ಧಾರವಾಡ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ; ಸ್ಥಳದಲ್ಲೇ ಮೂವರ ದುರ್ಮರಣ

ತೋಟ ನೋಡಿಕೊಂಡು ಮುಂಡರಗಿಯಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದಾಗ ದುರ್ಘಟನೆ ಸಂಭವಿಸಿದೆ.
loory and ca accident
ನಿಂತಿದ್ದ ಲಾರಿಗೆ ಕಾರು ಡಿಕ್ಕಿ
Updated on

ಧಾರವಾಡ: ರಸ್ತೆ ಬದಿ ನಿಂತಿದ್ದ ಲಾರಿಗೆ ಅತೀ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಧಾರವಾಡದ ಅಣ್ಣಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ.

ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತಪಟ್ಟವರನ್ನು ಬೆಂಗಳೂರಿನ ವೇಣುಗೋಪಾಲ್ (63) ಹಾಗೂ ಮೈಸೂರಿನ ಸುರೇಶ್ (60) ಹಾಗೂ ಮದನ್ (61) ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ 8.30 ಗಂಟೆ ಸುಮಾರಿನಲ್ಲಿ ಮುಂಡರಗಿಯಿಂದ ಹುಬ್ಬಳ್ಳಿಗೆ ಹೋಗುತ್ತಿದ್ದರು.

ತೋಟ ನೋಡಿಕೊಂಡು ಮುಂಡರಗಿಯಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ಮೃತರು ಮೈಸೂರು ಹಾಗೂ ಬೆಂಗಳೂರಿನವರು ಎಂದು ತಿಳಿದು ಬಂದಿದೆ. ಸುರೇಶ್ ಅವರು ಕಾರು ಚಾಲನೆ ಮಾಡುತ್ತಿದ್ದರು.

ಧಾರವಾಡ ಜಿಲ್ಲೆಯ ಗದಗ-ಹುಬ್ಬಳ್ಳಿ ರಸ್ತೆ, ರಾಷ್ಟ್ರೀಯ ಹೆದ್ದಾರಿ 63ರ ಭದ್ರಾಪುರ ಬಳಿ ಇವರ ಕಾರು ಹೋಗುತ್ತಿದ್ದಾಗ ರಸ್ತೆ ಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಣ್ಣಿಗೇರಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

loory and ca accident
ಬಳ್ಳಾರಿ: ಸಂಡೂರಿನಲ್ಲಿ ಭೀಕರ ಅಪಘಾತ; ಮಹಿಳೆ-ಮಕ್ಕಳು ಸೇರಿ ನಾಲ್ವರು ಸ್ಥಳದಲ್ಲೇ ಸಾವು

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com