

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ಪುಂಡರ ಹಾವಳಿ ಹೆಚ್ಚಾಗಿದ್ದು, ರಸ್ತೆಯಲ್ಲಿ ಸಾಗುತ್ತಿದ್ದವರ ಮೇಲೆ ದಾಳಿ ಮಾಡಿ ದರೋಡೆ ಮಾಡಿರುವ ಘಟನೆ ಶಾಂತಿನಗರದಲ್ಲಿ ನಡೆದಿದೆ.
ಬೆಂಗಳೂರಿನ ಶಾಂತಿನಗರದಲ್ಲಿ ದ್ವಿಚಕ್ರ ವಾಹನದಲ್ಲಿ ಬಂದ ಮೂವರು ದುಷ್ಕರ್ಮಿಗಳು ಸ್ಕೂಟಿಯಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರನ್ನು ಅಡ್ಡಗಟ್ಟಿ ಹಲ್ಲೆ ಮಾಡಿ, ದರೋಡೆ ಮಾಡಿದ್ದಾರೆ. ದುಷ್ಕರ್ಮಿಗಳ ಕೃತ್ಯ ಸ್ಥಳದಲ್ಲಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
ಆಗಿದ್ದೇನು?
ಸ್ಕೂಟಿಯಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರನ್ನು ಮತ್ತೊಂದು ಸ್ಕೂಟಿಯಲ್ಲಿ ಬಂದ ಮೂವರು ದುಷ್ಕರ್ಮಿಗಳು ಅಡ್ಡಗಟ್ಟಿದ್ದಾರೆ. ನಂತರ ಅವರ ಮೇಲೆ ಹಲ್ಲೆ ಮಾಡಿ ದರೋಡೆಗೆ ಯತ್ನಿಸಿದ್ದಾರೆ. ವ್ಯಕ್ತಿಯ ಜೇಬನ್ನು ಪರಿಶೀಲಿಸಿದ ದುಷ್ಕರ್ಮಿಗಳು ಹಣ ಕೀಳಲು ಯತ್ನಿಸಿದ್ದಾರೆ.
ಈ ವೇಳೆ ಸಂತ್ರಸ್ತ ತನ್ನನ್ನು ತಾನು ರಕ್ಷಿಸಿಕೊಳ್ಳಲು ಯತ್ನಿಸಿದ್ದಾರೆ. ಅಷ್ಟರಲ್ಲಿ ಮೂರು ಆಗಂತುಕರ ಪೈಕಿ ಒಬ್ಬ ಕೋಲಿನಿಂದ ಹೊಡೆದಿದ್ದಾನೆ. ದರೋಡೆ ಮಾಡಿದ ನಂತರ ಆಗುಂತಕರ ಗ್ಯಾಂಗ್ ಅಲ್ಲಿಂದ ಪರಾರಿಯಾಗಿದೆ.
ಇದೇ ವಿಡಿಯೋವನ್ನು ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಸಂಸದ ಪಿಸಿ ಮೋಹನ್ ಕೂಡ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ವಿಡಿಯೋವನ್ನು ಹಂಚಿಕೊಂಡಿದ್ದು, ಬೆಂಗಳೂರು ನಗರ ಪೊಲೀಸರ ತಕ್ಷಣವೇ ಕೈಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
Advertisement