

ಬೀದರ್: ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ನೀಲಮ್ಮನಳ್ಳಿ ತಾಂಡಾ ಬಳಿ ಇಂದು ಬುಧವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮರಣ ಹೊಂದಿದ್ದಾರೆ. ಕಾರು ಮತ್ತು ಕೊರಿಯರ್ ವಾಹನ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕಾರು ಮತ್ತು ಡಿಟಿಡಿಸಿ ವಾಹನ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರ ಗಾಯಗೊಂಡ ಕಾಶಿನಾಥ, ಪ್ರತಾಪ ಎಂಬುವರನ್ನು ಬೀದರ್ ಬ್ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮೃತರು ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ನಾರಾಯಣಖೇಡ್ ತಾಲೂಕಿನ ಜಗನಾಥಪುರ ಗ್ರಾಮದವರು. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐವರಲ್ಲಿ ನವೀನ್ (25), ರಾಚಪ್ಪ (45) ಹಾಗೂ ನಾಗರಾಜ (40) ಮೃತಪಟ್ಟಿದ್ದಾರೆ ಎಂದು ಕುಟುಂಬದ ಮೂಲದಿಂದ ತಿಳಿದು ಬಂದಿದೆ.
ತೆಲಂಗಾಣದಿಂದ ಕಲಬುರಗಿಯ ಜಿಲ್ಲೆಯ ಗಾಣಗಾಪುರ ದತ್ತಾತ್ರೇಯ ದೇವರ ದರ್ಶನಕ್ಕೆ ತೆರಳಿದ್ದರು. ದೇಗುಲದಿಂದ ವಾಪಸ್ ಹುಮನಾಬಾದ್ ಮಾರ್ಗವಾಗಿ ಊರಿಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಧನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
Advertisement