ಬಳಕೆದಾರರ ಶುಲ್ಕ ತರ್ಕಬದ್ಧಗೊಳಿಸಿ, ತೆರಿಗೆಯೇತರ ಆದಾಯ ಸೃಜಿಸುವತ್ತ ಗಮನ ಹರಿಸಿ: ಸರ್ಕಾರಕ್ಕೆ RMC ಶಿಫಾರಸು

ರಾಜ್ಯದ ಆರ್ಥಿಕ ಪರಿಸ್ಥಿತಿ ಮತ್ತು ಸುಸ್ಥಿರ ಆರ್ಥಿಕ ಬೆಳವಣಿಗೆ ಬಲಪಡಿಸುವ ಉದ್ದೇಶ ದೊಂದಿಗೆ 2024ರ ಆಗಸ್ಟ್‌ನಲ್ಲಿ ರಚಿಸಲಾದ ಸಂಪನ್ಮೂಲ ಕ್ರೋಢೀಕರಣ ಸಮಿತಿ ಬುಧ ವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತನ್ನ ಅಂತಿಮ ವರದಿ ಸಲ್ಲಿಸಿತು.
CM Siddaramaiah
ಮುಖ್ಯಮಂತ್ರಿಗಳಿಗೆ ವರದಿ ಸಲ್ಲಿಕೆ
Updated on

ಬೆಂಗಳೂರು: ರಾಜ್ಯದ ಆರ್ಥಿಕ ಪರಿಸ್ಥಿತಿ ಮತ್ತು ಸುಸ್ಥಿರ ಆರ್ಥಿಕ ಬೆಳವಣಿಗೆಯನ್ನು ಬಲಪಡಿಸುವ ಉದ್ದೇಶದಿಂದ ರಚಿಸಲಾದ ಸಂಪನ್ಮೂಲ ಕ್ರೋಢೀಕರಣ ಸಮಿತಿಯು ತನ್ನ ಅಂತಿಮ ವರದಿಯನ್ನು ರಾಜ್ಯ ಸರ್ಕಾರಕ್ಕೆ ಗುರುವಾರ ಸಲ್ಲಿಸಿದೆ.

ರಾಜ್ಯದ ಆರ್ಥಿಕ ಪರಿಸ್ಥಿತಿ ಮತ್ತು ಸುಸ್ಥಿರ ಆರ್ಥಿಕ ಬೆಳವಣಿಗೆ ಬಲಪಡಿಸುವ ಉದ್ದೇಶ ದೊಂದಿಗೆ 2024ರ ಆಗಸ್ಟ್‌ನಲ್ಲಿ ರಚಿಸಲಾದ ಸಂಪನ್ಮೂಲ ಕ್ರೋಢೀಕರಣ ಸಮಿತಿ ಬುಧ ವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತನ್ನ ಅಂತಿಮ ವರದಿ ಸಲ್ಲಿಸಿತು.

ಸಮಿತಿಯ ವರದಿಯಲ್ಲಿರುವಂತೆ ಸಾರ್ವಜನಿಕ ಸೇವೆಗಳಲ್ಲಿ ಬಳಕೆದಾರರ ಶುಲ್ಕವನ್ನು ತರ್ಕಬದ್ಧಗೊಳಿಸಬೇಕು. ಸೇವೆ ಬಳಕೆಗೆ ಅನುಗುಣವಾಗಿ ಶುಲ್ಕ ವಿಧಿಸಲು ಪ್ರಮಾಣಾತ್ಮಕ ಬಿಲ್ಲಿಂಗ್ ವ್ಯವಸ್ಥೆ ಜಾರಿಗೊಳಿಸಬೇಕು. ಅದರೊಂದಿಗೆ ಹಣದುಬ್ಬರಕ್ಕೆ ಅನುಗುಣವಾಗಿ ಬಳಕೆದಾರರ ಶುಲ್ಕಗಳನ್ನು ಸ್ವಯಂಚಾಲಿತ ಪರಿಷ್ಕರಣೆ ವ್ಯವಸ್ಥೆ ಅಡಿ ತರಬೇಕು ಎಂದು ತಿಳಿಸಲಾಗಿದೆ.

ಕರ್ನಾಟಕ ರಾಜ್ಯವು, ಭಾರತದ ಇತರೆ ರಾಜ್ಯಗಳಿಗೆ ಹೋಲಿಸಿದರೆ ಅತ್ಯುತ್ತಮ ಆರ್ಥಿಕ ಬೆಳವಣಿಗೆಯನ್ನು ಸಾಧಿಸುತ್ತಿದೆ. ರಾಜ್ಯದ ಒಟ್ಟು ರಾಜಸ್ವ ಸ್ವೀಕೃತಿಗಳಲ್ಲಿ ಸ್ವಂತ ತೆರಿಗೆ ರಾಜಸ್ವದ ಪಾಲು ಶೇ.60-70 ರಷ್ಟಿದ್ದು, ರಾಜ್ಯದ ಪ್ರಮುಖ ಆದಾಯದ ಮೂಲವಾಗಿದೆ. ವಾಣಿಜ್ಯ ತೆರಿಗೆ, ರಾಜ್ಯ ಅಬಕಾರಿ, ನೋಂದಣಿ ಮತ್ತು ಮುದ್ರಾಂಕ ಹಾಗೂ ಮೋಟಾರು ವಾಹನ ತೆರಿಗೆಗಳು ರಾಜ್ಯದ ಸ್ವಂತ ತೆರಿಗೆ ರಾಜಸ್ವದ ಪ್ರಮುಖ ಸ್ವೀಕೃತಿಗಳಾಗಿರುತ್ತದೆ.

CM Siddaramaiah
ದೇಶದ ಆರ್ಥಿಕತೆ ಮೇಲೆ ಮನಮೋಹನ್ ಸಿಂಗ್ ದೊಡ್ಡ ಛಾಪು ಮೂಡಿಸಿದ್ದಾರೆ: ಸಿದ್ದರಾಮಯ್ಯ ಸಂತಾಪ

ತೆರಿಗೆಯೇತರ ಆದಾಯ ಕಡಿಮೆಯಿರುವುದು, ವಿಶೇಷವಾಗಿ ಬಳಕೆದಾರರ ಶುಲ್ಕಗಳು ಹಾಗೂ ಸರ್ಕಾರಿ ಸ್ವತ್ತುಗಳಿಂದ, ಗುತ್ತಿಗೆ ಮತ್ತು ನಗದೀಕರಣದಿಂದ ಹೆಚ್ಚಿನ ರಾಜಸ್ವ ಸೃಜಿಸಲು ವಿಫುಲ ಅವಕಾಶಗಳಿರುತ್ತದೆ. ಆಸ್ತಿ ದತ್ತಾಂಶಗಳ ಉತ್ತಮ ನಿರ್ವಹಣೆ ಮತ್ತು ಸರ್ಕಾರಿ ಆಸ್ತಿಗಳ ವ್ಯವಸ್ಥಿತ ಸಮೀಕ್ಷೆಯ ಅಗತ್ಯವಿರುತ್ತದೆ. ಮಾರ್ಗಸೂಚಿ ದರಗಳು ಮತ್ತು ಆಸ್ತಿ ತೆರಿಗೆಗಳ ಪರಿಷ್ಕರಣೆಯಿಂದಾಗಿ ಸ್ಥಳೀಯ ಸಂಸ್ಥೆಗಳು ರಾಜಸ್ವ ಸೃಜಿಸಬಹುದಾದ ಅವಕಾಶವಿರುತ್ತದೆ.

ತೆರಿಗೆ ಸುಧಾರಣೆ ಮೂಲಕ ಕೆಲ ಪ್ರಮುಖ ರಾಜಸ್ವ ಮೂಲಗಳ ಮೇಲಿನ ಅತಿಯಾದ ಅವಲಂಬನೆಯನ್ನು ಕಡಿಮೆ ಮಾಡುವುದು ಮತ್ತು ತೆರಿಗೆ ವ್ಯಾಪ್ತಿಯನ್ನು ವಿಸ್ತರಿಸುವುದು. ಅಬಕಾರಿ ಇಲಾಖೆಯಲ್ಲಿ ಪಾರದರ್ಶಕತೆ ಮತ್ತು ದಕ್ಷತೆಯನ್ನು ಹೆಚ್ಚಿಸಲು ಹರಾಜು ಆಧಾರಿತ ಡಿಜಿಟಲ್ ಸನ್ನದುಗಳನ್ನು ನೀಡುವುದು. ಸಾರ್ವಜನಿಕ ಸೇವೆಗಳಲ್ಲಿ ಬಳಕೆದಾರ ಶುಲ್ಕಗಳನ್ನು ತರ್ಕಬದ್ಧಗೊಳಿಸುವುದು.

ಪ್ರಮಾಣಾತ್ಮಕ ಬಿಲ್ಲಿಂಗ್ ವ್ಯವಸ್ಥೆಗೆ ಹಂತ ಹಂತವಾಗಿ ಸ್ಥಳಾಂತರಿಸುವುದು ಮತ್ತು ಹಣ ದುಬ್ಬರಕ್ಕೆ ಅನುಗುಣವಾಗಿ ಬಳಕೆದಾರರ ಶುಲ್ಕಗಳನ್ನು ಸ್ವಯಂಚಾಲಿತವಾಗಿ ಪರಿಷ್ಕರಿಸುವ ವ್ಯವಸ್ಥೆಯನ್ನು ರೂಪಿಸುವುದು. ವೈಜ್ಞಾನಿಕ ಆಸ್ತಿ ಮೌಲ್ಯಮಾಪನ, ಸಾರ್ವಜನಿಕ-ಖಾಸಗಿ ಪಾಲುದಾರಿಕೆಗಳ ಅಡಿಯಲ್ಲಿ ಗುತ್ತಿಗೆಯನ್ನು ವಿಸ್ತರಿಸುವುದು ಮತ್ತು ನಗರ ಭೂ-ಸ್ವತ್ತುಗಳನ್ನು ನಗದೀಕರಿಸುವ ಮೂಲಕ ಆದಾಯದ ಸಾಮರ್ಥ್ಯವನ್ನು ಹೆಚ್ಚಿಸುವುದು.

ಸಿಬ್ಬಂದಿ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಮೂಲಕ ಇಲಾಖಾ ಸಾಮರ್ಥ್ಯವನ್ನು ಹೆಚ್ಚಿಸುವುದು, ಆಸ್ತಿ ಸಮೀಕ್ಷೆಗಳನ್ನು ನಿಯತಕಾಲಿಕವಾಗಿ ಮಾಡುವುದು ಮತ್ತು ತೆರಿಗೆಯೇತರ ಆದಾಯ ಮತ್ತು ಆಸ್ತಿ ನಗದೀಕರಣದ ಮೇಲ್ವಿಚಾರಣೆ ಮಾಡಲು ಆರ್ಥಿಕ ಇಲಾಖೆಯಲ್ಲಿ ಆರ್ಥಿಕ ನೀತಿ ವಿಭಾಗವನ್ನು ರಚಿಸುವುದು.

ಮೂಲಸೌಕರ್ಯ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಂತಹ ಬೆಳವಣಿಗೆಯನ್ನು ಉತ್ತೇಜಿಸುವ ಕ್ಷೇತ್ರಗಳಿಗೆ ಅಗತ್ಯ ಅನುದಾನ ಮೀಸಲಿಡುವುದು, ಹಾಗೂ ಪರಿಣಾಮಕಾರಿಯಾಗಿ ವೆಚ್ಚವನ್ನು ನಿರ್ವಹಿಸುವ ಅಗತ್ಯದ ಬಗ್ಗೆ ವಿವರಿಸಲಾಗಿದೆ. ರಾಜ್ಯದ ಸಮಗ್ರ ಮತ್ತು ಸುಸ್ಥಿರ ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸಲು ರಾಜ್ಯದ ರಾಜಸ್ವ ಸಂಗ್ರಹಣೆಯಲ್ಲಿ ವ್ಯವಸ್ಥಿತ ಮತ್ತು ಕ್ರಮಬದ್ಧ ಸುಧಾರಣೆಗಳು ಅತ್ಯಾವಶ್ಯಕವೆಂದು ಸಮಿತಿ ವರದಿಯಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com