ಪ್ರವಾಹ ಪೀಡಿತ ಪ್ರದೇಶಗಳಿಗೆ ತಕ್ಷಣ ಭೇಟಿ ನೀಡಲು ಉಸ್ತುವಾರಿ ಸಚಿವರಿಗೆ CM ಸೂಚನೆ: ಮೇ 30 ರಂದು DC ಗಳೊಂದಿಗೆ ಸಭೆ

ಮೇ 26 ರವರೆಗೆ ರಾಜ್ಯದಲ್ಲಿ ಮಳೆಯಿಂದಾಗಿ ಒಟ್ಟು 45 ಮನೆಗಳು ಸಂಪೂರ್ಣವಾಗಿ ಹಾನಿಗೊಳಗಾಗಿವೆ ಮತ್ತು 1,385 ಮನೆಗಳು ಭಾಗಶಃ ಹಾನಿಗೊಳಗಾಗಿವೆ ಎಂದು ಮಾಹಿತಿ ನೀಡಿದ್ದಾರೆ.
CM Siddaramaiah
ಸಿಎಂ ಸಿದ್ದರಾಮಯ್ಯ
Updated on

ಬೆಂಗಳೂರು: ರಾಜ್ಯದಾದ್ಯಂತ ಭಾರಿ ಮಳೆ ಆಗುತ್ತಿರುವ ಕಾರಣ ಪ್ರವಾಹ ಪೀಡಿತ ಪ್ರದೇಶಗಳಿಗೆ ತಕ್ಷಣ ತೆರಳಿ ಪರಿಹಾರ ಕಾರ್ಯದ ಉಸ್ತುವಾರಿ ನೋಡಿಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಮಳೆಯಿಂದ ಆಗಿರುವ ಅನಾಹುತಗಳ ಬಗ್ಗೆ ಬುಧವಾರ ಬೆಳಿಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿ, ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ನಿರ್ದೇಶನ ನೀಡಿದರು.

ಅಧಿಕಾರಿಗಳ ಪ್ರಕಾರ, ಮೇ 26 ರವರೆಗೆ ರಾಜ್ಯದಲ್ಲಿ ಮಳೆಯಿಂದಾಗಿ ಒಟ್ಟು 45 ಮನೆಗಳು ಸಂಪೂರ್ಣವಾಗಿ ಹಾನಿಗೊಳಗಾಗಿವೆ ಮತ್ತು 1,385 ಮನೆಗಳು ಭಾಗಶಃ ಹಾನಿಗೊಳಗಾಗಿವೆ ಎಂದು ಮಾಹಿತಿ ನೀಡಿದ್ದಾರೆ.

ಭಾರಿ ಮಳೆಯಿಂದ ಹಾನಿಗೆ ಒಳಗಾಗಿರುವ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ತಕ್ಷಣ ಭೇಟಿ ನೀಡಿ ಪರಿಸ್ಥಿತಿಯನ್ನು ಸಮಗ್ರವಾಗಿ ಅವಲೋಕಿಸುವಂತೆ ಜಿಲ್ಲಾ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಕೂಡಾ ತೀವ್ರ ನಿಗಾ ವಹಿಸಿ ತಕ್ಷಣ ತಕ್ಷಣ ಪರಿಹಾರ ಕಾರ್ಯಗಳನ್ನು ಸಮರೋಪಾದಿಯಲ್ಲಿ ನಿರ್ವಹಿಸಲು ಸೂಚನೆ ನೀಡಿದ್ದಾರೆ.

CM Siddaramaiah
ಕೊಡಗು, ವಯನಾಡಿನಲ್ಲಿ ಭಾರೀ ಮಳೆ: ಕೃಷ್ಣರಾಜ ಸಾಗರ, ಕಬಿನಿ ಜಲಾಶಯಗಳಿಗೆ ಜೀವಕಳೆ; ಒಳಹರಿವು ಹೆಚ್ಚಳ

ಈ ಬಗ್ಗೆ ಸಮಗ್ರ ಅವಲೋಕನ‌ ನಡೆಸಲು ಇದೇ 30 ಮತ್ತು 31ರಂದು ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯನ್ನು ಕರೆಯುವಂತೆ ಮುಖ್ಯ ಕಾರ್ಯದರ್ಶಿಗೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.

ರಾಜ್ಯದಲ್ಲಿ 170 ತಾಲ್ಲೂಕುಗಳನ್ನು ಪ್ರವಾಹ/ಭೂಕುಸಿತಕ್ಕೆ ಗುರಿಯಾಗುವ ತಾಲ್ಲೂಕುಗಳೆಂದು ಗುರುತಿಸಲಾಗಿದ್ದು, ಮುಂಜಾಗ್ರತೆಯಾಗಿ 2,296 ಕಾಳಜಿ/ಆಶ್ರಯ ತಾಣಗಳನ್ನು ಗುರುತಿಸಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 201 ಸ್ಥಳಗಳನ್ನು ಪ್ರವಾಹ ಪೀಡಿತ ಸ್ಥಳಗನ್ನು ಗುರುತಿಸಲಾಗಿದೆ. ಇದೇ 26 ರವರೆಗೆ ರಾಜ್ಯದಲ್ಲಿ 45 ಮನೆಗಳು ಸಂಪೂರ್ಣವಾಗಿ ಹಾನಿಗೊಂಡಿದ್ದು, 1,385 ಮನೆಗಳು ಭಾಗಶಃ ಹಾನಿಯಾಗಿದ್ದು, ಅದರಲ್ಲಿ ಶೇ 99 ರಷ್ಟು ಆರ್ಥಿಕ ಸಹಾಯ ಧನವನ್ನು ಪಾವತಿ ಮಾಡಲಾಗಿದೆ.

ವಿಪತ್ತು ನಿರ್ವಹಣೆಗಾಗಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಪಿ.ಡಿ ಖಾತೆಯಲ್ಲಿ ₹ 97,351.95 ಲಕ್ಷ ಅನುದಾನವಿದೆ ಎಂದು ತಿಳಿಸಿದ್ದಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮಿತಿಯಡಿಯಲ್ಲಿ 201 ಸ್ಥಳಗಳನ್ನು ಪ್ರವಾಹ ಪೀಡಿತ ಪ್ರದೇಶಗಳೆಂದು ಗುರುತಿಸಲಾಗಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com