

ಬೆಂಗಳೂರು: ದಾಂಪತ್ಯ ಕಲಹಕ್ಕೆ ಜೀವಗಳು ಬಲಿಯಾಗುತ್ತಿರುವ ಪ್ರಕರಣಗಳು ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಹೆಚ್ಚಾಗುತ್ತಿದೆ. ಪತ್ನಿ ಕಿರುಕುಳಕ್ಕೆ ಬೇಸತ್ತು ಪತಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವಂತಹ ಘಟನೆ ಬೆಂಗಳೂರಿನ ಗಿರಿನಗರದಲ್ಲಿ ನಡೆದಿದೆ. ಮೃತನನ್ನು ಬ್ಯಾಂಕ್ ಉದ್ಯೋಗಿ ಗಗನ್ ರಾವ್ ಎಂದು ಗುರುತಿಸಲಾಗಿದೆ. ಎಂಟು ತಿಂಗಳ ಹಿಂದೆ ಮೇಘನಾ ಜತೆ ಗಗನ್ ರಾವ್ ಮದುವೆಯಾಗಿದ್ದರು. ಮದುವೆಯಾದಾಗಿನಿಂದ ದಂಪತಿ ನಡುವೆ ನಿತ್ಯವೂ ಜಗಳ ನಡೆಯುತ್ತಿತ್ತು. ಪತ್ನಿ ಕಿರುಕುಳದಿಂದ ನೊಂದ ಗಗನ್ ರಾವ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪತ್ನಿ ಕಿರುಕುಳದಿಂದಲೇ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಗಗನ್ ರಾವ್ ಸಹೋದರಿ, ಮೇಘನಾ ವಿರುದ್ಧ ದೂರು ನೀಡಿದ್ದಾರೆ.
Advertisement