ಬೆಂಗಳೂರು: ಜಿಕೆವಿಕೆ ಕೃಷಿ ಮೇಳಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಚಾಲನೆ

ನಮ್ಮ ರೈತರಲ್ಲಿ ಶೇ. 80 ಕ್ಕೂ ಹೆಚ್ಚು ಜನರು ಸಣ್ಣ ಮತ್ತು ಅತಿಸಣ್ಣ ರೈತರಾಗಿದ್ದು, ಎರಡೂವರೆ ಎಕರೆಗಿಂತ ಕಡಿಮೆ ಭೂಮಿ ಹೊಂದಿದ್ದಾರೆ. ನಮ್ಮ ಯೋಜನೆಗಳು ಅವರನ್ನು ಬಲಪಡಿಸುವ ಮತ್ತು ಬೆಂಬಲಿಸುವ ಗುರಿಯನ್ನು ಹೊಂದಿರಬೇಕು.
Agriculture Minister Cheluvarayaswamy and Bengaluru North MP Shobha Karandlaje inaugurated the four day Krishi Mela 2025 in Bengaluru.
ಕೃಷಿ ಸಚಿವ ಚೆಲುವರಾಯಸ್ವಾಮಿ ಮತ್ತು ಸಂಸದೆ ಶೋಭಾ ಕರಂದ್ಲಾಜೆ ಅವರು ನಾಲ್ಕು ದಿನಗಳ ಕೃಷಿ ಮೇಳ 2025ವನ್ನು ಉದ್ಘಾಟಿಸಿದರು.
Updated on

ಬೆಂಗಳೂರು: ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ ಜಿಕೆವಿಕೆ ಆವರಣದಲ್ಲಿ ‘ಸಮೃದ್ಧ ಕೃಷಿ -ವಿಕಸಿತ ಭಾರತ ನೆಲ,ಜಲ ಮತ್ತು ಬೆಳೆ’ ಶೀರ್ಷಿಕೆಯ ಅಡಿಯಲ್ಲಿ ಆಯೋಜಿಸಿರುವ 4 ದಿನಗಳ ಕೃಷಿ ಮೇಳ 2025ಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಚಾಲನೆ ನೀಡಿದರು.

ಕಾರ್ಯಕ್ರಮ ಉದ್ಘಾಟನೆಯ ನಂತರ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು, ಕೃಷಿ ಭಾರತದ ಆರ್ಥಿಕತೆಯ ಬೆನ್ನೆಲುಬಾಗಿ ಉಳಿದಿದೆ ಮತ್ತು 50 ಕೋಟಿಗೂ ಹೆಚ್ಚು ಜನರಿಗೆ ಉದ್ಯೋಗವನ್ನು ಒದಗಿಸುತ್ತದೆ ಎಂದು ಹೇಳಿದರು.

ನಮ್ಮ ಮಕ್ಕಳಿಗೆ ಆಹಾರಕ್ಕಾಗಿ ನಾವು ಆಹಾರವನ್ನು ಆಮದು ಮಾಡಿಕೊಳ್ಳುವ ಕಾಲವಿತ್ತು. ಇಂದು, ನಮ್ಮ ರೈತರ ಅವಿರತ ಪ್ರಯತ್ನಗಳಿಂದಾಗಿ, 140 ಕೋಟಿಗೂ ಹೆಚ್ಚು ಭಾರತೀಯರು ನಮ್ಮ ಸ್ವಂತ ದೇಶದಲ್ಲಿ ಬೆಳೆದ ಆಹಾರವನ್ನು ಸೇವನೆ ಮಾಡುತ್ತಿದ್ದಾರೆ.

ನಮ್ಮ ರೈತರಲ್ಲಿ ಶೇ. 80 ಕ್ಕೂ ಹೆಚ್ಚು ಜನರು ಸಣ್ಣ ಮತ್ತು ಅತಿಸಣ್ಣ ರೈತರಾಗಿದ್ದು, ಎರಡೂವರೆ ಎಕರೆಗಿಂತ ಕಡಿಮೆ ಭೂಮಿ ಹೊಂದಿದ್ದಾರೆ. ನಮ್ಮ ಯೋಜನೆಗಳು ಅವರನ್ನು ಬಲಪಡಿಸುವ ಮತ್ತು ಬೆಂಬಲಿಸುವ ಗುರಿಯನ್ನು ಹೊಂದಿರಬೇಕು. ಕಳೆದ ಏಳು ವರ್ಷಗಳಲ್ಲಿ, 2,000 ಕ್ಕೂ ಹೆಚ್ಚು ಹೊಸ ಬೆಳೆ ಪ್ರಭೇದಗಳನ್ನು ಅಭಿವೃದ್ಧಿಪಡಿಸಲಾಗಿದೆ.

Agriculture Minister Cheluvarayaswamy and Bengaluru North MP Shobha Karandlaje inaugurated the four day Krishi Mela 2025 in Bengaluru.
ಬೆಂಗಳೂರು: ಜಿಕೆವಿಕೆಯಲ್ಲಿ ನವೆಂಬರ್ 14ರಿಂದ ವಾರ್ಷಿಕ ಕೃಷಿ ಮೇಳ

ಅವುಗಳಲ್ಲಿ ಹಲವು ಹವಾಮಾನ-ನಿರೋಧಕ ಮತ್ತು ಹೆಚ್ಚಿನ ಇಳುವರಿ ನೀಡುವ ಬೆಳೆಯಾಗಿವೆ. ನವೀನ ಅಭ್ಯಾಸಗಳು ಮತ್ತು ತಂತ್ರಜ್ಞಾನಗಳಿಗೆ ಹೆಚ್ಚುತ್ತಿರುವ ಬೇಡಿಕೆಯು ರೈತರಿಗೆ ತಮ್ಮ ಸಾಮರ್ಥ್ಯಗಳನ್ನು ಪ್ರದರ್ಶಿಸಲು ಒಂದು ವೇದಿಕೆಯನ್ನು ಒದಗಿಸುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಅವರು ಮಾತನಾಡಿ, ಭಾರತದ ಜನಸಂಖ್ಯೆಯ ಶೇ. 65 ರಷ್ಟು ಜನರು ಇನ್ನೂ ಕೃಷಿಯನ್ನು ಅವಲಂಬಿಸಿದ್ದಾರೆ ಎಂದು ಹೇಳಿದರು. ಇದೇ ವೇಳೆ ಭಾರತದ ಆತ್ಮ ಕೃಷಿಯಲ್ಲಿದೆ ಎಂದ ಅವರು, ರಾಷ್ಟ್ರದ ಹಸಿರು ಕ್ರಾಂತಿಯನ್ನು ಶ್ಲಾಘಿಸಿದರು.

ಉದ್ಘಾಟನಾ ಕಾರ್ಯಕ್ರಮದಲ್ಲಿ ಹೊಸದಾಗಿ ಬಿಡುಗಡೆಯಾದ ಐದು ಹೊಸ ಬೆಳೆ- CNGS-1 (ರಾಗಿ), KBSH-88 (ಸೂರ್ಯಕಾಂತಿ ಹೈಬ್ರಿಡ್), BISH-162 (ಹತ್ತಿ ಹೈಬ್ರಿಡ್), CHNBT-1 (ಕಪ್ಪು ಅರಿಶಿನ), ಮತ್ತು IISR ಪ್ರತಿಭಾ (ಅರಿಶಿನ) - 36 ಹೊಸ ತಂತ್ರಜ್ಞಾನಗಳನ್ನು ಬಿಡುಗಡೆ ಮಾಡಲಾಯಿತು.

ಈ ಸಂದರ್ಭದಲ್ಲಿ, ಕೃಷಿ ಕ್ಷೇತ್ರದಲ್ಲಿನ ಸಾಧನೆಗಳಿಗಾಗಿ ಮೂವರು ಪ್ರಗತಿಪರ ರೈತರಿಗೆ ರಾಜ್ಯ ಮಟ್ಟದ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com