
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಡಾ. ಮಹೇಶ್ ಜೋಶಿ ಅವರಿಗೆ ನೀಡಲಾಗಿದ್ದ ರಾಜ್ಯ ಸಚಿವ ಸ್ಥಾನಮಾನ ಹಾಗೂ ಸವಲತ್ತುಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರ ಹಿಂಪಡೆದಿದೆ.
ಕೆಲವು ಸಾಹಿತಿಗಳು ಮಹೇಶ್ ಜೋಶಿ ಅವರ ಕಾರ್ಯವೈಖರಿ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನದಿಂದ ಅವರನ್ನು ಕೆಳಗಿಳಿಸಬೇಕು ಎಂದು ಕೋರಿದ್ದರು. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಅವರಿಗೆ ನೀಡಿದ್ದ ಸಚಿವ ಸ್ಥಾನಮಾನವನ್ನು ಹಿಂಪಡೆದಿದೆ.
ನಾಡೋಜ ಡಾ. ಮಹೇಶ್ ಜೋಶಿ ಅವರಿಗೆ ನೀಡಲಾಗಿದ್ದ ರಾಜ್ಯ ಸಚಿವ ಸ್ಥಾನಮಾನ ಹಾಗೂ ಸವಲತ್ತುಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಧೀನ ಕಾರ್ಯದರ್ಶಿ-2 ಬಾಣದರಂಗಯ್ಯ ಎನ್.ಆರ್. ಅವರು ಆದೇಶ ಹೊರಡಿಸಿದ್ದಾರೆ.
Advertisement