

ಧಾರವಾಡ: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯವು ಬುಧವಾರ ಆಂಧ್ರಪ್ರದೇಶ ರಾಜ್ಯಪಾಲ ಎಸ್. ಅಬ್ದುಲ್ ನಜೀರ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿದೆ.
ಇಂದು ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ರೈತ ಜ್ಞಾನ ಕೇಂದ್ರದಲ್ಲಿ ನಡೆದ ಕಾನೂನು ವಿಶ್ವವಿದ್ಯಾಲಯದ ಏಳನೇ ಘಟಿಕೋತ್ಸವದಲ್ಲಿ ಆಂಧ್ರ ರಾಜ್ಯಪಾಲರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು.
"ಆಂಧ್ರ ಪ್ರದೇಶದ ರಾಜ್ಯಪಾಲ ಎಸ್. ಅಬ್ದುಲ್ ನಜೀರ್ ಅವರಿಗೆ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿದೆ" ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.
ಕರ್ನಾಟಕ ರಾಜ್ಯಪಾಲ ಮತ್ತು ಕೆಎಸ್‌ಎಲ್‌ಯು ಕುಲಾಧಿತಿ ಥಾವರ್ ಚಂದ್ ಗೆಹ್ಲೋಟ್ ಅವರು ಆಂಧ್ರ ರಾಜ್ಯಪಾಲ ನಜೀರ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು.
ಈ ಕಾರ್ಯಕ್ರಮದಲ್ಲಿ ಕಾನೂನು, ನ್ಯಾಯ, ಸಂಸದೀಯ ವ್ಯವಹಾರಗಳು ಸಚಿವ ಎಚ್.ಕೆ. ಪಾಟೀಲ್, ಕಾನೂನು ವಿವಿ ಕುಲಪತಿ ಮತ್ತು ಇತರರು ಭಾಗವಹಿಸಿದ್ದರು.
Advertisement