ಕಬ್ಬು ಬೆಳೆಗಾರರ ಕಿಚ್ಚು: ಕೇಂದ್ರದ ವಿರುದ್ಧ ಕೈತೋರಿಸಿ ಸಿದ್ದರಾಮಯ್ಯ ಈಗ ಪಲಾಯನವಾದಿಯಾಗಿದ್ದಾರೆ - ಪ್ರಹ್ಲಾದ್‌ ಜೋಶಿ

ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳಲು ಪರದಾಡುತ್ತಾ ಹತಾಶೆಯಲ್ಲಿರುವ ಸಿದ್ದರಾಮಯ್ಯ ಬಾಯಿಗೆ ಬಂದಂತೆ ಮಾತಾನಾಡುತ್ತಾ‌ ರಾಜ್ಯದ ರೈತರು ಮತ್ತು ಜನರನ್ನು ದಾರಿತಪ್ಪಿಸಲು ದುಸ್ಸಾಹಸಕ್ಕೆ ಕೈಹಾಕಿದ್ದಾರೆ.
ಪ್ರಹ್ಲಾದ್‌ ಜೋಶಿ-ಸಿದ್ದರಾಮಯ್ಯ
ಪ್ರಹ್ಲಾದ್‌ ಜೋಶಿ-ಸಿದ್ದರಾಮಯ್ಯ
Updated on

ಬೆಂಗಳೂರು: ಬೆಂಗಳೂರು: ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳಲು ಪರದಾಡುತ್ತಾ ಹತಾಶೆಯಲ್ಲಿರುವ ಸಿದ್ದರಾಮಯ್ಯ ಬಾಯಿಗೆ ಬಂದಂತೆ ಮಾತಾನಾಡುತ್ತಾ‌ ರಾಜ್ಯದ ರೈತರು ಮತ್ತು ಜನರನ್ನು ದಾರಿತಪ್ಪಿಸಲು ದುಸ್ಸಾಹಸಕ್ಕೆ ಕೈಹಾಕಿದ್ದಾರೆ. ಸಿದ್ದರಾಮಯ್ಯ ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಆಲಿಸುವಲ್ಲಿ ವಿಫಲರಾಗಿದ್ದು ಕೇಂದ್ರ ಸರ್ಕಾರದ ಮೇಲೆ ಬೆರಳು ತೋರಿ ಪಲಾಯನವಾದ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದ್ದಾರೆ.

ಸಿದ್ದರಾಮಯ್ಯ ಉಲ್ಲೇಖಿಸಿದ ಸಂಸತ್ತಿನ ಉತ್ತರದಲ್ಲಿ 30.06.25ರವರೆಗಿನ ದತ್ತಾಂಶ ಮಾತ್ರ ಇದೆ. ಆದರೆ ಎಥೆನಾಲ್ ಸರಬರಾಜು ವರ್ಷವು ನವೆಂಬರ್‌ನಿಂದ ಪ್ರಾರಂಭವಾಗಿ ಅಕ್ಟೋಬರ್‌ನಲ್ಲಿ ಕೊನೆಗೊಳ್ಳುತ್ತದೆ. ಸಂಸತ್ತಿನಲ್ಲಿ ನೀಡಲಾದ ದತ್ತಾಂಶವು 30.06.2025ರವರೆಗಿನದ್ದು ಮಾತ್ರ. 2024-25ರಲ್ಲಿ ಕರ್ನಾಟಕದಿಂದ ತೈಲ ಮಾರುಕಟ್ಟೆ ಕಂಪನಿಗಳಿಗೆ (OMC) ಒಟ್ಟು 139.8 ಕೋಟಿ ಲೀಟರ್ ಎಥೆನಾಲ್ ಅನ್ನು ಪೂರೈಸಿವೆ. ಮುಖ್ಯಮಂತ್ರಿಗಳಾಗಿ ತಾವು ಮಾತನಾಡುವ ಮೊದಲು, ದತ್ತಾಂಶಗಳನ್ನ ಸರಿಯಾಗಿ ಅರ್ಥ ಮಾಡಿಕೊಂಡು, ತಮ್ಮ ಅಧಿಕಾರಿಗಳಿಂದ ಸರಿಯಾದ ಮಾಹಿತಿ ಪಡೆದು ಅದನ್ನು ಅರ್ಥಮಾಡಿಕೊಂಡು ನಂತರ ಮಾತನಾಡಬೇಕು ಎಂಬ ಕನಿಷ್ಠ ಪರಿಜ್ಞಾನವೂ ಇಲ್ಲದೆ ಇರುವುದು ನಿಜಕ್ಕೂ ರಾಜ್ಯದ ದುರಂತ ಎಂದು ಪ್ರಹ್ಲಾದ್‌ ಜೋಶಿ ಹೇಳಿದ್ದಾರೆ.

2004-2014ರವರೆಗೆ ಕಬ್ಬು ಬೆಳೆದ ರೈತರಿಗೆ ಸರಿಯಾದ ಸಮಯದಲ್ಲಿ ಹಣ ಪಾವತಿಯಾಗುತ್ತಿರಲಿಲ್ಲ. ಈ ವಿಳಂಬ ಧೋರಣೆಯಿಂದ ರೈತರು ಸಂಕಷ್ಟದಲ್ಲಿದ್ದರು. ಅತಿ ಕಡಿಮೆ FRP/MSP,2005ರಲ್ಲಿಯೇ ಎಥೆನಾಲ್ ಮಿಶ್ರಣದ ಪ್ರಸ್ತಾಪವನ್ನು ಮಾಡಿದ್ದರೂ, ಎಥೆನಾಲ್ ಬಗ್ಗೆ ಕಿಂಚಿತ್ತೂ ಯೋಚನೆಯೂ ಮಾಡಿರಲಿಲ್ಲಾ. 2013-14ರಲ್ಲಿ ಕಬ್ಬು ಬೆಳೆ ಖರೀದಿ 57,104 ಕೋಟಿ ರೂ.ಗಳಷ್ಟಿತ್ತು. ಆದರೆ 2024-25ರ ಮೌಲ್ಯ 1,02,687 ಕೋಟಿ ರೂಪಾಯಿ ಆಗಿದೆ. ಬೆಂಬಲ ಬೆಲೆ (FRP) 2013-14ರಲ್ಲಿ 210 ರೂ.ಗಳಷ್ಟಿತ್ತು. ಆದರೆ 2025-26ರ ಸಕ್ಕರೆ ಹಂಗಾಮಿನಲ್ಲಿ ಶೇ. 10.25ರಷ್ಟು ಚೇತರಿಕೆಯೊಂದಿಗೆ ಕ್ವಿಂಟಲ್‌ಗೆ 355 ರೂಪಾಯಿಗೆ ಏರಿಕೆಯಾಗಿದೆ. ಇದು ನಮ್ಮ‌ ಸರ್ಕಾರದ ಬದ್ದತೆ ಸಿದ್ದರಾಮಯ್ಯನವರೇ. ಹೆಚ್ಚುವರಿ ಸಕ್ಕರೆಯನ್ನು ಸಮತೋಲನಗೊಳಿಸಲು ಎಥೆನಾಲ್ ಮಿಶ್ರಣ ಮಾಡಲಾಗುತ್ತಿದೆ. 2013-14 ರಿಂದ 2024-25 ರವರೆಗೆ ಇಂಧನ ದರ್ಜೆಯ ಎಥೆನಾಲ್ ಉತ್ಪಾದನೆ ಮತ್ತು OMC ಗಳಿಗೆ ಪೂರೈಕೆ 26 ಪಟ್ಟು ಹೆಚ್ಚಾಗಿದೆ.

2013-14 ರಿಂದ ಕಬ್ಬು ಆಧಾರಿತ ಡಿಸ್ಟಿಲರಿಗಳು ಮತ್ತು ಧಾನ್ಯ ಆಧಾರಿತ ಡಿಸ್ಟಿಲರಿಗಳು 2.18 ಲಕ್ಷ ಕೋಟಿ ರೂಪಾಯಿಗಿಂತ ಹೆಚ್ಚು ಆದಾಯವನ್ನು ಗಳಿಸಿವೆ. ಇದರಲ್ಲಿ ಕಬ್ಬು ಆಧಾರಿತ ಡಿಸ್ಟಿಲರಿಗಳು (26.10.2025 ರಂತೆ) OMC ಗಳಿಗೆ ಎಥೆನಾಲ್ ಮಾರಾಟದಿಂದ 1.29 ಲಕ್ಷ ಕೋಟಿ ರೂಪಾಯಿ ಗಳಿಸಿವೆ. ಇದು ಕಬ್ಬಿನ ಗಿರಣಿಗಳಿಗೆ ರೈತರ ಕಬ್ಬಿನ ಬಾಕಿಯನ್ನು ಸಕಾಲಿಕವಾಗಿ ಪಾವತಿಸಲು ಸಹಾಯ ಮಾಡಿದೆ. ರಫ್ತುಗಳನ್ನು ಸಕಾಲಿಕವಾಗಿ ಅನುಮತಿಸಲಾಗಿದೆ. ಸಕ್ಕರೆ ಬೆಲೆಯಲ್ಲಿ ಸಮತೋಲನವನ್ನು ಕಾಯ್ದುಕೊಳ್ಳುವುದು ನಮ್ಮ ಸರ್ಕಾರದ ಬದ್ದತೆ. ಕಳೆದ 10 ವರ್ಷದ ಅವಧಿಯಲ್ಲಿ 10 LMT ಗೆ ಅವಕಾಶ ನೀಡಲಾಗಿತ್ತು. ಈ ವರ್ಷ 15 LMT ಗೆ ಅವಕಾಶ ನೀಡಲಾಗುತ್ತಿದೆ.

ಪ್ರಹ್ಲಾದ್‌ ಜೋಶಿ-ಸಿದ್ದರಾಮಯ್ಯ
ಕಬ್ಬು ಬೆಳೆಗಾರರ ಕಿಚ್ಚು: ಬೆಳಗಾವಿಯಲ್ಲಿ ಪೊಲೀಸರ ಲಾಠಿ ಚಾರ್ಜ್ ವಿರುದ್ಧ ಸಿಡಿದೆದ್ದ ರೈತರು; ಕಲ್ಲು ತೂರಾಟ; ಪರಿಸ್ಥಿತಿ ಉದ್ವಿಗ್ನ!

ಇಡೀ ದೇಶಕ್ಕೆ ‌ಒಂದು ನೀತಿಯನ್ನು ಜಾರಿ ಮಾಡುವುದು ಕೇಂದ್ರ ಸರ್ಕಾರದ ಕೆಲಸ. ನೀವು ರಾಜ್ಯದಲ್ಲಿ ಬೆಳೆಗಾರರ ಬೇಡಿಕೆಯ ಪ್ರಕಾರವಾಗಿ ಕಾರ್ಯನಿರ್ವಹಿಸುವಲ್ಲಿ ವಿಫಲರಾಗಿ ಕೇವಲ ಸುಳ್ಳು ಹೇಳಿಕೊಂಡು, ಸುಳ್ಳಿನ ಮನೆಯನ್ನು ಕರ್ನಾಟಕದಲ್ಲಿ ನಿರ್ಮಿಸಿಕೊಂಡು ಜನರನ್ನು ರೈತರನ್ನು ಬೀದಿಗೆ ತಳ್ಳುವ ನೀಚ ಕೆಲಸ ಮಾಡಿದ್ದೀರಾ. ಅಂದು ವಿರೋಧ ಪಕ್ಷದಲ್ಲಿದ್ದಾಗ ಬೆಲೆ ನಿಗದಿ ಮಾಡಿ, ಆವರ್ತ ನಿಧಿ ಸ್ಥಾಪನೆ ಮಾಡಿ ಎಂದು ಸರ್ಕಾರಗಳಿಗೆ ಬಿಟ್ಟಿ ಸಲಹೆ ನೀಡಿದ ನೀವು, ಇದೀಗ ಅಧಿಕಾರದಲ್ಲಿರುವಾಗ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಿ ಜಾರಿಕೊಳ್ಳುವುದೇ ನಿಮ್ಮ ಮೂಲಭೂತ ಕೆಲಸವಾಗಿದೆಯಾ ಸಿದ್ದರಾಮಯ್ಯನವರೇ? ಗ್ಯಾರಂಟಿಗಳು ಮಾತ್ರನೇ ನಿಮ್ಮ ಸರ್ಕಾರದ ಆಡಳಿತವಾಗಿದೆ ಹೊರೆತು ರಾಜ್ಯದ ಅಭಿವೃದ್ಧಿಯಲ್ಲ. ನಿಮ್ಮ ದುರಾಡಳಿತದ ಪರಮಾವಧಿಯಿಂದಲೇ ಇಂದು ರೈತರು ಬೀದಿಗೆ ಬರುವ ಸ್ಥಿತಿ ನಿರ್ಮಾಣವಾಗಿದೆ ಎಂದು ಪ್ರಹ್ಲಾದ್‌ ಜೋಶಿ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com