 6 ಗಂಟೆಯಿಂದ ಮೇ 30ರ ಸಂಜೆ 6ರವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಘಟನೆಯ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಭಿಗಿ ಪೊಲೀಸ್ ಬಂದೋಬಸ್ತ್ಗೆ ಕ್ರಮ ಕೈಗೊಳ್ಳಲಾಗಿದೆ. ಉಡುಪಿ, ಚಿಕಮಗಳೂರು, ಮೈಸೂರು, ಉತ್ತರ ಕನ್ನಡ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಪಡೆ ತರಿಸಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಹೇಳಿದ್ದಾರೆ.
ಆಯಕಟ್ಟಿನ ಸ್ಥಳಗಳ ಮೇಲೆ ಪೊಲೀಸ್ ಇಲಾಖೆ ಹದ್ದಿನ ಕಣ್ಣು ಇಟ್ಟಿದೆ. ಅನುಮಾನಾಸ್ಪದ ಚಟುವಟಿಕೆ ಮೇಲೆ ಪೊಲೀಸರು ತೀವ್ರ ನಿಗಾ ವಹಿಸಿದ್ದಾರೆ.
ಕೊಲೆಯ ಕಾರಣ ಮತ್ತು ಆರೋಪಿಗಳ ಬಗ್ಗೆ ತನಿಖೆ ಮಾಡುತ್ತಿದ್ದೇವೆ ಎಂದು ಹೇಳಿದರು. ಬಂಟ್ವಾಳ ಡಿವೈವೆಸ್ಪಿ ನೇತೃತ್ವದಲ್ಲಿ ತನಿಖೆ ಆರಂಭಿಸಲಾಗಿದೆ. ಶಂಕಿತರನ್ನು ಕರೆದು ವಿಚಾರಣೆ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.
Advertisement