ರಾಜ್ಯ ಸರ್ಕಾರ ಎರಡು ವರ್ಷದಲ್ಲಿ ರೂ.1 ಲಕ್ಷ ಕೋಟಿಯನ್ನು ನೇರವಾಗಿ ರಾಜ್ಯದ 'ಜನರ ಜೇಬಿ'ಗೆ ಹಾಕಿದೆ: ಸಿಎಂ ಸಿದ್ದರಾಮಯ್ಯ

ನಮ್ಮದು ಅಭಿವೃದ್ಧಿ ಪರವಾದ ನುಡಿದಂತೆ ನಡೆಯುತ್ತಿರುವ ಸರ್ಕಾರ. ಕಳೆದ ಎರಡು ವರ್ಷಗಳಲ್ಲಿ ಕೂಡ್ಲಿಗಿ‌ ಕ್ಷೇತ್ರಕ್ಕೆ ₹1,750 ಕೋಟಿಗೂ ಅಧಿಕ ಮೊತ್ತದ ಹಣದಲ್ಲಿ ಬೇರೆ ಬೇರೆ ಅಭಿವೃದ್ಧಿ ಕಾರ್ಯಗಳು ನಡೆದಿವೆ.
CM Siddaramaiah
ಸಿಎಂ ಸಿದ್ದರಾಮಯ್ಯ
Updated on

ಬೆಂಗಳೂರು: ರಾಜ್ಯ ಸರ್ಕಾರ ಎರಡು ವರ್ಷದಲ್ಲಿ ಒಂದು ಲಕ್ಷ ಕೋಟಿ ರೂಪಾಯಿಗಳನ್ನು ನೇರವಾಗಿ ರಾಜ್ಯದ ಜನರ ಜೇಬಿಗೆ ಹಾಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಹೇಳಿದ್ದಾರೆ.

ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ 74 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಉದ್ಘಾಟಿಸಿ, ಹಲವು ಅಭಿವೃದ್ಧಿ ಕಾರ್ಯಕ್ರಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಮಾತನಾಡಿದ ಮುಖ್ಯಮಂತ್ರಿ, ನಾವು ನುಡಿದಂತೆ ನಡೆದು ಜನರ ಜೇಬಿಗೆ ಹಣ ಹಂಚುತ್ತಿದ್ದರೆ, ಸುಳ್ಳನ್ನೇ ಮನೆ ದೇವರು ಮಾಡಿಕೊಂಡಿರುವ ಬಿಜೆಪಿಯವರು ಮಾನ ಮರ್ಯಾದೆ ಬಿಟ್ಟು ರಾಜ್ಯದ ಜನರಿಗೆ ಸುಳ್ಳುಗಳನ್ನು ಹಂಚುತ್ತಿದ್ದಾರೆ. ಸುಳ್ಳಿನ ಸರದಾರ ಬಿಜೆಪಿಯವರು ಈಗ ಸಾರ್ವಜನಿಕವಾಗಿ ಹರಾಜಾಗಿದ್ದಾರೆ. ಇವರು ಲಜ್ಜೆಗೆಟ್ಟು ಮತಗಳ್ಳತನಕ್ಕೆ ಇಳಿದು ಸಿಕ್ಕಿ ಬಿದ್ದಿದ್ದಾರೆ ಎಂದರು.

FRP ಮತ್ತು MSP ಎರಡನ್ನೂ ನಿಗದಿ ಮಾಡೋದು ಕೇಂದ್ರದ ಬಿಜೆಪಿ ಸರ್ಕಾರ. ಕಬ್ಬು ಬೆಳೆಗಾರರಿಗೆ ದ್ರೋಹ ಬಗೆದದ್ದು ಪ್ರಹ್ಲಾದ್ ಜೋಶಿ. ಆದರೆ, ವಿಜಯೇಂದ್ರ ತಮ್ಮದೇ ಕೇಂದ್ರ ಸರ್ಕಾರ ಕಬ್ಬು ಬೆಳೆಗಾರರಿಗೆ ಮಾಡಿದ ದ್ರೋಹವನ್ನು ಮರೆಮಾಚಿ ಬೆಳಗಾವಿಗೆ ಹೋಗಿ ಪ್ರತಿಭಟನೆಯ ಡ್ರಾಮಾ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರ ಕಬ್ಬು ಬೆಳೆಗಾರರಿಗೆ ದ್ರೋಹ ಬಗೆದರೂ ರಾಜ್ಯ ಸರ್ಕಾರ ಹೆಚ್ಚುವರಿ ಹಣ ನೀಡಿ ನಮ್ಮ ಕಬ್ಬು ಬೆಳೆಗಾರರನ್ನು ಕಾಪಾಡೊ ಕೆಲಸ ಮಾಡಿದೆ ಎಂದು ವಾಗ್ದಾಳಿ ನಡೆಸಿದರು.

ಶಾಸಕ ಶ್ರೀನಿವಾಸ್, ಸಂಸದ ತುಕಾರಾಂ ಇಬ್ಬರೂ ಜನರ ಅಭಿವೃದ್ಧಿ ಹೊರತಾಗಿ ಬೇರೇನನ್ನೂ ಕೇಳುವವರಲ್ಲ. ಇವರಿಬ್ಬರನ್ನು ಗೆಲ್ಲಿಸಿದ ಜನತೆಗೆ ನಾನು ಧನ್ಯವಾದ ಅರ್ಪಿಸುತ್ತೇನೆ. ಈ ಶಾಸಕರು ಮತ್ತು ಸಂಸದರು ನಿಮ್ಮ ಆಸ್ತಿ ಇದ್ದ ಹಾಗೆ. ಇವರನ್ನು ಕಾಪಾಡಿಕೊಳ್ಳಿ ಎಂದರು.

1,70,000 ಜನರಿಗೆ ಕುಡಿಯುವ ನೀರು ಒದಗಿಸುವ ಜೊತೆಗೆ ಕೂಡ್ಲಿಗಿಯ ಅಂತರ್ಜಲ ವೃದ್ಧಿಗೆ ಶ್ರಮಿಸಿ ಯಶಸ್ವಿಯಾದ ಶಾಸಕ ಶ್ರೀನಿವಾಸ್ ಅವರನ್ನು ಪಡೆದ ಕೂಡ್ಲಿಗಿ ಜನತೆ ಅತ್ಯಂತ ಅದೃಷ್ಟವಂತರು. ಬರಡು ನೆಲ ಕೂಡ್ಲಿಗಿಯನ್ನು ಹಸಿರಿನ ನೆಲವನ್ನಾಗಿ ಮಾಡಲು ಪಣತೊಟ್ಟು ಕೆಲಸ ಮಾಡುತ್ತಿರುವ ಶಾಸಕ ಶ್ರೀನಿವಾಸ್ ಅವರು ಅತ್ಯಂತ ಕ್ರಿಯಾಶೀಲರು. ಇವರಿಂದ ಕ್ಷೇತ್ರದ ಅಭಿವೃದ್ಧಿ ಅತ್ಯಂತ ವೇಗ ಪಡೆದುಕೊಂಡಿದೆ ಎಂದು ತಿಳಿಸಿದರು.

ನಮ್ಮದು ಅಭಿವೃದ್ಧಿ ಪರವಾದ ನುಡಿದಂತೆ ನಡೆಯುತ್ತಿರುವ ಸರ್ಕಾರ. ಕಳೆದ ಎರಡು ವರ್ಷಗಳಲ್ಲಿ ಕೂಡ್ಲಿಗಿ‌ ಕ್ಷೇತ್ರಕ್ಕೆ ₹1,750 ಕೋಟಿಗೂ ಅಧಿಕ ಮೊತ್ತದ ಹಣದಲ್ಲಿ ಬೇರೆ ಬೇರೆ ಅಭಿವೃದ್ಧಿ ಕಾರ್ಯಗಳು ನಡೆದಿವೆ. ಜೊತೆಗೆ ಚುನಾವಣೆ ವೇಳೆ ಘೋಷಿಸಿದ್ದಂತೆ ಐದು ಗ್ಯಾರಂಟಿಗಳನ್ನು ಘೋಷಿಸಿ, ಐದಕ್ಕೆ ಐದನ್ನೂ ಜಾರಿ ಮಾಡಿದ್ದೇವೆ. ರಾಜ್ಯದ ಜನರ ಮನೆ ಬಾಗಿಲಿಗೆ ಪ್ರತೀ ತಿಂಗಳು ಸರ್ಕಾರದ ಗ್ಯಾರಂಟಿಗಳು ತಲುಪುತ್ತಿವೆ‌. 1.20 ಕೋಟಿ ಕುಟುಂಬಗಳ ಮನೆ ಯಜಮಾನಿಯರಿಗೆ ಗೃಹಲಕ್ಷ್ಮಿ ಹಣ ಮತ್ತು ಗೃಹಜ್ಯೋತಿಯ ಸವಲತ್ತು ತಲುಪುತ್ತಿದೆ ಎಂದು ಮುಖ್ಯಮಂತ್ರಿ ಹೇಳಿದರು.

CM Siddaramaiah
ಧರ್ಮ, ಜಾತಿ ಎತ್ತಿ ಕಟ್ಟಿ, ಸಮಾಜ ಒಡೆಯುವವರ ಜೊತೆ ಕೈ ಜೋಡಿಸಬೇಡಿ-ಸಿಎಂ ಸಿದ್ದರಾಮಯ್ಯ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com