ಕಲಬುರಗಿ ಡಿಸಿಗೆ ಲಿಖಿತ ಕ್ಷಮೆಯಾಚಿಸುತ್ತೇನೆ: BJP MLC ರವಿಕುಮಾರ್

ನ್ಯಾಯಾಂಗದ ಮೇಲೆ ನನಗೆ ಅತ್ಯುನ್ನತ ಗೌರವವಿದೆ ಮತ್ತು ತನಿಖಾ ಸಂಸ್ಥೆಗಳೊಂದಿಗೆ ಯಾವಾಗಲೂ ಸಹಕರಿಸುತ್ತೇನೆ.
Ravi kumar
ರವಿಕುಮಾರ್
Updated on

ಕಲಬುರಗಿ: ಹೈಕೋರ್ಟ್ ಆದೇಶ ಪಾಲಿಸುತ್ತೇನೆ. ಲಿಖಿತವಾಗಿ ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರ ಬಳಿ ಕ್ಷಮೆಯಾಚಿಸುತ್ತೇನೆಂದು ಬಿಜೆಪಿ ಎಂಎಲ್ಸಿ ಮತ್ತು ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಅವರು ಶುಕ್ರವಾರ ಹೇಳಿದ್ದಾರೆ. ಹೇಳಿದ್ದಾರೆ.

ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ದೂರವಾಣಿ ಮೂಲಕ ಮಾತನಾಡಿದ ಅವರು, ಕಲಬುರಗಿಯ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ನನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಅನ್ನು ಹಿಂಪಡೆಯಲು ನಿರ್ದೇಶನ ಕೋರಿ ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆ ನಡೆಸುವಾಗ, ತನಿಖಾ ಸಂಸ್ಥೆಯೊಂದಿಗೆ ಸಹಕರಿಸಲು ಮತ್ತು ಡಿಸಿಗೆ ಕ್ಷಮೆಯಾಚಿಸಲು ಹೈಕೋರ್ಟ್ ಸೂಚಿಸಿದೆ.

ನ್ಯಾಯಾಂಗದ ಮೇಲೆ ನನಗೆ ಅತ್ಯುನ್ನತ ಗೌರವವಿದೆ ಮತ್ತು ತನಿಖಾ ಸಂಸ್ಥೆಗಳೊಂದಿಗೆ ಯಾವಾಗಲೂ ಸಹಕರಿಸುತ್ತೇನೆ. ಒಂದು ಅಥವಾ ಎರಡು ದಿನಗಳಲ್ಲಿ ನನ್ನ ವಕೀಲರ ಮೂಲಕ ಡಿಸಿಗೆ ಕ್ಷಮೆಯಾಚಿಸುವ ಪತ್ರವನ್ನು ಸಲ್ಲಿಸುವುದಾಗಿ ಹೇಳಿದರು.

ಏತನ್ಮಧ್ಯೆ, ಜೇವರ್ಗಿ ಶಾಸಕ ಡಾ. ಅಜಯ್ ಸಿಂಗ್ ಅವರು ಡಿಸಿ ಬಗ್ಗೆ ರವಿಕುಮಾರ್ ಅವರ ಹೇಳಿಕೆಯನ್ನು ಟೀಕಿಸಿದ್ದಾರೆ.

ಡಿಸಿ ಹುದ್ದೆ ಸಾಂವಿಧಾನಿಕ ಹುದ್ದೆಯಾಗಿದ್ದು, ಎಲ್ಲರೂ ಅದನ್ನು ಗೌರವಿಸಬೇಕು, ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ರವಿಕುಮಾರ್ ಅವರ ಕೌನ್ಸಿಲ್ ಸದಸ್ಯತ್ವವನ್ನು ರದ್ದುಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಮೇ 24 ರಂದು ಕಲಬುರಗಿಯಲ್ಲಿ ನಡೆದ ಬಿಜೆಪಿ ಪ್ರತಿಭಟನೆಯಲ್ಲಿ, ಡಿಸಿ ಕಾಂಗ್ರೆಸ್ ಆದೇಶದ ಮೇರೆಗೆ ಕೆಲಸ ಮಾಡುತ್ತಿದ್ದಾರೆ ಎಂದು ರವಿಕುಮಾರ್ ಆರೋಪಿಸಿದ್ದರು. ಅಲ್ಲದೆ, ಪಾಕಿಸ್ತಾನದಿಂದ ಬಂದಿರುವಂತೆ ಕಾಣುತ್ತಿದೆ ಎಂದು ಹೇಳಿದ್ದರು.

Ravi kumar
ಕಲಬುರಗಿ ಜಿಲ್ಲಾಧಿಕಾರಿ ಅವಹೇಳನ: ರವಿಕುಮಾರ್ ಗೆ​ ಹೈಕೋರ್ಟ್ ತರಾಟೆ; ಕ್ಷಮೆಯಾಚಿಸುವಂತೆ ತಾಕೀತು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com