ಬಂಟ್ವಾಳ: ಪಿಕಪ್ ವಾಹನ ಚಾಲಕ ಅಬ್ದುಲ್ ರಹೀಮ್ ಹತ್ಯೆ ಪ್ರಕರಣ; 15 ಮಂದಿ ವಿರುದ್ಧ FIR ದಾಖಲು

ಪರಿಚಯಸ್ಥರಾದ ದೀಪಕ್, ಸುಮಿತ್ ಮತ್ತು 15 ಮಂದಿ ಏಕಾಏಕಿ ಚಾಲಕನ ಸೀಟಿನಲ್ಲಿದ್ದ ರಹೀಮ್ ನನ್ನು ಹೊರಗೆ ಎಳೆದು ತಲವಾರು, ಚೂರಿ, ರಾಡ್‌ನಲ್ಲಿ ಮಾರಣಾಂತಿಕ ಹಲ್ಲೆ ನಡೆಸಿದರು.
ಹತ್ಯೆಗೀಡಾದ ಅಬ್ದುಲ್ ರಹೀಮ್.
ಹತ್ಯೆಗೀಡಾದ ಅಬ್ದುಲ್ ರಹೀಮ್.
Updated on

ಮಂಗಳೂರು: ಬಂಟ್ವಾಳದ ಕುರಿಯಾಳದ ಕಾಂಬೋಡಿಯ ಇರಾಕೋಡಿ ಎಂಬಲ್ಲಿ ಮಂಗಳವಾರ ನಡೆದ ಪಿಕಪ್ ವಾಹನ ಚಾಲಕ ಅಬ್ದುಲ್ ರಹೀಮ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 15 ಮಂದಿಯ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಎಫ್‌ಐಆರ್‌ನಲ್ಲಿ ದೀಪಕ್, ಸುಮಿತ್ ಮತ್ತು ಇತರ 13 ಜನರ ಹೆಸರುಗಳನ್ನು ದಾಖಲಿಸಲಾಗಿದ್ದು, ಇವರ ವಿರುದ್ಧ ಸೆಕ್ಷನ್ 103, 109, 118(1), 118(2), 190, 191(1), 191(2) ಮತ್ತು 191(3) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣ ಸಂಬಂಧ ಮೊಹಮ್ಮದ್ ನಿಸಾರ್ ಎಂಬುವವರು ದೂರು ನೀಡಿದ್ದು, ದೂರಿನ ಪ್ರಕಾರ ಮಧ್ಯಾಹ್ನ 3 ಗಂಟೆಗೆ ಮುಸ್ತಫಾ ಎಂಬವರಿಂದ ದೂರವಾಣಿ ಕರೆ ಬಂದಿತ್ತು. ಇರ ಕೋಡಿಯಲ್ಲಿ ಅಬ್ದುಲ್ ರಹೀಮ್ ಮತ್ತು ಕಲಂದರ್ ಶಫಿ (ಗಾಯಗೊಂಡ) ಮೇಲೆ 'ತಲ್ವಾರ್' ನಿಂದ ಹಲ್ಲೆ ನಡೆಸಲಾಗಿದೆ ಎಂದು ತಿಳಿಸಿದ್ದರು.

ಮಧ್ಯಾಹ್ನ 3.45 ಕ್ಕೆ ಸ್ಥಳಕ್ಕೆ ತಲುಪಿದಾಗ ರಹೀಮ್ ತಲೆ, ಕುತ್ತಿಗೆ ಮತ್ತು ದೇಹದ ಇತರ ಭಾಗಗಳಲ್ಲಿ ಗಂಭೀರ ಗಾಯಗಳಾಗಿ ನೆಲಕ್ಕೆ ಬಿದ್ದಿರುವುದನ್ನು ಕಂಡಿ ಬಂದಿತ್ತು. ರಹೀಮ್ ಪಕ್ಕದಲ್ಲಿ ಕುಳಿತಿದ್ದ ಕಲಂದರ್ ಶಫಿ ಅವರ ಎದೆ, ಬೆನ್ನು ಮತ್ತು ಕೈಗಳಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣ ಆಂಬ್ಯುಲೆನ್ಸ್‌ನಲ್ಲಿ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ, ಶಫಿ ನನ್ನೊಂದಿಗೆ ಮಾತನಾಡಿದ್ದ. ಹೊಳೆ ಬದಿಯಿಂದ ಪಿಕ್ಅಪ್‌ ವಾಹನದಲ್ಲಿ ಮರಳು ಲೋಡ್ ಮಾಡಿ ಕುರಿಯಾಳ ಗ್ರಾಮದ ಈರಾ ಕೋಡಿಯ ಮನೆಯೊಂದರ ಬಳಿ ಇಳಿಸಲಾಗುತ್ತಿತ್ತು. ಈ ವೇಳೆ ಪರಿಚಯಸ್ಥರಾದ ದೀಪಕ್, ಸುಮಿತ್ ಮತ್ತು 15 ಮಂದಿ ಏಕಾಏಕಿ ಚಾಲಕನ ಸೀಟಿನಲ್ಲಿದ್ದ ರಹೀಮ್ ನನ್ನು ಹೊರಗೆ ಎಳೆದು ತಲವಾರು, ಚೂರಿ, ರಾಡ್‌ನಲ್ಲಿ ಮಾರಣಾಂತಿಕ ಹಲ್ಲೆ ನಡೆಸಿದರು. ಇದನ್ನು ತಡೆಯಲು ಹೋದಾಗ ನನ್ನ ಮೇಲೂ ಚೂರಿಯಿಂದ ಎದೆಗೆ, ಬೆನ್ನಿಗೆ, ಕೈಗೆ ಹಲ್ಲೆ ನಡೆಸಿದರು. ಈ ವೇಳೆ ಅಲ್ಲಿದ್ದವರು ಬೊಬ್ಬೆ ಹಾಕಿದ್ದರಿಂದ ಆರೋಪಿಗಳು ಮಾರಕಾಸ್ತ್ರಗಳೊಂದಿಗೆ ಪರಾರಿಯಾಗಿದರು ಎಂದು ಹೇಳಿದ್ದ.

ಹತ್ಯೆಗೀಡಾದ ಅಬ್ದುಲ್ ರಹೀಮ್.
ಬಂಟ್ವಾಳ: ಪಿಕಪ್ ವಾಹನ ಚಾಲಕ ರಹೀಮ್ ಎಂಬಾತನ ಬರ್ಬರ ಹತ್ಯೆ

ದೂರಿನಲ್ಲಿ ರಹೀಮ್ ಕೊಲ್ತಮಜಲು ಜುಮ್ಮಾ ಮಸೀದಿಯ ಕಾರ್ಯದರ್ಶಿಯಾಗಿದ್ದು, ವೃತ್ತಿಯಲ್ಲಿ ಚಾಲಕನಾಗಿದ್ದ ಮತ್ತು ಶಫಿ ಕಾರ್ಮಿಕನಾಗಿದ್ದಾನೆಂದು ದೂರಿನಲ್ಲಿ ತಿಳಿಸಲಾಗಿದೆ.

ಇನ್ನು ಘಟನೆ ಬಳಿಕ ಸ್ಥಳದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗಿದ್ದು, ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳಿರುವ‌ ಕಾರಣ ದಕ್ಷಿಣ ಕನ್ನಡ ಜಿಲ್ಲೆಯ 5 ತಾಲೂಕುಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಕಡಬ ಮತ್ತು ಸುಳ್ಯ ತಾಲೂಕಿನಾದ್ಯಂತ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163ರಡಿ ಮೇ 27ರ ಸಂಜೆ 6ರಿಂದ ಮೇ 30ರ ಸಂಜೆ 6ರ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಈ ನಡುವೆ ಪೊಲೀಸ್ ಭದ್ರತೆಯ ನಡುವೆ ತೊಕ್ಕೊಟ್ಟು ಮತ್ತು ಪಂಪ್‌ವೆಲ್ ಮೂಲಕ ಕೊಲ್ತಮಜಲುವಿನ ರಹೀಮ್ ಅವರ ನಿವಾಸಕ್ಕೆ ಮೃತದೇಹವನ್ನು ಕೊಂಡೊಯ್ಯಲಾಗಿದ್ದು, ಅಂತ್ಯಕ್ರಿಯೆಯ ಪ್ರಾರ್ಥನೆಯಲ್ಲಿ ನೂರಾರು ಜನರು ಜಮಾಯಿಸಿದ್ದರು. ಕೊಲ್ತಮಜಲುವಿನ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ಅಂತ್ಯಕ್ರಿಯೆಗೆ ವ್ಯವಸ್ಥೆ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com