

ಬೆಂಗಳೂರು: ಬೆಂಗಳೂರು ಉತ್ತರದಲ್ಲಿ ಪಾಲಿಕೆ ಅಧಿಕಾರಿಗಳು ನಡೆಸಿದ ಸ್ವಚ್ಛತಾ ಅಭಿಯಾನದಲ್ಲಿ ಒಂದೇ ದಿನ 599 ಟನ್ ತ್ಯಾಜ್ಯವನ್ನು ತೆರವುಗೊಳಿಸಲಾಗಿದೆ ಎಂದು ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಅವರು ಶನಿವಾರ ತಿಳಿಸಿದ್ದಾರೆ.
ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ಅಭಿಯಾನ ನಡೆಸಲಾಗಿದ್ದು, ಹೆಬ್ಬಾಳ, ಪುಲಕೇಶಿನಗರ, ಸರ್ವಜ್ಞನಗರ, ಯಲಹಂಕ, ಬ್ಯಾಟರಾಯನಪುರ, ದಾಸರಹಳ್ಳಿ ಮತ್ತು ರಾಜರಾಜೇಶ್ವರಿ ನಗರ ಮುಂತಾದ ಪ್ರದೇಶಗಳಲ್ಲಿ ತ್ಯಾಜ್ಯ ತೆರವುಗೊಳಿಸಲಾಗಿದೆ.
ಅಧಿಕಾರಿಗಳನ್ನು ಮತ್ತಷ್ಟು ಪ್ರೇರೇಪಿಸಲು ಸ್ವಚ್ಛತಾ ಅಭಿಯಾನದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಮೊದಲ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಪ್ರಶಸ್ತಿಗಳನ್ನೂ ನೀಡಲಾಯಿತು.
ಯಲಹಂಕದಲ್ಲಿ ಪ್ರಶಸ್ತಿ ವಿತರಣಾ ಸಮಾರಂಭ ನಡೆದಿದ್ದು, ಈ ವೇಳೆ ಮಾತನಾಡಿದ ಸುನೀಲ್ ಕುಮಾರ್ ಅವರು, ಪರಿಸರವನ್ನು ಸ್ವಚ್ಛವಾಗಿಸಲು ಮತ್ತು ನಾಗರಿಕರಿಗೆ ಗುಣಮಟ್ಟದ ಸೇವೆಗಳನ್ನು ನೀಡಲು ಪಾಲಿಕೆ ಮಹತ್ವದ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಹೇಳಿದರು.
ಇದೇ ವೇಳೆ ನಗರದ ಉತ್ತರ ಪ್ರದೇಶವನ್ನು ಸ್ವಚ್ಛ ಮತ್ತು ಸುಂದರವಾಗಿಸಲು ಪೌರಕಾರ್ಮಿಕರು ಮತ್ತು ಇತರ ಪುರಸಭೆಯ ಸಿಬ್ಬಂದಿಗಳು, ನಿವಾಸಿಗಳ ಸಕ್ರಿಯ ಭಾಗವಹಿಸುವಿಕೆ, ಸಹಕಾರವನ್ನು ಕೋರಿದರು.
Advertisement