
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ 32 ವರ್ಷದ ಮುಸ್ಲಿಂ ವ್ಯಕ್ತಿಯ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಲಾಗಿದೆ.
ಬಂಟ್ವಾಳದಲ್ಲಿ ಅಬ್ದುಲ್ ರಹೀಂ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯೋಗೀಶ್ ಪೂಜಾರಿ ಅವರ ಪುತ್ರ ದೀಪಕ್(21), ಪ್ರಮೋದ್ ರಾಜ್ ಜೋಗಿ ಅವರ ಪುತ್ರ ಪೃಥ್ವಿರಾಜ್(21) ಮತ್ತು ಸುರೇಶ್ ಬೆಲ್ಚಡ ಅವರ ಪುತ್ರ ಚಿಂತನ್(19) ಬಂಧಿತರ ಆರೋಪಿಗಳಾಗಿದ್ದು, ಎಲ್ಲರೂ ಬಂಟ್ವಾಳ ತಾಲೂಕಿನವರಾಗಿದ್ದಾರೆ.
ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ಕಣಪಾಡಿಯಿಂದ ಗುರುವಾರ ಮೂವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಉಳಿದ ಆರೋಪಿಗಳಿಗಾಗಿ ಹುಡುಕಾಟ ಮುಂದುವರೆದಿದೆ.
ಮುಸ್ಲಿಂ ನಾಯಕರಿಂದ ಸಾಮೂಹಿಕ ರಾಜೀನಾಮೆ
ಏತನ್ಮಧ್ಯೆ, ಗುರುವಾರ ಮಂಗಳೂರಿನಲ್ಲಿ ನಡೆದ ಸಭೆಯಲ್ಲಿ, ಜಿಲ್ಲೆಯಲ್ಲಿ ನಡೆಯುತ್ತಿರುವ ಸರಣಿ ಕೊಲೆಗಳನ್ನು ಖಂಡಿಸಿ, ಸರ್ಕಾರದ ವಿರುದ್ಧ ಪ್ರತಿಭಟನೆಯ ಸಂಕೇತವಾಗಿ ಕಾಂಗ್ರೆಸ್ ಪಕ್ಷದ ಮುಸ್ಲಿಂ ನಾಯಕರು ಸಾಮೂಹಿಕ ರಾಜೀನಾಮೆ ನೀಡಿದರು.
ಪಕ್ಷದ ಕಾರ್ಯಕರ್ತರು ಎಲ್ಲಾ ಮುಸ್ಲಿಂ ನಾಯಕರ ರಾಜೀನಾಮೆಗೆ ಒತ್ತಾಯಿಸಿದ್ದರಿಂದ ಸಭೆ ಗೊಂದಲದಲ್ಲಿ ಕೊನೆಗೊಂಡಿತು.
ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಶಾಹುಲ್ ಹಮೀದ್, ಎಂ.ಎಸ್. ಮೊಹಮ್ಮದ್, ಅಬ್ದುಲ್ ರವೂಫ್ ಮತ್ತು ಇತರರು ಸೇರಿದಂತೆ ಪಕ್ಷದ ನಾಯಕರು ತಮ್ಮ ರಾಜೀನಾಮೆಯನ್ನು ಘೋಷಿಸಿದರು. ಅಲ್ಲದೆ ಒಂದು ವಾರದೊಳಗೆ ರಾಜೀನಾಮೆ ಪತ್ರಗಳನ್ನು ಕೆಪಿಸಿಸಿಗೆ ಸಲ್ಲಿಸಲಾಗುವುದು ಎಂದು ಹಮೀದ್ ಹೇಳಿದರು.
ಇದಕ್ಕೂ ಮೊದಲು ಸಭೆಯನ್ನುದ್ದೇಶಿಸಿ ಮಾತನಾಡಿದ ಹಮೀದ್, ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಡಳಿತ ಮತ್ತು ಪೊಲೀಸರು ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ನಿಯಂತ್ರಿಸುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ಆರೋಪಿಸಿದರು.
Advertisement