ಧರ್ಮಸ್ಥಳ ಕೇಸ್: ತಿಮರೋಡಿ, ಗಿರೀಶ್ ಮಟ್ಟಣನವರ್ ತಂಡಕ್ಕೆ ಹೈಕೋರ್ಟ್ ಶಾಕ್; SIT ತನಿಖೆಗೆ ಅನುಮತಿ!

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಕರ್ತರಾದ ಗಿರೀಶ್ ಮಟ್ಟಣ್ಣವರ್, ಮಹೇಶ್ ಶೆಟ್ಟಿ ತಿಮರೋಡಿ, ಟಿ ಜಯಂತ್ ಮತ್ತು ವಿಠಲಗೌಡ ತಮ್ಮ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
Mahesh Shetty Thimarodi
ಮಹೇಶ್ ತಿಮರೋಡಿ
Updated on

ಬೆಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಕರ್ತರಾದ ಗಿರೀಶ್ ಮಟ್ಟಣ್ಣವರ್, ಮಹೇಶ್ ಶೆಟ್ಟಿ ತಿಮರೋಡಿ, ಟಿ ಜಯಂತ್ ಮತ್ತು ವಿಠಲಗೌಡ ತಮ್ಮ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್ಐಆರ್ 39/2025 ತನಿಖೆಗೆ ಅಕ್ಟೋಬರ್ 30ರಂದು ನೀಡಿದ್ದ ತಡೆಯಾಜ್ಞೆಯನ್ನ ಹೈಕೋರ್ಟ್ ತೆರವುಗೊಳಿಸಿದ್ದು SIT ತನಿಖೆಗೆ ಅನುಮತಿ ನೀಡಿದೆ. ಹೀಗಾಗಿ ಬುರುಡೆ ಗ್ಯಾಂಗ್ ಗೆ ಮತ್ತೆ ಸಂಕಷ್ಟ ಎದುರಾಗಿದೆ.

ಈ ಹಿಂದೆ ಎಫ್‌ಐಆರ್ ರದ್ದುಗೊಳಿಸುವಂತೆ ನಾಲ್ವರು ಹೈಕೋರ್ಟ್ ಮೆಟ್ಟಿಲೇರಿದ್ದರು. ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ತಡೆಯಾಜ್ಞೆ ತೆರವುಗೊಳಿಸಿದ್ದು ಕಾರ್ಯಕರ್ತರಿಗೆ ಯಾವುದೇ ಕಿರುಕುಳವಾಗದಂತೆ ನೋಡಿಕೊಳ್ಳುವಂತೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡಕ್ಕೆ (SIT) ನಿರ್ದೇಶನ ನೀಡಿದರು. ಭಾರತೀಯ ನಾಗರಿಕ ಸುರಕ್ಷಾ ಸಂಹಿತ (BNNS) ಸೆಕ್ಷನ್ 35(3)ರ ಅಡಿಯಲ್ಲಿ ಕಾರ್ಯಕರ್ತರಾದ ಮಹೇಶ್ ಶೆಟ್ಟಿ ತಿಮರೋಡಿ, ಮಟ್ಟಣ್ಣವರ್, ವಿಠಲ ಗೌಡ ಮತ್ತು ಜಯಂತ್ ಟಿ ಅವರಿಗೆ SIT ಈ ಹಿಂದೆ ನೋಟಿಸ್ ಜಾರಿ ಮಾಡಿತ್ತು.

ಪ್ರಕರಣ ಸಂಬಂಧ ಎಸ್‌ಐಟಿ ಪರ ವಾದಿಸಿದ್ದ ವಿಶೇಷ ಅಭಿಯೋಜಕ ಬಿ.ಎನ್.ಜಗದೀಶ್, ಮ್ಯಾಜಿಸ್ಟ್ರೇಟ್ ಅನುಮತಿ ಪಡೆದ ನಂತರವೇ ತನಿಖೆ ನಡೆಸಲಾಗುತ್ತಿದೆ. ಎಸ್‌ಐಟಿ ತನಿಖೆಯನ್ನು ಅರ್ಜಿದಾರರೇ ಹೊಗಳಿದ್ದಾರೆಂದು ನ್ಯಾಯಾಲಕ್ಕೆ ತಿಳಿಸಿದ್ದರು. ಈ ಹಿನ್ನಲೆ ತನಿಖೆಗೆ ನೀಡಿದ್ದ ತಡೆಯಾಜ್ಞೆ ಹೈಕೋರ್ಟ್ ಪೀಠ ತೆರವುಗೊಳಿಸಿದೆ. SIT ತನಿಖೆ ಒಂದು ದೂರಿಗೆ ಸೀಮಿತವಾಗಿಲ್ಲ. ಅದರ ತನಿಖೆಯು ದೀರ್ಘಕಾಲದವರೆಗೆ ನಡೆದಿರಬಹುದಾದ ಅಕ್ರಮ ಸಮಾಧಿಗಳನ್ನು ಒಳಗೊಂಡಿದೆ ಎಂದು ಸರ್ಕಾರ ಹೇಳಿದೆ.

Mahesh Shetty Thimarodi
ಬೆಂಗಳೂರು: ವಿಕಲಚೇತನ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿಯ ಬಂಧನ

ಬಂಗ್ಲೆಗುಡ್ಡೆಯಲ್ಲಿ ಮಾನವ ತಲೆಬುರುಡೆಗಳು ಮತ್ತು ಇತರ ಅವಶೇಷಗಳ ಪತ್ತೆಯು ಮೂಲ ಆರೋಪಗಳಿಂದ ಪ್ರತ್ಯೇಕವಾಗಿ ಪ್ರಕರಣಕ್ಕೆ ಸ್ವತಂತ್ರ ಆಯಾಮಗಳನ್ನು ಸೂಚಿಸುತ್ತದೆ ಎಂದು ಕೋರ್ಟ್ ಗಮನಸೆಳೆದಿದೆ. ಕಾರ್ಯಕರ್ತರಿಗೆ ತಕ್ಷಣದ ಬಂಧನದ ಬೆದರಿಕೆ ಇಲ್ಲ ಎಂದು ರಾಜ್ಯವು ಮತ್ತಷ್ಟು ಸ್ಪಷ್ಟಪಡಿಸಿದೆ. BNNS ನ ಸೆಕ್ಷನ್ 35(3) ರ ಅಡಿಯಲ್ಲಿ ಅಗತ್ಯವಿರುವಂತೆ ಅರ್ಜಿದಾರರು ತನಿಖೆಗೆ ಸಹಕರಿಸಿದರೆ ಬಂಧನದ ಪ್ರಶ್ನೆಯೇ ಇರುವುದಿಲ್ಲ ಎಂದು ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com