

ಬೆಂಗಳೂರು: ಆಸ್ತಿ ತೆರಿಗೆ ಪಾವತಿಸದ ಹಿನ್ನೆಲೆ ನಗರದ ಪ್ರತಿಷ್ಠಿತ ಮಾಲ್ಗಳಲ್ಲಿ ಒಂದಾದ ಮಂತ್ರಿಮಾಲ್ಗೆ ಮತ್ತೆ ಬೀಗ ಬಿದ್ದಿದೆ.
ಈ ಹಿಂದೆಯೂ ಕೋಟ್ಯಂತರ ತೆರಿಗೆ ಪಾವತಿಸದ ಹಿನ್ನೆಲೆಯಲ್ಲಿ ಮಾಲ್ ಅನ್ನು ಸೀಜ್ ಮಾಡಲಾಗಿತ್ತು. ಈ ಬಾರಿಯೂ ತೆರಿಗೆ ಬಾಕಿ ಉಳಿಸಿಕೊಂಡಿರುವ ಹಿನ್ನೆಲೆಯಲ್ಲಿ ಬೀಗ ಜಡಿದಿದ್ದಾರೆ.
ಬರೋಬ್ಬರಿ 30,81,45,600 ರೂ. ತೆರಿಗೆ ಬಾಕಿ ಉಳಿಸಿಕೊಂಡ ಕಾರಣ ಅಧಿಕಾರಿಗಳು ಇಂದು ಬೆಳಗ್ಗೆ ಮಾಲ್ ಅನ್ನು ಸೀಜ್ ಮಾಡಿ ನೋಟಿಸ್ ಕಳುಹಿಸಿದ್ದಾರೆಂದು ತಿಳಿದುಬಂದಿದೆ.
ಮಾಲ್'ಗೆ ಬೀಗ ಹಾಕಿದ್ದರಿಂದ ಮಾಲ್ ಸಿಬ್ಬಂದಿ ಕಂಗಾಲಾಗಿದ್ದಾರೆ. ಇತ್ತ ಮಾರ್ಷಲ್ಸ್ ಮತ್ತು ಪೊಲೀಸರು ಮಾಲ್ ಬಳಿಯೇ ಬೀಡುಬಿಟ್ಟಿದ್ದಾರೆ.
Advertisement