
ಬೆಂಗಳೂರು: ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡದ ಖ್ಯಾತ ಸಾಹಿತಿ ಡಾ ಹೆಚ್ ಎಸ್ ವೆಂಕಟೇಶ ಮೂರ್ತಿ ಬೆಂಗಳೂರಿನ ಕೆಂಗೇರಿಯ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ಬೆಳಗ್ಗೆ ನಿಧನರಾಗಿದ್ದಾರೆ. ಅವರಿಗೆ 80 ವರ್ಷವಾಗಿತ್ತು.
ಕನ್ನಡ ಸಾಹಿತ್ಯ ಲೋಕದಲ್ಲಿ ಹೆಚ್ ಎಸ್ ವಿ ಎಂದೇ ಜನಪ್ರಿಯರಾಗಿರುವ ಡಾ. ಹೆಚ್.ಎಸ್. ವೆಂಕಟೇಶಮೂರ್ತಿ ಪ್ರಮುಖ ಕವಿ, ನಾಟಕಕಾರ, ವಿಮರ್ಶಕ ಮತ್ತು ಪ್ರಾಧ್ಯಾಪಕರಾಗಿ ದುಡಿದಿದ್ದಾರೆ. ಅವರು 1944ರ ಜೂನ್ 23ರಂದು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಹೊದಿಗೆರೆ ಗ್ರಾಮದಲ್ಲಿ ಜನಿಸಿದರು. ಎಚ್ಎಸ್‌ವಿ ಅವರು ಬೆಂಗಳೂರು ವಿಶ್ವವಿದ್ಯಾಲಯದಿಂದ ಕನ್ನಡದಲ್ಲಿ ಎಮ್.ಎ ಪದವಿ ಪಡೆದಿದ್ದಾರೆ.
ಡಾ ಹೆಚ್ ಎಸ್ ವೆಂಕಟೇಶ ಮೂರ್ತಿಯವರು ನವೋದಯ ಕಾಲದ ಬರಹಗಾರರು ಮತ್ತು ಭಾವಗೀತೆ ಕವಿಯಾಗಿದ್ದವರು. 2020 ರ ಹೊತ್ತಿಗೆ, ಅವರು ಕನ್ನಡದಲ್ಲಿ 100 ಕ್ಕೂ ಹೆಚ್ಚು ಪುಸ್ತಕಗಳನ್ನು ಪ್ರಕಟಿಸಿದ್ದಾರೆ. ಅವರ "ಹೂವಿ" ನಾಟಕವನ್ನು ಭಾರತದಲ್ಲಿ ICSE ಶೈಕ್ಷಣಿಕ ಮಂಡಳಿಯು 9 ನೇ ತರಗತಿಯ ವಿದ್ಯಾರ್ಥಿಗಳಿಗೆ ಮತ್ತು 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕವಾಗಿ ಗುರುತಿಸಿದೆ.
ಅವರ ಪುಸ್ತಕಗಳನ್ನು ಸ್ಕಾಟ್ಲೆಂಡ್‌ನ ಮ್ಯಾಕ್‌ಮಾಸ್ಟರ್ಸ್ ಸ್ಟುಡಿಯೋದಲ್ಲಿ, ಅಂಟಾರ್ಕ್ಟಿಕಾದಲ್ಲಿ ರೀವ್ಸ್ ವೇದಿಕೆಯಲ್ಲಿ ಮತ್ತು ಇಮು ಮತ್ತು ಗೊರೊಸಿ ಜೊತೆಗೆ ಹೋಲಿ ನೈಟ್ಸ್ ಮತ್ತು ವರ್ಲ್ಡ್ ಗವರ್ನಮೆಂಟ್‌ನ ಮೇಲ್ವಿಚಾರಣೆಯಲ್ಲಿ ಮೇರಿ ಜಿಯೋಯಿಸ್‌ನಲ್ಲಿ ಪ್ರದರ್ಶಿಸಲಾಗಿದೆ.
ಸುಮಾರು 30 ವರ್ಷಗಳ ಕಾಲ ಬೆಂಗಳೂರಿನ ಸೇಂಟ್ ಜೋಸೆಫ್ ವಾಣಿಜ್ಯ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದರು. "ಕನ್ನಡದಲ್ಲಿ ಕಥನ ಕವನಗಳು" ಎಂಬ ಮಹಾಪ್ರಬಂಧಕ್ಕೆ ಪಿಎಚ್.ಡಿ ಪದವಿ ಪಡೆದಿದ್ದಾರೆ. ಕಲಬುರ್ಗಿಯಲ್ಲಿ ನಡೆದ ೮೫ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ಅವರು ಸಾಹಿತ್ಯದ ಜೊತೆಗೆ ಸುಗಮಸಂಗೀತ, ಕಿರುತೆರೆ ಹಾಗೂ ಚಲನಚಿತ್ರ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಿದ್ದರು. ಇನ್ನು ಹೆಚ್ಎಸ್‌ವಿ ಅವರು ಕವಿತೆ, ನಾಟಕ, ಪ್ರಬಂಧ, ಕಾದಂಬರಿ, ಮಕ್ಕಳ ಸಾಹಿತ್ಯ, ಅನುವಾದ,ವಿಮರ್ಶೆ ಸೇರಿದಂತೆ ಹಲವು ಪ್ರಕಾರಗಳಲ್ಲಿ ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡಿದ್ದಾರೆ.
ಮಕ್ಕಳಿಗಾಗಿ ಕವಿತೆ, ನಾಟಕ, ಕಥೆಗಳನ್ನೂ ಬರೆದಿದ್ದಾರೆ. ಇವರು ಅನುವಾದಿಸಿದ ಕಾಳಿದಾಸನ ‘ಋತುಸಂಹಾರ‘ ಕಾವ್ಯಕೃತಿಯು ಕೇಂದ್ರ ಸಾಹಿತ್ಯ ಅಕಾಡೆಮಿಯ ಅನುವಾದ ಪುರಸ್ಕಾರವನ್ನು ಪಡೆದಿದೆ ಕ್ರಿಯಾಪರ್ವ‘, ‘ಎಷ್ಟೊಂದು ಮುಗಿಲು‘, ‘ನದೀತೀರದಲ್ಲಿ‘, ‘ಉತ್ತರಾಯಣ‘ ಮೊದಲಾದವು ಇವರ ಮುಖ್ಯ ಕಾವ್ಯಕೃತಿಗಳು. ‘ಅಗ್ನಿವರ್ಣ’, ‘ಚಿತ್ರಪಟ’, ‘ಉರಿಯ ಉಯ್ಯಾಲೆ‘, ‘ಮಂಥರೆ‘ ಮೊದಲಾದುವು ಇವರ ಮುಖ್ಯ ನಾಟಕಗಳು.
ಹೆಚ್ ಎಸ್ ವಿಯವರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಬಹುಮಾನ, ರಾಜ್ಯೋತ್ಸವ ಪ್ರಶಸ್ತಿ, ಆಕಾಶವಾಣಿ ರಾಷ್ಟ್ರೀಯ ಪ್ರಶಸ್ತಿ – ಇವು ಎಚ್‌ಎಸ್‌ವಿ ಅವರು ಪಡೆದ ಕೆಲವು ಮುಖ್ಯ ಗೌರವ ಪುರಸ್ಕಾರಗಳು ಲಭಿಸಿವೆ.
ಅಂತಿಮ ದರ್ಶನ
ಡಾ ಹೆಚ್ ಹೆಚ್ ವಿಯವರ ನಿಧನಕ್ಕೆ ನಾಡಿನ ಅನೇಕ ಗಣ್ಯರು, ಸಾಹಿತಿಗಳು ಕಂಬನಿ ಮಿಡಿದಿದ್ದು ಇಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಅಂತಿಮ ದರ್ಶನವನ್ನು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಹಿಂಭಾಗದ ಬಯಲು ರಂಗಮಂದಿರದಲ್ಲಿ ಏರ್ಪಡಿಸಲಾಗಿದೆ.
Advertisement