ಏರೋಸ್ಪೇಸ್ ಪಂಡಿತರ ಕರ್ಮಭೂಮಿ ಬೆಂಗಳೂರು: ಪುಲ್ವಾಮಾ ಘಟನೆ ನಂತರ ಎಚ್ಚೆತ್ತುಕೊಂಡಿದ್ದರೆ ದುರಂತ ಸಂಭವಿಸುತ್ತಿರಲಿಲ್ಲ

ಪ್ರತಿ ವರ್ಷ 1.50 ಲಕ್ಷಕ್ಕೂ ಹೆಚ್ಚು ಎಂಜಿನಿಯರಿಂಗ್ ವಿದ್ಯಾರ್ಥಿಗಳು ರಾಜ್ಯದಿಂದ ಹೊರಹೊಮ್ಮುತ್ತಿದ್ದಾರೆ. ಭಾರತವನ್ನು ಬೆಂಗಳೂರು ಮೂಲಕ ನೋಡಲಾಗುತ್ತಿದೆ" ಎಂದರು.
Dk Shivakumar in 
Speaking at the  Collins Aerospace programme
ಕಾಲಿನ್ಸ್ ಇಂಡಿಯಾ ಆಪರೇಶನ್ ಸೆಂಟರ್ ಕಾರ್ಯಕ್ರಮದಲ್ಲಿ ಡಿ.ಕೆ ಶಿವಕುಮಾರ್
Updated on

ದೇವನಹಳ್ಳಿ: ಜ್ಞಾನ, ತಂತ್ರಜ್ಞಾನದ ನಗರವಾಗಿ ಬೆಂಗಳೂರು ಗುರುತಿಸಿಕೊಂಡಿದೆ. ಏರೋಸ್ಪೇಸ್ ತಂತ್ರಜ್ಞಾನದ ಹಲವಾರು ಪಂಡಿತರು ಬೆಂಗಳೂರನ್ನು ಕರ್ಮಭೂಮಿಯನ್ನಾಗಿ ಮಾಡಿಕೊಂಡಿದ್ದಾರೆಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

ದೇವನಹಳ್ಳಿಯ ಕೆಐಎಡಿಬಿ ಏರೋಸ್ಪೇಸ್ ಪಾರ್ಕ್ ನಲ್ಲಿರುವ ಕಾಲಿನ್ಸ್ ಇಂಡಿಯಾ ಆಪರೇಶನ್ ಸೆಂಟರ್ ನ ಉದ್ಘಾಟನಾ ಸಮಾರಂಭದಲ್ಲಿ ಮಂಗಳವಾರ ಭಾಗವಹಿಸಿ ಮಾತನಾಡಿದರು. ಪ್ರತಿ ವರ್ಷ 1.50 ಲಕ್ಷಕ್ಕೂ ಹೆಚ್ಚು ಎಂಜಿನಿಯರಿಂಗ್ ವಿದ್ಯಾರ್ಥಿಗಳು ರಾಜ್ಯದಿಂದ ಹೊರಹೊಮ್ಮುತ್ತಿದ್ದಾರೆ. ಭಾರತವನ್ನು ಬೆಂಗಳೂರು ಮೂಲಕ ನೋಡಲಾಗುತ್ತಿದೆ" ಎಂದರು.

ನಮ್ಮ ದೇಶದ ಆಗಸದಲ್ಲಿ ಸಾವಿರಾರು ವಿಮಾನಗಳು ಹಾರಾಟ ನಡೆಸುತ್ತಿವೆ. ಆಕಾಶಕ್ಕೆ ಯಾವುದೇ ಮಿತಿಯಿಲ್ಲ. ಈ ಏರೋಸ್ಪೇಸ್ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ಪ್ರಸ್ತುತ ಕಂಪೆನಿಗೆ ಕರ್ನಾಟಕ ಸರ್ಕಾರ ಎಲ್ಲಾ ರೀತಿಯ ಬೆಂಬಲ ನೀಡಲಿದೆ. ಇದರ ಜೊತೆಗೆ ಕರ್ನಾಟಕದ ಎರಡನೇ ಹಾಗೂ ಮೂರನೇ ಹಂತದ ನಗರಗಳಲ್ಲೂ ಕೈಗಾರಿಕೆಗಳ ಸ್ಥಾಪನೆಗೆ ಗಮನ ಹರಿಸಬೇಕು" ಎಂದರು.

ಇಲ್ಲಿನ ಮಾನವ ಸಂಪನ್ಮೂಲ, ಮಣ್ಣು, ವಾತಾವರಣ, ಪರಿಸರವನ್ನು ಆಯ್ಕೆ ಮಾಡಿಕೊಂಡ ಕಾರಣಕ್ಕೆ ನಮಗೆ ಹೆಮ್ಮೆಯಾಗುತ್ತಿದೆ. ಆದ ಕಾರಣಕ್ಕೆ ಕಾಲಿನ್ಸ್ ಏರೋಸ್ಪೇಸ್ ಕಂಪೆನಿಗೆ ಕರ್ನಾಟಕದ ಜನತೆಯ ಪರವಾಗಿ ಧನ್ಯವಾದಗಳನ್ನು ತಿಳಿಸುತ್ತೇನೆ. ಮುಖ್ಯಮಂತ್ರಿಯವರಿಂದ ಹಿಡಿದು ಈ ವಿಚಾರವಾಗಿ ಸಂಬಂಧಿಸಿದ ಎಲ್ಲರೂ ನಿಮ್ಮ ಜೊತೆಗಿದ್ದೇವೆ" ಎಂದರು. ನಮ್ಮ ಸರ್ಕಾರವೂ ಉದ್ಯೋಗದಾತರಿಗೆ ಸದಾ ಬೆಂಬಲ ನೀಡಲಿದೆ. ಯಾವುದೇ ವಿಚಾರವಿದ್ದರೂ ನಾವಿದ್ದೇವೆ. ಸರ್ಕಾರದ ಬಾಗಿಲು ಸದಾ ತೆರೆದಿರುತ್ತದೆ" ಎಂದರು.

Dk Shivakumar in 
Speaking at the  Collins Aerospace programme
ಕೂಡ್ಲಿಗಿ: ಏಳನೇ 'ಗ್ಯಾರಂಟಿ'ಯಾಗಿ ಕೆರೆಗಳಿಗೆ ನೀರು! ಡಿಸಿಎಂ ಡಿ.ಕೆ ಶಿವಕುಮಾರ್

ದೆಹಲಿಯಲ್ಲಿ ನಡೆದಿರುವ ಕಾರು ಸ್ಫೋಟ ಘಟನೆಯನ್ನು ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ. ದೇಶದ ಐಕ್ಯತೆ, ಸಮಗ್ರತೆ, ಶಾಂತಿ ರಕ್ಷಣೆಗೆ ನಾವು ಉಗ್ರ ಚಟುವಟಿಕೆಗಳ ವಿರುದ್ದ ಬಹಳ ಜಾಗರೂಕರಾಗಿ ಇರಬೇಕು ಎಂದು ಶಿವಕುಮಾರ್ ತಿಳಿಸಿದರು. ದೆಹಲಿಯಲ್ಲಾಗಲಿ ಅಥವಾ ಬೇರೆ ಎಲ್ಲೇ ಆಗಲಿ ನಾವು ಎಚ್ಚರಿಕೆಯಿಂದ ಇರಬೇಕು.

ಕರ್ನಾಟಕ ರಾಜ್ಯದ ಭದ್ರತೆ ಬಗ್ಗೆ ಗೃಹ ಸಚಿವರು ಪರಿಶೀಲಿಸುತ್ತಿದ್ದು, ಭದ್ರತೆ ಹೆಚ್ಚಳದ ಬಗ್ಗೆ ಸಿಎಂ ಆದೇಶ ನೀಡಿದ್ದಾರೆ. ಇಡೀ ದೇಶದಲ್ಲಿ ನಾವು ಶಾಂತಿ ಸ್ಥಾಪಿಸಲು ಕ್ರಮ ಕೈಗೊಳ್ಳಬೇಕು. ಈ ಘಟನೆಯನ್ನು ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ. ಈ ಬಗ್ಗೆ ಕೂಡಲೇ ತನಿಖೆ ನಡೆಸಿ, ಸ್ಫೋಟದ ಹಿಂದಿರುವ ಉಗ್ರರಿಗೆ ಶಿಕ್ಷೆ ನೀಡಬೇಕು ಎಂದು ಕೇಂದ್ರದ ಮೇಲೆ ಒತ್ತಡ ಹಾಕುತ್ತೇವೆ ಎಂದು ತಿಳಿಸಿದರು.

ಪುಲ್ವಾಮಾ ಘಟನೆ ನಂತರ ಎಚ್ಚೆತ್ತುಕೊಂಡಿದ್ದರೆ ಈ ಘಟನೆ ಆಗುತ್ತಿರಲಿಲ್ಲ. ಇದು ಗುಪ್ತಚರ ಇಲಾಖೆ ವೈಫಲ್ಯವೇ ಎಂದು ಕೇಳಿದಾಗ, “ಈ ವಿಚಾರದಲ್ಲಿ ಬೇರೆಯವರ ಮೇಲೆ ಆರೋಪ ಮಾಡುವುದಿಲ್ಲ. ಆರೋಪ ಮಾಡುವುದರಿಂದ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ.

ಜನಸಾಮಾನ್ಯರನ್ನು ರಕ್ಷಿಸಿ, ಸರ್ಕಾರದ ಗೌರವ ಉಳಿಸಿಕೊಳ್ಳುವುದೇ ಪರಿಹಾರ. ಸೂಕ್ತ ಸಮಯ ಬಂದಾಗ ನಾವು ಆರೋಪ ಮಾಡುತ್ತೇವೆ. ಈಗ ನಾವು ಆರೋಪ ಮಾಡುವುದಕ್ಕಿಂತ ಜಾಗೃತಿ ಮೂಡಿಸಿ, ಜೀವ, ಜೀವನ ಉಳಿಸಲು ಪ್ರಯತ್ನಿಸಬೇಕು” ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com