

ಬೆಂಗಳೂರು: ಆರೋಗ್ಯಗದಲ್ಲಿ ಚೇತರಿಕೆ ಕಂಡು ಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಬಿ.ಎಂ. ಪಾರ್ವತಿ ಅವರನ್ನು ಮಂಗಳವಾರ ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಯ ತೀವ್ರ ನಿಗಾ ಘಟಕದಿಂದ (ಐಸಿಯು) ಸಾಮಾನ್ಯ ವಾರ್ಡ್‌ಗೆ ಸ್ಥಳಾಂತರಿಸಲಾಗಿದೆ.
ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಪಾರ್ವತಿ ಅವರನ್ನು ಸೋಮವಾರ ಆಸ್ಪತ್ರೆಗೆ ದಾಖಲಿಸಲಾಯಿತು. ಶ್ವಾಸಕೋಶದ ಎಡಿಮಾ ಇರುವುದು ಪತ್ತೆಯಾದ ನಂತರ ಐಸಿಯುಗೆ ವರ್ಗಾಯಿಸಲಾಯಿತು.
ಹಿರಿಯ ಸಲಹೆಗಾರ ಡಾ. ಬಿ.ಸಿ. ಶ್ರೀನಿವಾಸ್ ಅವರ ತಂಡ ಪಾರ್ವತಿ ಅವರಿಗೆ ಚಿಕಿತ್ಸೆ ನೀಡಿದ್ದರು. ಅವರ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದ ಹಿನ್ನೆಲೆಯಲ್ಲಿ ವಾರ್ಡ್ ಗೆ ಶಿಫ್ಟ್ ಮಾಡಲಾಗಿದ್ದು. ವೈದ್ಯಕೀಯ ನಿಗಾದಲ್ಲಿ ಇರಿಸಲಾಗಿದೆ.
ಪಾರ್ವತಿ ಅವರ ಆರೋಗ್ಯ ಸ್ಥಿತಿ ಈಗ ಸ್ಥಿರವಾಗಿದೆ. ಅರಸಿಕೆರೆ ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರು ಮುಖ್ಯಮಂತ್ರಿ ಅವರ ಮಗ ಯತೀಂದ್ರ ಅವರನ್ನು ಭೇಟಿ ಮಾಡಿ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಿದ್ದಾರೆ.
Advertisement