Namma Metro: ಬೆಂಗಳೂರು ಮೆಟ್ರೋ ನಿಲ್ದಾಣ ಸ್ಪೋಟಿಸುವ ಬೆದರಿಕೆ; ವ್ಯಕ್ತಿಯ ಬಂಧನ

ಕಾಡುಗೋಡಿ ಬಳಿಯ ಬೆಲ್ತೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಆರೋಪಿಯು ನವೆಂಬರ್ 13 ರಂದು ರಾತ್ರಿ 11. 25 ಕ್ಕೆ ಬಿಎಂಆರ್‌ಸಿಎಲ್‌ಗೆ ಬೆದರಿಕೆ ಇಮೇಲ್ ಕಳುಹಿಸಿದ್ದ.
Bengaluru Metro station
ಬೆಂಗಳೂರು ಮೆಟ್ರೋ ನಿಲ್ದಾಣದ ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (ಬಿಎಂಆರ್‌ಸಿಎಲ್) ಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದಕ್ಕಾಗಿ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿರುವ 62 ವರ್ಷದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ.

ಕಾಡುಗೋಡಿ ಬಳಿಯ ಬೆಲ್ತೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಆರೋಪಿಯು ನವೆಂಬರ್ 13 ರಂದು ರಾತ್ರಿ 11. 25 ಕ್ಕೆ ಬಿಎಂಆರ್‌ಸಿಎಲ್‌ಗೆ ಬೆದರಿಕೆ ಇಮೇಲ್ ಕಳುಹಿಸಿದ್ದ.

ಕರ್ತವ್ಯದ ಸಮಯದ ನಂತರ ತನ್ನ ಮಾಜಿ ಪತ್ನಿಯನ್ನು "ಮಾನಸಿಕವಾಗಿ ಹಿಂಸಿಸಿದರೆ", ಇಲ್ಲಿನ ಮೆಟ್ರೋ ನಿಲ್ದಾಣಗಳಲ್ಲಿ ಒಂದನ್ನು ಸ್ಫೋಟಿಸುವುದಾಗಿ ಮೆಟ್ರೋ ನೌಕರರಿಗೆ ಎಚ್ಚರಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ಘಟನೆಗೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲಾಗಿದ್ದು, ಶಂಕಿತನನ್ನು ಬಂಧಿಸಲಾಗಿದೆ.ಆತ ಮಾನಸಿಕ ಅಸ್ವಸ್ಥರೆಂದು ಕಂಡುಬಂದಿದ್ದು, ನಿಮ್ಹಾನ್ಸ್‌ಗೆ ಕಳುಹಿಸಲಾಗಿದೆ" ಎಂದು ಹೇಳಿದರು.

ಬಿಎಂಆರ್‌ಸಿಎಲ್ ಅಧಿಕಾರಿಯ ದೂರಿನ ಆಧಾರದ ಮೇಲೆ, ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 351 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಮತ್ತು ತನಿಖೆ ಆರಂಭಿಸಲಾಗಿದೆ ಎಂದು ಅವರು ಹೇಳಿದರು.

Bengaluru Metro station
ಬೆಂಗಳೂರು ಸಂಚಾರ ನಿರ್ವಹಣೆ ಇತರ ಮೆಟ್ರೋ ನಗರಗಳಿಗಿಂತ ಉತ್ತಮವಾಗಿದೆ: ಸಚಿವ ಜಿ. ಪರಮೇಶ್ವರ್

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com