

ಕಲಬುರಗಿ: ಮಂಗಳವಾರ ಬೆಳಿಗ್ಗೆ ದ್ವಿಚಕ್ರ ವಾಹನ ಮತ್ತು ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಪುರುಷರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರನ್ನು ಜಿಲ್ಲೆಯ ಕೊಲ್ಲೂರು ಗ್ರಾಮದ ಶರಣಬಸಪ್ಪ (32) ಮತ್ತು ಬಾಗಣ್ಣ (30) ಎಂದು ಗುರುತಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಸರ್ಕಾರಿ ಶಾಲಾ ಶಿಕ್ಷಕರಾಗಿರುವ ಶರಣಬಸಪ್ಪ ಅವರು ಜೇವರ್ಗಿಯಿಂದ ಕಲಬುರಗಿಗೆ ಬಾಗಣ್ಣ ಅವರೊಂದಿಗೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಫರಹತಾಬಾದ್ ಬಳಿ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಾಥಮಿಕ ಪೊಲೀಸ್ ತನಿಖೆಯ ಪ್ರಕಾರ, ಮೋಟಾರ್ ಸೈಕಲ್ ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಸವಾರರಿಬ್ಬರೂ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಲಾರಿ ಚಾಲಕ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾನೆ. ಈ ಸಂಬಂಧ ಪ್ರಕರಣ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement