

ಬೆಳಗಾವಿ: ನಿಷೇಧದ ನಡುವೆಯೂ ಕನ್ನಡ ರಾಜ್ಯೋತ್ಸವ ದಿನದಂದು ಬೆಳಗಾವಿಯಲ್ಲಿ ಎಂಇಎಸ್ ಪುಂಡರು ಕರಾಳ ದಿನ ಎಂದು ಮೆರವಣಿಗೆ ಮಾಡಿದ್ದರು. ಈ ವೇಳೆ ಎಂಇಎಸ್ ಮುಖಂಡ ಶುಭಂ ಸೆಳಕೆ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದ CPI ಅನ್ನು ಎತ್ತಂಗಡಿ ಮಾಡಲಾಗಿದೆ. ಎಂಇಎಸ್ ಮುಖಂಡ ಶುಭಂ ಸೆಳಕೆ ಜೊತೆ ಮಾಳಮಾರುತಿ ಠಾಣೆ ಸಿಪಿಐ ಜೆ.ಎಂ ಕಾಲಿಮಿರ್ಚಿ ಸೆಲ್ಫಿ ಫೋಟೋ ತೆಗೆದುಕೊಂಡಿದ್ದರು. ಇದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಅಲ್ಲೆ ಸಿಪಿಐ ವಿರುದ್ಧ ಕಠಿಣ ಕ್ರಮ ಜರಗಿಸುವಂತೆ ಆಗ್ರಹಗಳು ಕೇಳಿಬಂದಿದ್ದವು. ಇದೀಗ ಸಿಪಿಐ ಕಾಲಿಮಿರ್ಚಿಯನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಯಾವುದೇ ಸ್ಥಳ ನಿಯೋಜನೆ ಮಾಡದೇ ಎತ್ತಂಗಡಿ ಮಾಡಲಾಗಿದ್ದು ಅವರ ಜಾಗಕ್ಕೆ ಸಿಪಿಐ ಬಿ.ಆರ್ ಗಡೇಕರ್ ಅವರನ್ನು ನೇಮಕ ಮಾಡಲಾಗಿದೆ.
Advertisement