

ಬೆಳಗಾವಿ: ಶಂಕಿತ ಆಹಾರ ವಿಷಾಹರ ಸೇವನೆಯಿಂದಾಗಿ ಬೆಳಗಾವಿ ಜಿಲ್ಲೆಯ ವಸತಿ ಶಾಲೆಯ 12 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಚಿಕ್ಕೋಡಿ ತಾಲ್ಲೂಕಿನ ಹಿರೇಕೋಡಿ ಗ್ರಾಮದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಭಾನುವಾರ ಊಟದ ನಂತರ ವಾಂತಿ ಮತ್ತು ಹೊಟ್ಟೆ ನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ ವಿದ್ಯಾರ್ಥಿಗಳ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗಿದೆ.
ಸ್ಥಳೀಯ ನ್ಯಾಯಾಧೀಶರು ಅದೇ ಶಾಲೆಗೆ ಭೇಟಿ ನೀಡಿ ನೈರ್ಮಲ್ಯ ಮತ್ತು ನಿರ್ವಹಣಾ ವಿಷಯಗಳ ಕುರಿತು ವಾರ್ಡನ್ ಮತ್ತು ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡ ಕೆಲವೇ ದಿನಗಳಲ್ಲಿ ಈ ಘಟನೆ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ.
ಈ ಸಂಬಂಧ ಸದ್ಯ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement