

ಬೆಂಗಳೂರು: ಭಾನುವಾರ ಸಂಜೆ ವಿಧಾನಸೌಧದ ಮುಂದೆ ಮಾರಾಮಾರಿ ನಡೆಸಿ, ಜನರಲ್ಲಿ ಆತಂಕ ಸೃಷ್ಟಿಸಿದ್ದ ಯುವಕರು ನೇಪಾಳದ ಪ್ರಜೆಗಳು ಎಂಬುದಾಗಿ ತಿಳಿದುಬಂದಿದೆ.
ನೇಪಾಳಿ ಪ್ರಜೆಗಳ ಎರಡು ಗುಂಪುಗಳು ಘರ್ಷಣೆ ನಡೆಸಿದ್ದು, ನಂತರ ನೈಟ್ ಬೀಟ್ ಪೊಲೀಸರು ಲಾಠಿ ಚಾರ್ಜ್ ನಡೆಸಿ ಯುವಕರು ಸ್ಥಳದಿಂದ ಕಾಲ್ಕಿತ್ತುವಂತೆ ಮಾಡಿದ್ದಾರೆಂದು ತಿಳಿದುಬಂದಿದೆ.
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಇದೀಗ ವಿಧಾನಸೌಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ವರ್ಷದ ಆರಂಭದಲ್ಲಿ ಲಾಲ್‌ಬಾಗ್ ಬೊಟಾನಿಕಲ್ ಗಾರ್ಡನ್‌ನಲ್ಲಿ ಹೋಳಿ ಆಚರಣೆಯ ಸಂದರ್ಭದಲ್ಲಿ ನೇಪಾಳಿ ನಾಗರಿಕರ ಎರಡು ಗುಂಪುಗಳ ನಡುವೆಯೂ ಇದೇ ರೀತಿಯ ಘರ್ಷಣೆ ನಡೆದಿತ್ತು.
Advertisement