

ಬೆಳ್ತಂಗಡಿ: ಧರ್ಮಸ್ಥಳ ತಲೆಬುರುಡೆ ಪ್ರಕರಣದಲ್ಲಿ ಮಹತ್ವದ ಬೆಳವಣಿಯೊಂದು ಸಂಭವಿಸಿದ್ದು, 3 ತಿಂಗಳುಗಳಿಂದ ಈ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ (SIT) ತಂಡ, ಬೆಳ್ತಂಗಡಿ ಕೋರ್ಟ್‌ಗೆ ತನಿಖಾ ವರದಿ ಸಲ್ಲಿಸಿದೆ.
ಈ ತನಿಖಾ ವರದಿಯಲ್ಲಿ ಅನೇಕ ಅಚ್ಚರಿಯ ಮಾಹಿತಿಯನ್ನೊಳಗೊಂಡ ವಿವರಗಳನ್ನು ಉಲ್ಲೇಖಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಹೆಣಗಳನ್ನು ಹೂತುಹಾಕಿದ್ದೆ ಎಂದು ಹೇಳಿಕೊಂಡಿದ್ದ ಚಿನ್ನಯ್ಯ, ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಸುಜಾತಾ ಭಟ್ ಸೇರಿದಂತೆ ಒಟ್ಟು 6 ಮಂದಿ ಹೆಸರನ್ನು ಉಲ್ಲೇಖಿಸಲಾಗಿದೆ.
BNSS 215ರ ಅಡಿಯಲ್ಲಿ ಸುಳ್ಳು ಸಾಕ್ಷ್ಯದ ಕುರಿತ ಪ್ರಕರಣದ ತನಿಖಾ ವರದಿ ಇದಾಗಿದ್ದು, ಸುಮಾರು 4 ಸಾವಿರ ಪುಟಗಳನ್ನು ಹೊಂದಿದೆ.
ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಸುಳ್ಳು ಸಾಕ್ಷಿ ಹೇಳಿಕೆ ನೀಡಿರುವ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳು, ಸುಮಾರು ಮೂರು ತಿಂಗಳುಗಳ ಕಾಲ ತನಿಖೆ ನಡೆಸಿದ್ದಾರೆ. ರಾಜ್ಯ ಸರಕಾರಕ್ಕೂ SIT ಮುಖ್ಯಸ್ಥ DGP ಪ್ರಣಬ್ ಮೊಹಾಂತಿ ಅವರು ತನಿಖಾ ವರದಿ ಸಲ್ಲಿಸುವ ಸಾಧ್ಯತೆ ಇದೆ.
ಎಸ್ಐಟಿ ವರದಿಯಲ್ಲಿ ಧರ್ಮಸ್ಥಳ ವಿರುದ್ಧದ ಷಡ್ಯಂತ್ರದ ವಿಚಾರವಾಗಿಯೂ ಉಲ್ಲೇಖಿಸಲಾಗಿದೆ. ತಿಮರೋಡಿ ಚಿನ್ನಯ್ಯನ ಸಂಪರ್ಕದ ಬಗ್ಗೆಯೂ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಇನ್ನು ತನಿಖೆಗೆ ಕರೆದಾಗ ಆರೋಪಿಗಳು ತಡೆ ತಂದ ಬಗ್ಗೆಯೂ ಎಸ್‌ಐಟಿ ಅಧಿಕಾರಿಗಳು ತಮ್ಮ ತನಿಖಾ ವರದಿಯಲ್ಲಿ ಪ್ರಸ್ತಾಪಿಸಿದ್ದಾರೆ.
ಧರ್ಮಸ್ಥಳ ತಲೆಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಜುಲೈ 20 ರಂದು ಎಸ್‌ಐಟಿ ತಂಡವನ್ನು ರಚಿಸಿತ್ತು.
Advertisement