
ಬೆಂಗಳೂರು: ಕನ್ನಡ ಭಾಷೆಗೆ ಬಹಳ ದೀರ್ಘ ಇತಿಹಾಸವಿದೆ. ಆದರೆ ನಟ ಕಮಲ್ ಹಾಸನ್ ಅವರಿಗೆ ಕನ್ನಡದ ಇತಿಹಾಸ ಹೊತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ.
ನಟ ಕಮಲ್ ಹಾಸನ್ ಅವರು ಇತ್ತೀಚೆಗೆ ಚೆನ್ನೈನಲ್ಲಿ ನಡೆದ ತಮ್ಮ ಮುಂಬರುವ ಚಿತ್ರ ಥಗ್ ಲೈಫ್' ಆಡಿಯೋ ಬಿಡುಗಡೆ ಸಮಾರಂಭದಲ್ಲಿ ತಮಿಳಿನಿಂದ ಕನ್ನಡ ಹುಟ್ಟಿದೆ ಎಂದು ಹೇಳಿದ್ದು, ಇದಕ್ಕೆ ಕನ್ನಡಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂದು ನಗರದಲ್ಲಿ ಕಮಲ್ ಹಾಸನ್ ಹೇಳಿಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, "ಕನ್ನಡ ಭಾಷೆಗೆ ಬಹಳ ದೀರ್ಘ ಇತಿಹಾಸವಿದೆ.... ಅವರಿಗೆ(ಕಮಲ್ ಹಾಸನ್) ಗೊತ್ತಿಲ್ಲ" ಎಂದು ತಿರುಗೇಟು ನೀಡಿದರು.
ಬೆಂಗಳೂರು, ಬೆಳಗಾವಿ, ಮೈಸೂರು ಹುಬ್ಬಳ್ಳಿ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ನಟ ಕಮಲ್ ಹಾಸನ್ ಹೇಳಿಕೆ ಖಂಡಿಸಿ ಹಲವಾರು ಕನ್ನಡ ಪರ ಸಂಘಟನೆಗಳ ಪ್ರತಿಭಟನೆ ನಡೆಸುತ್ತಿವೆ.
ನಟ-ರಾಜಕಾರಣಿ ಕಮಲ್ ಹಾಸನ್ ಅವರು ರಾಜ್ಯದ ಜನರಲ್ಲಿ ಕ್ಷಮೆಯಾಚಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಅಲ್ಲದೆ ಕ್ಷಮೆಯಾಚಿಸಲು ವಿಫಲವಾದರೆ, ಅವರ 'ಥಗ್ ಲೈಫ್' ಚಿತ್ರ ಪ್ರದರ್ಶನವನ್ನು ತಡೆಯುವುದಾಗಿ ಎಚ್ಚರಿಕೆ ನೀಡಿದ್ದಾರೆ.
Advertisement