

ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಚಳಿ ಹೆಚ್ಚಾಗುತ್ತಿದ್ದು, ನವೆಂಬರ್ 14 ರಂದು ಬೀದರ್‌ನಲ್ಲಿ ಕನಿಷ್ಠ 10 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.
ರಾಜ್ಯದ ಬಯಲು ಪ್ರದೇಶಗಳಲ್ಲಿ ಇದುವರೆಗೆ ದಾಖಲಾದ ಅತ್ಯಂತ ಕಡಿಮೆ ತಾಪಮಾನ ಇದಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದಲ್ಲದೆ, ಮುಂದಿನ 2 ದಿನಗಳವರೆಗೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ, ವಿಶೇಷವಾಗಿ ಕರ್ನಾಟಕದ ಉತ್ತರ ಒಳನಾಡಿನಲ್ಲಿ ಚಳಿ ಹೆಚ್ಚಾಗಲಿದೆ ಎಂದೂ ಎಚ್ಚರಿಕೆ ನೀಡಿದೆ.
ಬೆಂಗಳೂರು ನಗರದಲ್ಲಿ ಕನಿಷ್ಠ ತಾಪಮಾನ 17.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಎಚ್‌ಎಎಲ್ ವಿಮಾನ ನಿಲ್ದಾಣದ ವೀಕ್ಷಣಾಲಯದಲ್ಲಿ ಕ್ರಮವಾಗಿ 1 ಡಿಗ್ರಿ ಸೆಲ್ಸಿಯಸ್ ಮತ್ತು 0.7 ಡಿಗ್ರಿ ಸೆಲ್ಸಿಯಸ್ ಇಳಿಕೆಯಾಗಿ 16.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಬೆಳಗಾವಿ ವಿಮಾನ ನಿಲ್ದಾಣದ ವೀಕ್ಷಣಾಲಯದಲ್ಲಿ ಕನಿಷ್ಠ 11.6 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಸಾಮಾನ್ಯಕ್ಕಿಂತ 4.8 ಡಿಗ್ರಿ ಸೆಲ್ಸಿಯಸ್ ಕುಸಿತವಾಗಿದೆ. ವಿಜಯಪುರ ಮತ್ತು ಧಾರವಾಡದಲ್ಲಿ ಕ್ರಮವಾಗಿ 12.4 ಮತ್ತು 12 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಮೈಸೂರು ಮತ್ತು ಶಿವಮೊಗ್ಗದಲ್ಲಿ ಕ್ರಮವಾಗಿ 17.8 ಮತ್ತು 15.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ.
ಇನ್ನು ರಾಜ್ಯ ವಿವಿಧೆಡೆ ತಾಪಮಾನ ಇಳಿಕೆಯಾದರು, ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಕೆಲವೆಡೆ ಶುಕ್ರವಾರ ಮತ್ತು ಶನಿವಾರ ತಾಪಮಾನದಲ್ಲಿ ಕೊಂಚ ಏರಿಕೆ ಕಂಡು ಬಂದಿತ್ತು.
ನರಗರದಲ್ಲಿ ಶನಿವಾರ ಗರಿಷ್ಠ ತಾಪಮಾನ 27.7 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಸಾಮಾನ್ಯಕ್ಕಿಂತ 0.1 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಿದೆ.
ರಾಜ್ಯದ ಹೆಚ್ಚಿನ ಭಾಗಗಳಿಗೆ, ವಿಶೇಷವಾಗಿ ಉತ್ತರ ಒಳನಾಡಿನಲ್ಲಿ ತೀವ್ರ ಚಳಿಯ ಎಚ್ಚರಿಕೆಯನ್ನು ನೀಡಲಾಗಿದೆ. ಮುಂದಿನ 24 ಗಂಟೆಗಳ ಕಾಲ ಬೆಂಗಳೂರಿನಲ್ಲಿ, ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ಮಂಜು ಕವಿದ ವಾತಾವರಣದೊಂದಿಗೆ ಮುಂದಿನ ಎರಡು ದಿನಗಳವರೆಗೆ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
Advertisement