

ಬೆಳಗಾವಿ: ಕನ್ನಡ ರಾಜ್ಯೋತ್ಸವ ಹಿನ್ನಲೆಯಲ್ಲಿ ಬೆಳಗಾವಿಯಲ್ಲಿ ಸಡಗರ ಸಂಭ್ರಮ ಮನೆ ಮಾಡಿದ್ದರೆ, ಮತ್ತೊಂದೆಡೆ ನಾಡದ್ರೋಹಿ ಮಹಾರಾಷ್ಟ್ರ ಏಕೀಕರಣ ಸಮಿತಿ (MES) ಪುಂಡರು ನಿಷೇಧದ ನಡುವೆಯೂ ಕರಾಳದಿನ ಆಚರಿಸಿದರು. ಕರಾಳದಿನ ಆಚರಿಸಲು ಎಂಇಎಸ್ ಗೆ ಬೆಳಗಾವಿ ಜಿಲ್ಲಾಡಳಿತ ಅನುಮತಿ ನೀಡಿರಲಿಲ್ಲ. ನಿಷೇಧದ ನಡುವೆಯೂ ಬೆಳಗಾವಿಯ ಸಂಭಾಜಿ ವೃತ್ತದಲ್ಲಿ ಎಂಇಎಸ್ ಪುಂಡರು ಕರಾಳದಿನ ಆಚರಣೆ ಮಾಡಿದ್ದಲ್ಲದೇ ಮೆರವಣಿಗೆ ನಡೆಸಿದ್ದಾರೆ. ಈ ಮೆರವಣಿಗೆಗೆ ಬೆಳಗಾವಿ ಪೊಲೀಸರು ಭದ್ರತೆ ಒದಗಿಸಿದ್ದಾರೆ. ಈ ವೇಳೆ ಎಂಇಎಸ್ ಮುಖಂಡ ಶುಭಂ ಸೇಳಕೆ ಜೊತೆಗೆ ನಿಂತು ಬೆಳಗಾವಿಯ ಮಾಳಮಾರುತಿ ಠಾಣೆ ಸಿಪಿಐ ಜೆ.ಎಂ ಕಾಲೆಮಿರ್ಚೆ ತಮ್ಮ ಮೊಬೈಲ್ ನಲ್ಲಿ ಸೆಲ್ಫಿ ತೆಗೆದುಕೊಂಡಿದ್ದಾರೆ. ಪೊಲೀಸ್ ಅಧಿಕಾರಿಯ ಈ ನಡೆ ಈಗ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.
Advertisement