ಬೆಳಗಾವಿ ಅಧಿವೇಶನ: ದೋಷ ರಹಿತ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಯುಟಿ.ಖಾದರ್, ಹೊರಟ್ಟಿ ಸೂಚನೆ

ಅಧಿವೇಶನಕ್ಕೆ ನಿಯೋಜಿಸಲಾದ ಎಲ್ಲಾ ಅಧಿಕಾರಿಗಳು ಯಾವುದೇ ಲೋಪ-ದೋಷಗಳಾಗದಂತೆ ಬದ್ಧತೆಯಿಂದ ಕೆಲಸ ಮಾಡಬೇಕು.
 Assembly Speaker UT Khader and Council Chairman Basavaraj Horatti
ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಮತ್ತು ಪರಿಷತ್ ಅಧ್ಯಕ್ಷ ಬಸವರಾಜ ಹೊರಟ್ಟಿ
Updated on

ಬೆಳಗಾವಿ: ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ದೋಷರಹಿತ ವ್ಯವಸ್ಥೆಗಳ ಕಲ್ಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಹಾಗೂ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಬುಧವಾರ ಸೂಚನೆ ನೀಡಿದ್ದಾರೆ.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಬುಧವಾರ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಅಧಿವೇಶನಕ್ಕೆ ನಿಯೋಜಿಸಲಾದ ಎಲ್ಲಾ ಅಧಿಕಾರಿಗಳು ಯಾವುದೇ ಲೋಪ-ದೋಷಗಳಾಗದಂತೆ ಬದ್ಧತೆಯಿಂದ ಕೆಲಸ ಮಾಡಬೇಕು ಎಂದು ಹೇಳಿದರು.

ಅಧಿವೇಶನದ ಸಮಯದಲ್ಲಿ ಉದ್ಭವಿಸುವ ಯಾವುದೇ ಸಮಸ್ಯೆಗಳನ್ನು ತಕ್ಷಣವೇ ಸಂಬಂಧಪಟ್ಟ ಇಲಾಖೆಗಳ ಗಮನಕ್ಕೆ ತರಬೇಕು, ಜೊತೆಗೆ ತ್ವರಿತ ಪರಿಹಾರವನ್ನು ಕಂಡುಕೊಳ್ಳಬೇಕು. ಕಂಪ್ಯೂಟರ್‌ಗಳು ಮತ್ತು ಇತರ ಅಗತ್ಯ ಮೂಲಸೌಕರ್ಯಗಳಿಗೆ ಸರಿಯಾದ ವ್ಯವಸ್ಥೆಗಳೊಂದಿಗೆ ನೆಟ್‌ವರ್ಕ್ ಸಮಸ್ಯೆ ತಲೆದೋರದಂತೆ ನಿಗಾ ವಹಿಸಬೇಕು.

ಸುವರ್ಣ ವಿಧಾನಸೌಧ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಿಗಿ ಭದ್ರತೆ ಮತ್ತು ಸುಗಮ ಸಂಚಾರವನ್ನು ಖಚಿತಪಡಿಸಿಕೊಳ್ಳಬೇಕು . ಗೊಂದಲವನ್ನು ತಪ್ಪಿಸಲು ಪೊಲೀಸ್ ಇಲಾಖೆಯೊಂದಿಗೆ ಸಮನ್ವಯದಿಂದ ಪಾಸ್ ವಿತರಣೆಯನ್ನು ಸುಗಮವಾಗಿ ನಿರ್ವಹಿಸಬೇಕು ಎಂದು ಒತ್ತಿ ಹೇಳಿದರು.

 Assembly Speaker UT Khader and Council Chairman Basavaraj Horatti
ಡಿಸೆಂಬರ್ 8 ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ

ಶಾಲಾ ಮಕ್ಕಳು ಮತ್ತು ಸಾರ್ವಜನಿಕರು ಕಲಾಪಗಳನ್ನು ವೀಕ್ಷಿಸಲು ಸರಿಯಾದ ಸಮಯವನ್ನು ನಿಗದಿಪಡಿಸಬೇಕು. ವಿದ್ಯಾರ್ಥಿಗಳು, ಪೌರ ಕಾರ್ಮಿಕರು, ಅಲ್ಪಸಂಖ್ಯಾತ ಸಮುದಾಯದ ಸದಸ್ಯರು ಮತ್ತು ಮಹಿಳೆಯರು ಶಾಸಕಾಂಗದ ಕಲಾಪಗಳನ್ನು ವೀಕ್ಷಿಸಲು ವಿಶೇಷ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

ವಿಧಾನ ಪರಿಷತ್ತಿನ ಅಧ್ಯಕ್ಷ ಬಸವರಾಜ ಹೊರಟ್ಟಿ ಅವರು ಮಾತನಾಡಿ, ಸಚಿವರು, ಶಾಸಕರು, ಅಧಿಕಾರಿಗಳು ಮತ್ತು ಮಾರ್ಷಲ್‌ಗಳಿಗೆ ಸರಿಯಾದ ವಸತಿ ಮತ್ತು ಸಾರಿಗೆಯನ್ನು ಖಚಿತಪಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಚಿವರು ಮತ್ತು ಶಾಸಕರು ತಂಗಿರುವ ಹೋಟೆಲ್‌ಗಳಲ್ಲಿ ಹಾಗೂ ಸುವರ್ಣ ವಿಧಾನಸೌಧದಲ್ಲಿ ವೈದ್ಯಕೀಯ ತಂಡಗಳನ್ನು ನಿಯೋಜಿಸಲಾಗುವುದು, ಸಂಪೂರ್ಣ ಸುಸಜ್ಜಿತ ಆಂಬ್ಯುಲೆನ್ಸ್ ಸಜ್ಜಾಗಿರುತ್ತದೆ. ಸ್ಥಳೀಯ ವಿಶ್ವವಿದ್ಯಾಲಯಗಳಿಂದ 30 ವಿದ್ಯಾರ್ಥಿಗಳ ಆಯ್ದ ಗುಂಪುಗಳಿಗೆ ಕಲಾಪಗಳನ್ನು ವೀಕ್ಷಿಸಲು ವಿಸ್ತೃತ ಸಮಯವನ್ನು ನೀಡಲಾಗುವುದು ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com