ರಾಜ್ಯ

SSLC, ದ್ವಿತೀಯ PUC ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

SSLC, ದ್ವಿತೀಯ PUC ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು 2025-26ನೇ ಸಾಲಿನ ದ್ವಿತೀಯ PUC ಮತ್ತು SSLC ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ.

ಅಂತಿಮ ವೇಳಾಪಟ್ಟಿಯ ಪ್ರಕಾರ, ದ್ವಿತೀಯ ಪಿಯುಸಿ ಪರೀಕ್ಷೆಗಳು 2026ರ ಫೆಬ್ರವರಿ 28 ರಂದು ಪ್ರಾರಂಭವಾಗಲಿದ್ದು, ಮಾರ್ಚ್ 17 ರಂದು ಪರೀಕ್ಷೆಗಳು ಮುಕ್ತಾಯಗೊಳ್ಳಲಿವೆ.

ದ್ವಿತೀಯ ಪಿಯುಸಿ ಪರೀಕ್ಷೆಯ ನಂತರ ಎಸ್‌ಎಸ್‌ಎಲ್‌ಸಿ ಪರೀಕ್ಷೆಯು 2026ರ ಮಾರ್ಚ್ 18ರಂದು ಆರಂಭವಾಗಿ ಏಪ್ರಿಲ್ 2ರವರೆಗೆ ನಡೆಯುಲಿವೆ.

2026ನೇ ಸಾಲಿನ ಎಸ್​ಎಸ್​ಎಲ್​​ಸಿ ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆ-1 ಮತ್ತು ಪರೀಕ್ಷೆ-2 ರ ಅಂತಿಮ ವೇಳಾಪಟ್ಟಿಯನ್ನು ಮಂಡಳಿಯ ಜಾಲತಾಣ www.kseab.karnataka.gov.in ನಲ್ಲಿ ಪ್ರಕಟಿಸಲಾಗಿದೆ.

ರಾಜ್ಯದ ಎಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರುಗಳು ಹಾಗೂ ಪ್ರೌಢಶಾಲಾ ಮುಖ್ಯ ಶಿಕ್ಷಕರು ತಮ್ಮ ಶಾಲಾ, ಕಾಲೇಜುಗಳ ಪ್ರಕಟಣಾ ಫಲಕದಲ್ಲಿ (ನೋಟಿಸ್ ಬೋರ್ಡ್​​) ವೇಳಾಪಟ್ಟಿಯನ್ನು ಪ್ರಕಟಿಸಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲು ತಿಳಿಸಿದೆ ಪರೀಕ್ಷಾ ಮಂಡಳಿ ತಿಳಿಸಿದೆ.

ಎಸ್​ಎಸ್​ಎಲ್​ಸಿ ಪರೀಕ್ಷೆಯ ವೇಳಾಪಟ್ಟಿ

  • ಮಾರ್ಚ್ 18 (ಪ್ರಥಮ ಭಾಷೆ)- ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಸಂಸ್ಕೃತ

  • ಮಾರ್ಚ್ 23– ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ಥಾನಿ ಸಂಗೀತ, ಕರ್ನಾಟಕ ಸಂಗೀತ.

  • ಮಾರ್ಚ್ 25 (ದ್ವಿತೀಯ ಭಾಷೆ)– ಇಂಗ್ಲೀಷ್, ಕನ್ನಡ

  • ಮಾರ್ಚ್ 28– ಗಣಿತ, ಸಮಾಜಶಾಸ್ತ್ರ

  • ಮಾರ್ಚ್ 30)ತೃತೀಯ ಭಾಷೆ)– ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಉರ್ದು, ಸಂಸ್ಕೃತ, ಕೊಂಕಣಿ, ತುಳು, ಮರಾಠಿ.

  • ಏಪ್ರಿಲ್ 01– ಅರ್ಥಶಾಸ್ತ್ರ, ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕಲ್ ಇಂಜಿನಿಯರ್, ಎಲಿಮೆಂಟ್ಸ್ ಆಫ್ ಮೆಕ್ಯಾನಕಲ್ ಇಂಜಿನಿಯರ್,

  • ಏಪ್ರಿಲ್ 2- ಸಮಾಜ ವಿಜ್ಞಾನ.

ಪಿಯುಸಿ ಪರೀಕ್ಷೆಯ ವೇಳಾಪಟ್ಟಿ

  • 28-2-2026- ಕನ್ನಡ, ಅರಬಿಕ್

  • 2-3-26-ಭೂಗೋಳಶಾಸ್ತ್ರ, ಮನಶಾಸ್ತ್ರ, ಸಂಖ್ಯಾಶಾಸ್ತ್ರ.

  • 3-3-26- ಇಂಗ್ಲೀಷ್.

  • 4-3-26- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್.

  • 5 -3-26- ಇತಿಹಾಸ.

  • 6-3-26-ಭೌತಶಾಸ್ತ್ರ

  • 7-3-26-ಐಚ್ಛಿಕ ಕನ್ನಡ, ವ್ಯವಹಾರ ಅಧ್ಯಯನ, ಭೂಗರ್ಭಶಾಸ್ತ್ರ

  • 9-3-26- ರಸಾಯನಶಾಸ್ತ್ರ, ಶಿಕ್ಷಣಶಾಸ್ತ್ರ, ಮೂಲಗಣಿತ.

  • 10-3-26- ಅರ್ಥಶಾಸ್ತ್ರ.

  • 11-3-26- ತರ್ಕಶಾಸತ್ರ, ವಿದ್ಯುನ್ಮಾನ ಶಾಸ್ತ್ರ, ಗೃಹವಿಜ್ಞಾನ.

  • 12-3-26-ಹಿಂದಿ.

  • 13-3-26-ರಾಜ್ಯಶಾಸ್ತ್ರ.

  • 14-3-26- ಲೆಕ್ಕಶಾಸ್ತ್ರ, ಗಣಿತ,

  • 16-3-26- ಸಮಾಜಶಾಸ್ತ್ರ, ಜೀವಶಾಸ್ತ್ರ, ಗಣಕವಿಜ್ಞಾನ.

  • 17-3-26- ಹಿಂದೂಸ್ಥಾನಿ ಸಂಗೀತ, ಆಟೋಮೊಬೈಲ್, ಆರೋಗ್ಯ ರಕ್ಷಣೆ, ಬ್ಯೂಟಿ ಅಂಡ್ ವೆಲ್​ನೆಸ್​​.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.