

ಬೆಂಗಳೂರು: ನಗರದ ಶಾಂತಿನಗರ ಬಸ್ ನಿಲ್ದಾಣ ಬಳಿ ಶನಿವಾರ ತಡರಾತ್ರಿ ಭೀಕರ ಅಪಘಾತ ಸಂಭವಿಸಿದೆ. ಸಿಗ್ನಲ್ ನಲ್ಲಿ ಎರಡು ಬೈಕ್ ಗಳಿಗೆ ಆಂಬುಲೆನ್ಸ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಶಾಂತಿನಗರ ಬಸ್ ನಿಲ್ದಾಣ ಬಳಿ ವೇಗವಾಗಿ ಬಂದ ಆ್ಯಂಬುಲೆನ್ಸ್, ಎರಡು ಬೈಕ್ ಗಳಿಗೆ ಹೊಡೆದಿದೆ. ಪರಿಣಾಮ ಇಬ್ಬರು ಬಲಿಯಾಗಿದ್ದಾರೆ. ಘಟನೆಯಲ್ಲಿ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಯಾವುದೇ ರೋಗಿಗಳು ಇಲ್ಲದಿದ್ದರೂ ರಿಚ್ಮಂಡ್ ಸರ್ಕಲ್ ಕಡೆಯಿಂದ ಅತಿ ವೇಗವಾಗಿ ಬಂದ ಆಂಬುಲೆನ್ಸ್ ಡಿಕ್ಕಿ ಹೊಡೆದು ಬೈಕ್ ಅನ್ನು 50 ಮೀಟರ್ ದೂರ ಎಳೆದೊಯ್ದಿದೆ.
ಬೈಕುಗಳಿಗೆ ಆ್ಯಂಬುಲೆನ್ಸ್ ಡಿಕ್ಕಿ ಹೊಡೆದ ಬಳಿಕ ಪೊಲೀಸ್ ಚೌಕಿಗೂ ಡಿಕ್ಕಿ ಹೊಡೆದಿದ್ದಾನೆ. ಬಳಿಕ ಸ್ಥಳದಿಂದ ಕಾಲ್ಕಿತ್ತಿದ್ದಾನೆ. ಘಟನೆಯ ಬಳಿಕ ಆಕ್ರೋಶಗೊಂಡ ಜನಕು ಆ್ಯಂಬುಲೆನ್ಸ್ ದೂಡಿ ಪಲ್ಟಿ ಹೊಡೆಸಿದ್ದಾರೆ.
Advertisement