

ಬೆಂಗಳೂರು: ನವೆಂಬರ್ 11 ರಂದು ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಪದವಿ ಕಾಲೇಜುಗಳು, ಇಂಜಿನಿಯರಿಂಗ್ ಕಾಲೇಜುಗಳು, ಪಾಲಿಟೆಕ್ನಿಕ್ ಕಾಲೇಜುಗಳು, ಸಾರ್ವಜನಿಕ ವಿಶ್ವವಿದ್ಯಾಲಯಗಳಲ್ಲಿ 'ರಾಷ್ಟ್ರೀಯ ಶಿಕ್ಷಣ ದಿನಾಚರಣೆ'ಯನ್ನು ಆಚರಿಸುವಂತೆ ಕರ್ನಾಟಕದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಆದೇಶ ಹೊರಡಿಸಿದೆ.
ಇಲಾಖೆಯ ಸೂಚನೆಯಂತೆ, ಶಿಕ್ಷಣಕ್ಕೆ ಸಂಬಂಧಿಸಿದ ವಿಷಯಗಳ ಕುರಿತು ವಿಚಾರ ಸಂಕಿರಣಗಳು, ಪ್ರಬಂಧ ಮತ್ತು ಚರ್ಚಾ ಸ್ಪರ್ಧೆಗಳನ್ನು ಆಯೋಜಿಸುವ ಮೂಲಕ ಈ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆಯ
ಇದು ವಿದ್ಯಾರ್ಥಿಗಳು ಪ್ರಸ್ತುತ ಸನ್ನಿವೇಶದಲ್ಲಿ ಶಿಕ್ಷಣ ಮತ್ತು ಅದರ ಮಹತ್ವದ ಬಗ್ಗೆ ತಮ್ಮ ದೃಷ್ಟಿಕೋನ ಮತ್ತು ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಲು ಸಹಾಯ ಮಾಡುತ್ತದೆ.
ಭಾರತದ ಮೊದಲ ಶಿಕ್ಷಣ ಸಚಿವ ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಜನ್ಮದಿನವನ್ನು ಸೆಪ್ಟೆಂಬರ್ 11, 2008 ರಂದು ರಾಷ್ಟ್ರೀಯ ಶಿಕ್ಷಣ ದಿನವನ್ನಾಗಿ ಆಚರಿಸಲು ಭಾರತ ಸರ್ಕಾರ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ರಾಷ್ಟ್ರೀಯ ಶಿಕ್ಷಣ ದಿನವಾಗಿ ಆಚರಿಸಲು ನಿರ್ಧರಿಸಲಾಗಿದೆ.
ನವೆಂಬರ್ 11 ಮೌಲಾನಾ ಅಬುಲ್ ಕಲಾಂ ಆಜಾದ್ ಅವರು ಜನ್ಮದಿನ. ಡಾ.ಮೌಲಾನಾ ಅಬ್ದುಲ್ ಕಲಾಂ ಅಜಾದ್ ರವರು ಸ್ವಾತಂತ್ರ್ಯ ಭಾರತದ ಮೊಟ್ಟ ಮೊದಲ ಶಿಕ್ಷಣ ಸಚಿವರಾಗಿದ್ದರು. ಸ್ವತಂತ್ರ ಭಾರತದ ಮೊದಲ ಶಿಕ್ಷಣ ಸಚಿವರಾಗಿ ಮೌಲಾನಾ ಅಜಾದ್ ರವರು 1947 ರ ಆಗಸ್ಟ್ 15 ರಿಂದ 1958 ರ ಫೆಬ್ರುವರಿ 2 ರವರೆಗೆ ಸೇವೆ ಸಲ್ಲಿಸಿದ್ದರು.
ಡಾ.ಮೌಲಾನಾ ಅಬ್ದುಲ್ ಕಲಾಂ ಅಜಾದ್ ರವರು ಈ ದೇಶದ ಒಬ್ಬ ಸ್ಕಾಲರ್ ಆಗಿಯೂ ಮತ್ತು ಸ್ವಾತಂತ್ರ್ಯ ಚಳುವಳಿಯ ಹೋರಾಟಗಾರರಾಗಿಯೂ ಸಕ್ರಿಯರಾಗಿದ್ದರು. ಭಾರತದ ಪ್ರಪ್ರಥಮ ಶಿಕ್ಷಣ ಸಚಿವರಾಗಿದ್ದ ಸಮಯದಲ್ಲಿ 'ರಾಷ್ಟ್ರೀಯ ಶಿಕ್ಷಣ ನೀತಿ'ಯನ್ನು ಜಾರಿಗೆ ತಂದಿದ್ದರು. ಪೂರ್ವ ಪ್ರಾಥಮಿಕ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ ಕೊಡುಗೆ ನೀಡಿದ್ದರು.
1922 ರಲ್ಲಿ ಇವರಿಗೆ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ 'ಭಾರತರತ್ನ' ನೀಡಿ ಅಜಾದ್‌ರನ್ನು ಗೌರವಿಸಲಾಯಿತು.
Advertisement