

ಹೊಸಪೇಟೆ: ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಗಾದಿಗನೂರಿನಲ್ಲಿ ಇತ್ತೀಚಿಗೆ ಗ್ಯಾಸ್ ಸಿಲಿಂಡರ್ ಸ್ಪೋಟದಿಂದ ಮೃತಪಟ್ಟ ಇಬ್ಬರ ಕುಟುಂಬ ಸದಸ್ಯರಿಗೆ ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ವೈಯಕ್ತಿಕವಾಗಿ ಆರ್ಥಿಕ ನೆರವು ನೀಡಿದ್ದಾರೆ.
ಭಾನುವಾರ ಕುಟುಂಬ ಸದಸ್ಯರನ್ನು ಭೇಟಿಯಾದ ಸಚಿವರು, ತಲಾ ರೂ. 10 ಲಕ್ಷ ಆರ್ಥಿಕ ನೆರವು ನೀಡಿದ್ದಾರೆ. ಸೆಪ್ಟೆಂಬರ್ 27 ರಂದು ಸಂಭವಿಸಿದ್ದ ಗ್ಯಾಸ್ ಸಿಲಿಂಡರ್ ಸ್ಪೋಟದಲ್ಲಿ ಕವಿತಾ ಮತ್ತು ಮೈಲಾರಪ್ಪ ಎಂಬುವರು ಮೃತಪಟ್ಟಿದ್ದರು.
ಬಳಿಕ ತೀವ್ರವಾಗಿ ಗಾಯಗೊಂಡು ಬೆಂಗಳೂರಿನಲ್ಲಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮತ್ತಿಬ್ಬರು ಸಾವನ್ನಪ್ಪಿದ್ದರು.
Advertisement