ಕರಾವಳಿಯಲ್ಲಿ ಮಳೆ ಅವಾಂತರ; ಮೃತರ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ಘೋಷಿಸಿದ ಸಚಿವ ದಿನೇಶ್ ಗುಂಡೂರಾವ್

ಕಳೆದ ವಾರ ಕರಾವಳಿ ಜಿಲ್ಲೆಯಲ್ಲಿ ಮಳೆಯಿಂದಾಗಿ ಅನಾಹುತ ಸಂಭವಿಸಿದ್ದು, ನದಿಗಳು ಉಕ್ಕಿ ಹರಿಯುತ್ತಿವೆ, ಮನೆಗಳು ಜಲಾವೃತವಾಗಿವೆ, ಮರಗಳು ಉರುಳಿವೆ ಮತ್ತು ಮೂಲಸೌಕರ್ಯಗಳಿಗೆ ಹಾನಿಯಾಗಿದೆ.
ದಿನೇಶ್ ಗುಂಡೂರಾವ್
ದಿನೇಶ್ ಗುಂಡೂರಾವ್
Updated on

ಮಂಗಳೂರು: ಕಳೆದ ವಾರ ಕರಾವಳಿ ಪ್ರದೇಶದಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ ಸಾವಿಗೀಡಾದವರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರವನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶನಿವಾರ ಘೋಷಿಸಿದ್ದಾರೆ.

ಮಳೆ ಪೀಡಿತ ಸ್ಥಳಗಳಿಗೆ ಭೇಟಿ ನೀಡಿದ ನಂತರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಚಿವರು, ನಿರಂತರ ಭಾರಿ ಮಳೆಯ ನಡುವೆ ಭೂಕುಸಿತ, ಮನೆ ಕುಸಿತ ಮತ್ತು ಇತರ ಅವಘಡಗಳಿಂದಾಗಿ ಏಳು ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಹೇಳಿದರು.

ಕಳೆದ ವಾರ ಕರಾವಳಿ ಜಿಲ್ಲೆಯಲ್ಲಿ ಮಳೆಯಿಂದಾಗಿ ಅನಾಹುತ ಸಂಭವಿಸಿದ್ದು, ನದಿಗಳು ಉಕ್ಕಿ ಹರಿಯುತ್ತಿವೆ, ಮನೆಗಳು ಜಲಾವೃತವಾಗಿವೆ, ಮರಗಳು ಉರುಳಿವೆ ಮತ್ತು ಮೂಲಸೌಕರ್ಯಗಳಿಗೆ ಹಾನಿಯಾಗಿದೆ. ಮನೆಗಳಿಗೆ ನೀರು ನುಗ್ಗಿದ ನಂತರ ಹಲವಾರು ಕುಟುಂಬಗಳನ್ನು ತಗ್ಗು ಪ್ರದೇಶಗಳಿಂದ ಸ್ಥಳಾಂತರಿಸಲಾಯಿತು.

ಜಿಲ್ಲೆಯಲ್ಲಿನ ಕೋಮು ಉದ್ವಿಗ್ನತೆಯ ವಿಷಯದ ಕುರಿತು ಮಾತನಾಡಿದ ರಾವ್, 'ನಾನು ಕರ್ನಾಟಕ ಸರ್ಕಾರದ ಪ್ರತಿನಿಧಿಯಾಗಿ ಇಲ್ಲಿದ್ದೇನೆ. ನಾವು ಸಮುದಾಯಗಳ ನಡುವೆ ತಾರತಮ್ಯ ಮಾಡುವುದಿಲ್ಲ. ದಕ್ಷಿಣ ಕನ್ನಡದಲ್ಲಿ ಕೋಮು ಸಮಸ್ಯೆಗಳು ಉಲ್ಬಣಗೊಳ್ಳುವುದನ್ನು ತಡೆಯುವುದು ನಮ್ಮ ಏಕೈಕ ಉದ್ದೇಶವಾಗಿದೆ' ಎಂದು ಹೇಳಿದರು.

ದಿನೇಶ್ ಗುಂಡೂರಾವ್
ಏಯ್ ಇವನನ್ನ ಆಚೆ ಕಳ್ಸಿ: ಸುದ್ದಿಗೋಷ್ಠಿ ವೇಳೆ ಮುಸ್ಲಿಂ ಮುಖಂಡನ ವಿರುದ್ಧ ಗುಂಡೂರಾವ್ ಗರಂ

ದ್ವೇಷ ಭಾಷಣಗಳ ಪರಿಣಾಮವಾಗಿ ಕೋಮು ಸೌಹಾರ್ದತೆ ಹದಗೆಡುತ್ತಿದೆ ಮತ್ತು ದ್ವೇಷ ಭಾಷಣ ಮಾಡುವವರನ್ನು ಬಂಧಿಸಬೇಕೆಂದು ಮುಸ್ಲಿಂ ನಾಯಕರೊಬ್ಬರು ಹೇಳಿದಾಗ ಮೊದಲಿಗೆ ಸುಮ್ಮನಿರುವಂತೆ ಸೂಚಿಸಿದ್ದಾರೆ. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಲು ಅವಕಾಶ ನೀಡುವಂತೆ ಅವರಿಗೆ ಸೂಚಿಸಿದ್ದಾರೆ. ಆದರೆ, ಆ ವ್ಯಕ್ತಿ ಸಚಿವರೊಂದಿಗೆ ಜೋರಾಗಿ ವಾಗ್ವಾದ ನಡೆಸಿದಾಗ ಕೋಪಗೊಂಡ ಸಚಿವರು ಆತನನ್ನು ಸಭಾಂಗಣದಿಂದ ಹೊರಗೆ ಕರೆದೊಯ್ಯುವಂತೆ ಭದ್ರತಾ ಸಿಬ್ಬಂದಿಗೆ ಸೂಚಿಸಿದರು.

ಪರಿಸ್ಥಿತಿಯನ್ನು ಕಟ್ಟುನಿಟ್ಟಾಗಿ ಮೇಲ್ವಿಚಾರಣೆ ಮಾಡಲು ಮತ್ತು ಶಾಂತಿ ಕಾಪಾಡಿಕೊಳ್ಳಲು ಪೊಲೀಸರು ಮತ್ತು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com