ಕೊಡಗಿನಲ್ಲಿ ಭಾರೀ ಮಳೆ-ಪ್ರವಾಹದ ಮುನ್ಸೂಚನೆ: ರೆಡ್ ಅಲರ್ಟ್ ಘೋಷಣೆ; ಶಾಲಾ-ಕಾಲೇಜುಗಳಿಗೆ 2 ದಿನ ರಜೆ

ಪ್ರಸ್ತುತ ವರ್ಷ ಅವಧಿಗೂ ಮುನ್ನ ಕೊಡಗಿನಲ್ಲಿ ಮುಂಗಾರು ಆರಂಭಗೊಂಡು ಇಲ್ಲಿಯವರೆಗೆ 25 ಇಂಚಿಗೂ ಅಧಿಕ ಮಳೆಯಾಗಿದೆ. ಗಾಳಿ ಮಳೆಯ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಸಾರ್ವಜನಿಕ ಆಸ್ತಿಪಾಸ್ತಿಗೂ ಅಪಾರ ಹಾನಿ ಉಂಟಾಗಿದೆ.
File Image
ಸಂಗ್ರಹ ಚಿತ್ರ
Updated on

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ರೆಡ್‌ ಅಲರ್ಟ್ ಘೋಷಿಸಿದೆ, ಪ್ರವಾಹದ ಮುನ್ಸೂಚನೆ ಹಿನ್ನೆಲೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಆಗಮಿಸಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ವ್ಯಾಪಕವಾಗಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆಯು, ಕೆಲ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಿದೆ.

ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಮೇ 29 ಮತ್ತು 30ರಂದು ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ರಜೆ ಘೋಷಿಸಲಾಗಿದೆ. ಕುಶಾಲನಗರ ತಾಲೂಕಿನ ದುಬಾರೆ ಸಾಕಾನೆ ಶಿಬಿರಕ್ಕೆ ತಾತ್ಕಾಲಿಕವಾಗಿ ಪ್ರವಾಸಿಗರ ಪ್ರವೇಶವನ್ನು ನಿರ್ಬಂಸಲಾಗಿದೆ. ದುಬಾರೆ ಸಾಕಾನೆ ಶಿಬಿರಕ್ಕೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿದ್ದು ಶಾಲಾ-ಕಾಲೇಜುಗಳಿಗೆ ಎರಡು ದಿನ ರದೆ ಘೋಷಿಸಲಾಗಿದೆ.

ಪ್ರಸ್ತುತ ವರ್ಷ ಅವಧಿಗೂ ಮುನ್ನ ಕೊಡಗಿನಲ್ಲಿ ಮುಂಗಾರು ಆರಂಭಗೊಂಡು ಇಲ್ಲಿಯವರೆಗೆ 25 ಇಂಚಿಗೂ ಅಧಿಕ ಮಳೆಯಾಗಿದೆ. ಗಾಳಿ ಮಳೆಯ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಸಾರ್ವಜನಿಕ ಆಸ್ತಿಪಾಸ್ತಿಗೂ ಅಪಾರ ಹಾನಿ ಉಂಟಾಗಿದೆ. ಈ ಬೆಳವಣಿಗೆಯಿಂದ ಜಿಲ್ಲೆಯಲ್ಲಿ ಆತಂಕದ ಛಾಯೆ ಮೂಡಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಮಳೆಯಾಗುವ ಸಾಧ್ಯತೆಗಳಿರುವುದರಿಂದ ಜಿಲ್ಲಾಡಳಿತ ಎನ್‌ಡಿಆರ್‌ಎಫ್ ತಂಡವನ್ನು ಅವಧಿಗೂ ಮೊದಲೇ ಜಿಲ್ಲೆಯಲ್ಲಿ ನಿಯೋಜಿಸಿದೆ.

File Image
ಕೊಡಗು, ವಯನಾಡಿನಲ್ಲಿ ಭಾರೀ ಮಳೆ: ಕೃಷ್ಣರಾಜ ಸಾಗರ, ಕಬಿನಿ ಜಲಾಶಯಗಳಿಗೆ ಜೀವಕಳೆ; ಒಳಹರಿವು ಹೆಚ್ಚಳ

ಎನ್‌ಡಿಆರ್‌ಎಫ್ ವೃತ್ತ ನಿರೀಕ್ಷಕ ಹರಿಶ್ಚಂದ್ರ ಪಾಂಡೆ ನೇತೃತ್ವದ 80 ಯೋಧರ ತಂಡ ಬೆಂಗಳೂರಿನಿಂದ ಮಡಿಕೇರಿಗೆ ಆಗಮಿಸಿದ್ದು, ಜನರ ರಕ್ಷಣೆಗೆ ಸನ್ನದ್ಧವಾಗಿದೆ. ಮಡಿಕೇರಿಯ ಮೈತ್ರಿ ಸಭಾಂಗಣದಲ್ಲಿ ಬೀಡು ಬಿಟ್ಟಿರುವ ಯೋಧರು ಗಾಳಿ, ಮಳೆ, ಪ್ರವಾಹ, ಭೂಕುಸಿತದಂತಹ ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸಜ್ಜಾಗಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 62.67 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.05 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 589.33 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 325.90 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 65.83 ಮಿ.ಮೀ. ಕಳೆದ ವರ್ಷ ಇದೇ ದಿನ 0.25 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 806.21 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 447.77 ಮಿ.ಮೀ. ಮಳೆಯಾಗಿತ್ತು.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಮೇ 29ರಂದು ರೆಡ್‌ ಅಲರ್ಟ್‌ ಹಾಗೂ ಉಡುಪಿಗೆ ಆರೆಂಜ್‌ ಅಲರ್ಟ್‌ ನೀಡಲಾಗಿದೆ. ಬೀದರ್‌, ಧಾರವಾಡ, ಹಾವೇರಿ, ಕಲಬುರಗಿ, ಯಾದಗಿರಿ ಜಿಲ್ಲೆಗೆ ಯೆಲ್ಲೊಅಲರ್ಟ್‌ ನೀಡಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಮೇ 30ರಂದು ರೆಡ್‌ ಅಲರ್ಟ್‌ ಮತ್ತು ಉಡುಪಿ, ದಾವಣಗೆರೆ, ಮೈಸೂರು ಜಿಲ್ಲೆಗೆ ಆರೆಂಜ್‌, ತುಮಕೂರು, ಮಂಡ್ಯ, ಚಿತ್ರದುರ್ಗ, ಯಾದಗಿರಿ, ರಾಯಚೂರು, ಕಲಬುರಗಿ, ಬೀದರ್‌ ಜಿಲ್ಲೆಗೆ ಯೆಲ್ಲೊಅಲರ್ಟ್‌ ಘೋಷಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com