ಮಾಜಿ ಯೋಧರಿಗಾಗಿ ಪ್ರತ್ಯೇಕ ನಿಗಮ ಸ್ಥಾಪಿಸಲು ಚಿಂತನೆ: ಡಿ.ಕೆ ಶಿವಕುಮಾರ್

ಕಾಂಗ್ರೆಸ್ ಪಕ್ಷದ ಸೈನಿಕರ ವಿಭಾಗದ ಅಧ್ಯಕ್ಷರಾದ ಮಲ್ಲಿಕಾರ್ಜುನ ಅವರ ಸಲಹೆ ಮೇರೆಗೆ ಕಾರ್ಪೊರೇಷನ್ ರಚಿಸಲು ಆಲೋಚಿಸುತ್ತಿದ್ದೇವೆ. ನಮ್ಮ ದೇಶಕ್ಕೆ ಸೇವೆ ಸಲ್ಲಿಸಿರುವ ಯೋಧರ ರಕ್ಷಣೆಗೆ ನಾವು ಬದ್ಧರಾಗಿದ್ದೇವೆ ಎಂದು ತಿಳಿಸಿದರು.
DK Shivakumar
ಜೈ ಹಿಂದ್ ಸಭಾ ಕಾರ್ಯಕ್ರಮದಲ್ಲಿ ಡಿ.ಕೆ ಶಿವಕುಮಾರ್
Updated on

ಬೆಂಗಳೂರು: ರಾಜ್ಯದಲ್ಲಿರುವ ಎಲ್ಲಾ ಮಾಜಿ ಯೋಧರಿಗೆ ನೆರವಾಗಲು ಪ್ರತ್ಯೇಕ ನಿಗಮ (ಕಾರ್ಪೊರೇಷನ್) ಸ್ಥಾಪಿಸಲು ಚಿಂತನೆ ನಡೆಸಲಾಗಿದ್ದು, ಈ ವಿಚಾರವನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ನಗರದ ಟೌನ್ ಹಾಲ್ ನಲ್ಲಿ ಬುಧವಾರ ನಡೆದ ಜೈ ಹಿಂದ್ ಸಭಾ ಕಾರ್ಯಕ್ರಮದಲ್ಲಿ ದೇಶಕ್ಕೆ ಸೇವೆ ಸಲ್ಲಿಸಿದ ಹಿರಿಯ ಸೇನಾಧಿಕಾರಿಗಳು ಹಾಗೂ ಮಾಜಿ ಯೋಧರು, ಹುತಾತ್ಮರಾದ ಯೋಧರ ಕುಟುಂಬ ಸದಸ್ಯರನ್ನು ಸನ್ಮಾನಿಸಿದ ನಂತರ ಶಿವಕುಮಾರ್ ಅವರು ಮಾತನಾಡಿದರು.

ಕಾಂಗ್ರೆಸ್ ಪಕ್ಷದ ಸೈನಿಕರ ವಿಭಾಗದ ಅಧ್ಯಕ್ಷರಾದ ಮಲ್ಲಿಕಾರ್ಜುನ ಅವರ ಸಲಹೆ ಮೇರೆಗೆ ಕಾರ್ಪೊರೇಷನ್ ರಚಿಸಲು ಆಲೋಚಿಸುತ್ತಿದ್ದೇವೆ. ನಮ್ಮ ದೇಶಕ್ಕೆ ಸೇವೆ ಸಲ್ಲಿಸಿರುವ ಯೋಧರ ರಕ್ಷಣೆಗೆ ನಾವು ಬದ್ಧರಾಗಿದ್ದೇವೆ ಎಂದು ತಿಳಿಸಿದರು.

ಇಂತಹ ಅತ್ಯಂತ ಮಹತ್ವದ ಕಾರ್ಯಕ್ರಮದ ಭಾಗವಾಗಿರುವುದು ಹೆಮ್ಮೆಯ ವಿಚಾರ. ದೇಶಕ್ಕೆ ಶಕ್ತಿ ತುಂಬಿರುವ ನಿಮ್ಮಲ್ಲರಿಗೆ ದೇಶ ಹಾಗೂ ಕಾಂಗ್ರೆಸ್ ಪಕ್ಷದ ಪರವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಕಾಂಗ್ರೆಸ್ ಪಕ್ಷ ಸದಾ ದೇಶ ಹಾಗೂ ನಮ್ಮ ಸಶಸ್ತ್ರ ಪಡೆಗಳ ಪರವಾಗಿ ನಿಲ್ಲಲಿದೆ. ನಿಮ್ಮ ಕೊಡುಗೆಯನ್ನು ಸದಾ ಸ್ಮರಿಸಲಿದೆ ಎಂಬುದಕ್ಕೆ ಈ ಕಾರ್ಯಕ್ರಮ ಸಾಕ್ಷಿಯಾಗಿದೆ” ಎಂದರು.

DK Shivakumar
ಕಲಬುರಗಿ ಜಿಲ್ಲಾಧಿಕಾರಿ ವಿರುದ್ಧ ಅವಹೇಳನಕಾರಿ ಹೇಳಿಕೆ; ಬಿಜೆಪಿ ಎಂಎಲ್‌ಸಿ ರವಿಕುಮಾರ್ ವಿರುದ್ಧ ರಾಜ್ಯ ಸರ್ಕಾರ ಕ್ರಮ: ಡಿ.ಕೆ ಶಿವಕುಮಾರ್

ಕಾರ್ಯಕ್ರಮದಲ್ಲಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿರುವ ಹಿರಿಯ ಸೇನಾಧಿಕರಿಗಳು ಹಾಗೂ ಮಾಜಿ ಯೋಧರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಇನ್ನು ದೇಶ ಸೇವೆಯಲ್ಲಿ ಹುತಾತ್ಮರಾದ ವೀರ ಯೋಧರ ಕುಟುಂಬ ಸದಸ್ಯರಿಗೆ ಸನ್ಮಾನ ಸಲ್ಲಿಸಿದರು.

ಅಶೋಕ ಚಕ್ರ ಪ್ರಶಸ್ತಿ ಪುರಸ್ಕೃತ ದಿವಂಗತ ಮೇಜರ್ ಸಂದೀಪ್ ಉನ್ನಿಕೃಷ್ಣನ್, ಅಶೋಕ ಚಕ್ರ ಪ್ರಶಸ್ತಿ ಪುರಸ್ಕೃತ ಕರ್ನಲ್ ಜೋಜನ್ ಥಾಮಸ್, ಶೌರ್ಯ ಚಕ್ರ ಪ್ರಶಸ್ತಿ ಪುರಸ್ಕೃತ ಮೇಜರ್ ಎಂ.ಸಿ ಮುತ್ತಣ್ಣ, ಶೌರ್ಯ ಚಕ್ರ ಪ್ರಶಸ್ತಿ ಪುರಸ್ಕೃತ ಮೇಜರ್ ಗಣೇಶ್ ಮದ್ದಪ್ಪ, ಶೌರ್ಯ ಚಕ್ರ ಪ್ರಶಸ್ತಿ ಪುರಸ್ಕೃತ ಮೇಜರ್ ಎಂ.ಸಿ ಮುತ್ತಣ್ಣ, ಶೌರ್ಯ ಚಕ್ರ ಪ್ರಶಸ್ತಿ ಪುರಸ್ಕೃತ ಕ್ಯಾಪ್ಟನ್ ಎಂ.ವಿ ಪಂಜಲ್, ಶೌರ್ಯ ಚಕ್ರ ಪ್ರಶಸ್ತಿ ಪುರಸ್ಕೃತ ಮೇಜರ್ ಮೋಹನ್ ಗಂಗಾಧರನ್, ಮೇಜರ್ ಶಫೀಕ್ ಮೊಹಮದ್ ಖಾನ್, ಸೇನಾ ಪದಕ ಪುರಸ್ಕೃತ ಕರ್ನಲ್ ರಾಮಮೂರ್ತಿ ಕುಟುಂಬ ಸದಸ್ಯರನ್ನು ಸನ್ಮಾನಿಸಲಾಯಿತು.

ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ನಿರ್ದೇಶನದ ಮೇರೆಗೆ ಕರ್ನಾಟಕ ರಾಜ್ಯ ಪ್ರದೇಶ ಕಾಂಗ್ರೆಸ್ ಸಮಿತಿಯು ಈ ಜೈ ಹಿಂದ್ ಸಭಾ ಕಾರ್ಯಕ್ರಮವನ್ನು ಆಯೋಜಿಸಿತ್ತು. ಈ ಕಾರ್ಯಕ್ರಮದಲ್ಲಿ ಸುಮಾರು ಸಾವಿರಕ್ಕೂ ಹೆಚ್ಚು ಸೇನೆಯ ಹಿರಿಯ ಅಧಿಕಾರಿಗಳು, ಮಾಜಿ ಯೋಧರು ಭಾಗವಹಿಸಿದ್ದರು. ದೇಶಕ್ಕಾಗಿ ನಿಸ್ವಾರ್ಥ ಸೇವೆ ಸಲ್ಲಿಸಿರುವ ಭಾರತೀಯ ಯೋಧರಿಗೆ ನಮನ ಸಲ್ಲಿಸಬೇಕು, ಅವರ ಬೆನ್ನಿಗೆ ನಿಲ್ಲಬೇಕು ಎಂಬ ಉದ್ದೇಶದಿಂದ ಎಐಸಿಸಿಯು ದೇಶದಾದ್ಯಂತ ಈ ಕಾರ್ಯಕ್ರಮ ಆಯೋಜಿಸಲು ನಿರ್ದೇಶನ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com