

ಮಂಡ್ಯ: ಮಂಡ್ಯ ಜಿಲ್ಲೆಯ ಸಗ್ಯ ಗ್ರಾಮದಲ್ಲಿ ತೆಂಗಿನ ಗರಿಗಳನ್ನು ತೆರವುಗೊಳಿಸುವಾಗ ವಿದ್ಯುತ್ ಸ್ಪರ್ಶಿಸಿ ರೈತ ಸಾವಿಗೀಡಾಗಿರುವ ಘಟನೆ ಸಂಭವಿಸಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರ ಪ್ರಕಾರ, ರೈತ ರಮೇಶ್ (38) ಎಂಬುವವರು ತಮ್ಮ ಹೊಲದಲ್ಲಿ ತೆಂಗಿನ ಗರಿಗಳನ್ನು ತೆರವುಗೊಳಿಸುತ್ತಿದ್ದಾಗ ಆಕಸ್ಮಿಕವಾಗಿ 11 ಕೆವಿ ವಿದ್ಯುತ್ ತಂತಿಗಳಿಗೆ ತಗುಲಿವೆ. ಇದರಿಂದ ರಮೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೋತಿ ನಗರ ಪೊಲೀಸ್ ಠಾಣೆಯ ಪೊಲೀಸರು ರಸ್ತೆ ಬದಿಯಲ್ಲಿ ರಮೇಶ್ ಅವರ ದೇಹವು ವಿದ್ಯುತ್ ತಂತಿಗೆ ಸಿಲುಕಿಕೊಂಡಿರುವುದನ್ನು ಗಮನಿಸಿದ್ದಾರೆ ಎಂದು ಎಸ್ಪಿ ಮಲ್ಲಿಕಾರ್ಜುನ್ ಬಾಲದಂಡಿ ತಿಳಿಸಿದ್ದಾರೆ.
ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ.
Advertisement