ಒಳಮೀಸಲಾತಿ ಜಾತಿ ಗಣತಿ: ಪಾಲಿಕೆ ವ್ಯಾಪ್ತಿಯಲ್ಲಿ ಸಮೀಕ್ಷಾ ಕಾರ್ಯ ಕುಂಠಿತ, ಕ್ರಮಕ್ಕೆ BBMP ಮುಂದು

ಮೇ ತಿಂಗಳಿನಿಂದ ಸಮೀಕ್ಷೆ ಪ್ರಾರಂಭವಾಗಿದ್ದು, ಅಂದಿನಿಂದ 8,215 ಗಣತಿದಾರರು 1,31,730 ಎಸ್‌ಸಿ ಮನೆಗಳಿಗೆ ಭೇಟಿ ನೀಡಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಪರಿಶಿಷ್ಟ ಜಾತಿ ಸಮುದಾಯದಲ್ಲಿ ಒಳಮೀಸಲಾತಿ ನೀಡುವ ಸಂಬಂಧ ನಡೆಯುತ್ತಿರುವ ಸಮೀಕ್ಷೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿ ಹೊರತುಪಡಿಸಿ ರಾಜ್ಯದಾದ್ಯಂತ ಉತ್ತಮವಾಗಿ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಕ್ರಮಕ್ಕೆ ಬಿಬಿಎಂಪಿ ಮುಂದಾಗಿದೆ.

ಈ ಸಂಬಂಧ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ಮಹೇಶ್ವರ ರಾವ್ ಅವರು ಅಧಿಕಾರಿಗಳೊಂದಿಗೆ ಮಂಗಳವಾರ ಪರಿಶೀಲನಾ ಸಭೆ ನಡೆಸಿದರು.

ಮೇ ತಿಂಗಳಿನಿಂದ ಸಮೀಕ್ಷೆ ಪ್ರಾರಂಭವಾಗಿದ್ದು, ಅಂದಿನಿಂದ 8,215 ಗಣತಿದಾರರು 1,31,730 ಎಸ್‌ಸಿ ಮನೆಗಳಿಗೆ ಭೇಟಿ ನೀಡಿದ್ದಾರೆ. ಪರಿಶಿಷ್ಟ ಜಾತಿಗಳು ಹೆಚ್ಚು ಜನಸಂಖ್ಯೆ ಹೊಂದಿರುವ ಪ್ರದೇಶಗಳಲ್ಲಿ, ವಿಶೇಷವಾಗಿ ಪೂರ್ವ ವಲಯದಲ್ಲಿ ಹೆಚ್ಚುವರಿ ಗಣತಿದಾರರನ್ನು ನಿಯೋಜಿಸಿ, ಸಮೀಕ್ಷೆ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಶಿಷ್ಟ ಜಾತಿಗಳು ಹೆಚ್ಚು ಜನಸಂಖ್ಯೆ ಹೊಂದಿರುವ ಪ್ರದೇಶಗಳಲ್ಲಿ ಪ್ರಮುಖವಾಗಿ ಪೂರ್ವ ವಲಯದಲ್ಲಿ ಸಮುದಾಯದ ಮುಖಂಡರು ಮತ್ತು ಪ್ರತಿನಿಧಿಗಳೊಂದಿಗೆ ಸಂಪರ್ಕದಲ್ಲಿರಲು ಗಣತಿದಾರರಿಗೆ ತಿಳಿಸಲಾಗಿದೆ. ಜೊತೆಗೆ ಸಮೀಕ್ಷೆ ಕಾರ್ಯವನ್ನು ಆದಷ್ಟು ಬೇಗ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಸಂಗ್ರಹ ಚಿತ್ರ
ಆಂತರಿಕ ಮೀಸಲಾತಿ ಸಮೀಕ್ಷೆ ಪೂರ್ಣಗೊಂಡ ನಂತರವಷ್ಟೇ ಜಾತಿ ಸಮೀಕ್ಷೆಯ ಬಗ್ಗೆ ಚರ್ಚೆ ಸಾಧ್ಯತೆ!

ಇದಕ್ಕೂ ಮುನ್ನ, ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ರಾಜ್ಯ ಮಟ್ಟದ ಸಮನ್ವಯ ಸಮಿತಿಯ ಅಧ್ಯಕ್ಷೆಯೂ ಆಗಿರುವ ಉಮಾ ಮಹಾದೇವನ್ ಅವರು, ಬಿಬಿಎಂಪಿ ವ್ಯಾಪ್ತಿಯಲ್ಲಿ ಸಮೀಕ್ಷೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಪರಿಶಿಷ್ಟ ಜಾತಿ (ಎಸ್ಸಿ) ಸಮುದಾಯಗಳ ನಾಯಕರು ಮತ್ತು ಪದಾಧಿಕಾರಿಗಳು ಸಂಪೂರ್ಣ ಸಹಕಾರ ನೀಡಬೇಕೆಂದು ಮನವಿ ಮಾಡಿದರು.

ನಗರದಲ್ಲಿ ಸಮೀಕ್ಷಾ ಕಾರ್ಯ ತಡವಾಗಿದೆ. ಮನೆ-ಮನೆ, ಶಿಬಿರ ಹಾಗೂ ಆನ್ ಲೈನ್ ಮೂಲಕ ಸ್ವಯಂ ಘೋಷಣೆ ಹೀಗೆ ಮೂರು ಹಂತಗಳಲ್ಲಿ ಸಮೀಕ್ಷೆ ನಡೆಸಲಾಗುತ್ತಿದೆ. ನಗರದಲ್ಲಿ ಸಮೀಕ್ಷಾ ಕಾರ್ಯದಲ್ಲಿ ಎಲ್ಲರೂ ಪಾಲ್ಗೊಳ್ಳುವ ನಿಟ್ಟಿನಲ್ಲಿ ಜಾಗೃತಿ ಸಹ ನಡೆಸಲಾಗುತ್ತಿದ್ದು, ಯಶಸ್ವಿಯಾಗಲು ಸಮುದಾಯದ ಮುಖಂಡರ ಸಹಕಾರ ಅಗತ್ಯವಾಗಿದೆ. ಸಮೀಕ್ಷಾ ಕಾರ್ಯದಲ್ಲಿ ಸರಿಯಾಗಿ ಕಾರ್ಯನಿರ್ವಹಿಸದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com