ಬೆಂಗಳೂರಿನಲ್ಲಿ ಹಾಡಹಗಲೇ 7 ಕೋಟಿ ರೂ ಹಣ ದರೋಡೆ; ಗ್ಯಾಂಗ್ ಪರಾರಿ! Video

ಇನ್ನೋವಾ ಕಾರಿನಲ್ಲಿ ಬಂದ ದರೋಡೆಕೋರರ ಗ್ಯಾಂಗ್ ಏಕಾಏಕಿ ಎಟಿಎಂಗೆ ಹಣ ಹಾಕಲು ಹೊರಟಿದ್ದ ವಾಹನ ತಡೆದು 7.11 ಕೋಟಿ ರೂಪಾಯಿ ಹಣ ದರೋಡೆ ಮಾಡಿ ಪರಾರುಯಾಗಿದೆ.
Men posing as govt officials intercept cash van, flee with cash
Updated on

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹಾಡಹಗಲೇ ಜನನಿಬಿಡ ರಸ್ತೆಯಲ್ಲಿ ಬರೋಬ್ಬರಿ 7 ಕೋಟಿ 11 ಲಕ್ಷ ರೂಪಾಯಿ ನಗದು ದರೋಡೆ ಮಾಡಿ ಪರಾರಿಯಾಗಿರುವ ಘಟನೆ ಬುಧವಾರ ನಡೆದಿದೆ.

ಇಂದು ಮಧ್ಯಾಹ್ನ ಜಯದೇವ ಡೇರಿ ಸರ್ಕಲ್ ಬಳಿ ದರೋಡೆ ನಡೆದಿದ್ದು, ಇನ್ನೋವಾ ಕಾರಿನಲ್ಲಿ ಬಂದ ದರೋಡೆಕೋರರ ಗ್ಯಾಂಗ್ ಏಕಾಏಕಿ ಎಟಿಎಂಗೆ ಹಣ ಹಾಕಲು ಹೊರಟಿದ್ದ ವಾಹನ ತಡೆದು 7.11 ಕೋಟಿ ರೂಪಾಯಿ ಹಣ ದರೋಡೆ ಮಾಡಿ ಪರಾರುಯಾಗಿದೆ.

ಬೆಂಗಳೂರಿನ ಸುದ್ದಗುಂಟೆಪಾಳ್ಯ ಠಾಣೆ ವ್ಯಾಪ್ತಿಯಲಿ ಘಟನೆ ನಡೆದಿದೆ.

ಇನ್ನೋವಾ ಕಾರಿನಲ್ಲಿ ಬಂದಿದ್ದ 7-8 ಜನರ ಗ್ಯಾಂಗ್, ಎಟಿಎಂಗೆ ಹಣ ಹಾಕಲು ಹೊರಟಿದ್ದ ವಾಹನ ತಡೆದು ಬರೋಬ್ಬರಿ 7.11 ಕೋಟಿ ರೂ ದೋಚಿ ಪರಾರಿಯಾಗಿದ್ದಾರೆ.

ಸೌತ್ ಎಂಡ್ ಸರ್ಕಲ್ ಬಳಿಯ ಎಟಿಎಂ ಕಡೆ ಹೊರಟಿದ್ದ ಹಣ ಇದ್ದ ವಾಹನವನ್ನು ಜಯದೇವ ಡೇರಿ ಸರ್ಕಲ್​​ನ ಬಳಿ ತಡೆದ ಗ್ಯಾಂಗ್, ನಾವು ಆರ್​​ಬಿಐನವರು ಎಂದು ಹೇಳಿಕೊಂಡು ಹೆದರಿಸಿದ್ದಾರೆ. ಗನ್​​ಮ್ಯಾನ್​​ ಸೇರಿದಂತೆ ಉಳಿದವರನ್ನೆಲ್ಲ ಅಲ್ಲೇ ಇಳಿಸಿ ವಾಹನ ಸಮೇತ ಚಾಲಕನನ್ನು ಡೇರಿ ಸರ್ಕಲ್​ಗೆ ಕರೆದೊಯ್ದಿದ್ದಾರೆ. ಬಳಿಕ ಡೇರಿ ಸರ್ಕಲ್ ಫ್ಲೈಓವರ್ ಮೇಲೆ ವಾಹನ ನಿಲ್ಲಿಸಿ ಅದರಲ್ಲಿದ್ದ ಹಣವನ್ನು ಇನ್ನೋವಾ ಕಾರಿಗೆ ತುಂಬಿಕೊಂಡು ಪರಾರಿಯಾಗಿದ್ದಾರೆ.

ಎಟಿಎಂ ವಾಹನದಲ್ಲಿ ಒಟ್ಟು ನಾಲ್ಕು ಜನ ಸಿಎಂಎಸ್ ಸಿಬ್ಬಂದಿ ಇದ್ದರು. ಓರ್ವ ಡ್ರೈವರ್,ಇಬ್ಬರು ಗನ್ ಮ್ಯಾನ್ ಹಾಗೂ ಮತ್ತೊಬ್ಬ ಹಣ ಹಾಕುವ ಸಿಬ್ಬಂದಿ ಇದ್ದು, ಸದ್ಯ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಇವರ ವಿಚಾರಣೆ ನಡೆಯುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com