

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಶ್ವಾಸಕೋಶದ ಸಮಸ್ಯೆಯಿಂದಾಗಿ ಬೆಂಗಳೂರಿನ ಶೇಷಾದ್ರಿಪುರಂನ ಅಪೋಲೊ ಆಸ್ಪತ್ರೆಗೆ ಪಾರ್ವತಿ ಅವರನ್ನು ದಾಖಲಿಸಲಾಗಿದೆ. ಪಾರ್ವತಿ ಅವರಿಗೆ ತಜ್ಞ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ. ಡಾ. ಬಿಸಿ ಶ್ರೀನಿವಾಸ್ ನೇತೃತ್ವದ ವೈದ್ಯರ ತಂಡ ಐಸಿಯುನಲ್ಲಿ ಪಾರ್ವತಿಗೆ ಚಿಕಿತ್ಸೆ ನೀಡುತ್ತಿದ್ದು ನಾಳೆಯವರೆಗೂ ನಿಗವಹಿಸಲು ಸೂಚಿಸಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ನವದೆಹಲಿಯಲ್ಲಿರುವ ಸಿದ್ದರಾಮಯ್ಯ ವೈದ್ಯರಿಗೆ ಕರೆ ಮಾಡಿ ಪತ್ನಿ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.
Advertisement