
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೋನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 42 ಮಂದಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 253ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇಂದು ಕೋವಿಡ್ ನಿಂದ ಒಂದು ಸಾವಿನ ಪ್ರಕರಣ ವರದಿಯಾಗಿದೆ. ಜನವರಿ 2025 ರಿಂದ ಇಲ್ಲಿಯವರೆಗೂ ಒಟ್ಟಾರೇ ಇಬ್ಬರು ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಕೊರೋನಾ ಸಕ್ರಿಯ ಪ್ರಕರಣಗಳ ಸಂಖ್ಯೆ 148 ಆಗಿದ್ದು, 19 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಜನವರಿ 1 ರಿಂದ ಇಲ್ಲಿಯವರೆಗೂ ಒಟ್ಟಾರೇ 103 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಕಳೆದ 24 ಗಂಟೆಯಲ್ಲಿ ಒಟ್ಟು 513 ಪರೀಕ್ಷೆ ಮಾಡಲಾಗಿದೆ. ಈ ಪೈಕಿ 463 RTPCR ಹಾಗೂ 50 RAT ಪರೀಕ್ಷೆ ಆಗಿದ್ದು, ಪಾಸಿಟಿವಿಟಿ ದರ ಶೇ. 8.18 ರಷ್ಟಿದ್ದು, ಸಾವಿನ ದರ ಶೇ. 2.3 ರಷ್ಟಾಗಿದೆ.
Advertisement