

ಮೈಸೂರು: ಅಕ್ಟೋಬರ್‌ನಲ್ಲಿ ಎರಡು ವಾರಗಳ ಅವಧಿಯಲ್ಲಿ ಮೂವರು ರೈತರು ಸಾವಿಗೀಡಾದ ನಂತರ, ಮೈಸೂರಿನ ಅರಣ್ಯ ಪ್ರದೇಶಗಳಲ್ಲಿ ಸಫಾರಿ ಚಟುವಟಿಕೆಗಳನ್ನು ಕಡಿಮೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ತಿಳಿಸಿದ್ದಾರೆ.
ಅರಣ್ಯ ವಲಯಗಳಲ್ಲಿ ಹೆಚ್ಚುತ್ತಿರುವ ಮಾನವ ಚಟುವಟಿಕೆಯಿಂದಾಗಿ ನೀರು ಮತ್ತು ಆಹಾರವನ್ನು ಅರಸಿ ಕಾಡು ಪ್ರಾಣಿಗಳು ನಾಡಿಗೆ ಬರುತ್ತಿವೆ ಎಂದು ಅವರು ಹೇಳಿದರು.
'ಇದೇನು ಸಂಭವಿಸಿದೆ ಎಂದರೆ ಅರಣ್ಯ ಪ್ರದೇಶದಲ್ಲಿ ಜನರ ಓಡಾಟ ಹೆಚ್ಚಾಗಿದೆ ಮತ್ತು ರೆಸಾರ್ಟ್‌ಗಳು ಬರುತ್ತಿವೆ. ಇದಲ್ಲದೆ, ಸಫಾರಿ ಚಟುವಟಿಕೆಗಳು ಹೆಚ್ಚಿವೆ- ಅದು ಒಂದು ಕಾರಣ. ಹೀಗಾಗಿ, ಕಾಡು ಪ್ರಾಣಿಗಳು ನೀರು ಮತ್ತು ಆಹಾರವನ್ನು ಅರಸಿ ಹಳ್ಳಿಗಳಿಗೆ ಬರುತ್ತಿವೆ ಎಂದು ಸಿದ್ದರಾಮಯ್ಯ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.
'ನಿನ್ನೆ ಅರಣ್ಯ ಅಧಿಕಾರಿಗಳೊಂದಿಗೆ ಸಭೆ ನಡೆದಿತ್ತು. ಶೀಘ್ರದಲ್ಲೇ ಮತ್ತೊಮ್ಮೆ ಸಭೆ ನಡೆಸುತ್ತೇನೆ. ಅಕ್ರಮ ರೆಸಾರ್ಟ್‌ಗಳ ವಿರುದ್ಧ ನಾವು ಕ್ರಮ ಕೈಗೊಳ್ಳುತ್ತೇವೆ ಮತ್ತು ಕಾಡಿನಲ್ಲಿ ಸಫಾರಿ ಚಟುವಟಿಕೆಗಳನ್ನು ಕಡಿಮೆ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ' ಎಂದು ಹೇಳಿದರು.
Advertisement