

ಮಡಿಕೇರಿ: ಕಾವೇರಿ ಮತ್ತು ಲಕ್ಷ್ಮಣ ತೀರ್ಥ ನದಿಗಳಲ್ಲಿನ ಮಾಲಿನ್ಯವನ್ನು ತಗ್ಗಿಸಲು ಕೈಗೊಂಡಿರುವ ಉಪಕ್ರಮಗಳನ್ನು ವಿವರಿಸುವ ಸಮಗ್ರ ವರದಿ ಸಲ್ಲಿಸುವಂತೆ ಕೊಡಗು ಜಿಲ್ಲಾಧಿಕಾರಿಗೆ ರಾಜ್ಯ ಮಾನವ ಹಕ್ಕುಗಳ ಆಯೋಗ ಸೂಚನೆ ನೀಡಿದೆ.
ಜಿಲ್ಲೆಯ ವಿವಿಧ ಪಟ್ಟಣಗಳು ಮತ್ತು ಹಳ್ಳಿಗಳಿಂದ ಸಂಸ್ಕರಿಸದ ತ್ಯಾಜ್ಯ ಮತ್ತು ಕೊಳಚೆ ನೀರನ್ನು ನದಿಗೆ ಬಿಡಲಾಗುತ್ತಿದ್ದು, ಇದರಿಂದಾಗಿ ಭಾರಿ ಮಾಲಿನ್ಯ ಉಂಟಾಗುತ್ತಿದೆ ಎಂದು ಸೇವ್ ಕಾವೇರಿ ಸಂಘಟನೆ ಆಗ್ರಹಿಸಿದೆ.
ಈ ದೂರನ್ನು ಅರಣ್ಯ ಇಲಾಖೆಯ ಮೇಲ್ವಿಚಾರಣೆ ವಹಿಸಿರುವ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ರವಾನಿಸಲಾಗಿದ್ದು, ಮುಖ್ಯ ಕಾರ್ಯದರ್ಶಿಗಳು ತನಿಖೆಗ ಸೂಚಿಸಿದ್ದು, ವಿವರವಾದ ವರದಿಯನ್ನು ಕೋರಿದ್ದಾರೆ.
ಇದೇ ವೇಳೆ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯು ತಪಾಸಣೆ ನಡೆಸಿ ಕಾವೇರಿ ನದಿಯ ಉದ್ದಕ್ಕೂ ಹತ್ತು ವಿಭಿನ್ನ ಸ್ಥಳಗಳಿಂದ ನೀರಿನ ಮಾದರಿಗಳನ್ನು ಸಂಗ್ರಹಿಸಿದೆ.
ಈ ಮಾದರಿಗಳ ಪ್ರಯೋಗಾಲಯ ವಿಶ್ಲೇಷಣೆಗಳು, ವಿಶೇಷವಾಗಿ ಭಾಗಮಂಡಲ, ನಾಪೋಕ್ಲು, ಮೂರ್ನಾಡ್, ಕೊಂಡಂಗೇರಿ, ಸಿದ್ದಾಪುರ ಮತ್ತು ಕೂಡಿಗೆ ಪ್ರದೇಶಗಳಿಂದ ಒಳಚರಂಡಿ ಮತ್ತು ಸಂಸ್ಕರಿಸದ ತ್ಯಾಜ್ಯ ಸೇರಿದಂತೆ ಮಾಲಿನ್ಯಕಾರಕಗಳು ಪತ್ತೆಯಾಗಿದೆ.
ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ನದಿಗಳಿಗೆ ತ್ಯಾಜ್ಯ ಮತ್ತು ಕೊಳಚೆ ನೀರು ಸೇರುವುದನ್ನು ತಡೆಯಲು ಕಠಿಣ ಕ್ರಮಗಳನ್ನು ಜಾರಿಗೆ ತರುವಂತೆ ಜಿಲ್ಲಾಧಿಕಾರಿಯನ್ನು ಒತ್ತಾಯಿಸಿದ್ದಾರೆ. ಅಲ್ಲದೆ, ಏಪ್ರಿಲ್ 27, 2026 ರೊಳಗೆ ಸಮಗ್ರ ವರದಿಯನ್ನು ಸಲ್ಲಿಸುವಂತೆ ಜಿಲ್ಲಾಡಳಿತ ಮಂಡಳಿಗೆ ಸೂಚಿಸಿದ್ದಾರೆ.
Advertisement