

ಬೆಂಗಳೂರು: BBM ವಿದ್ಯಾರ್ಥಿನಿಗೆ ಕರೆ ಮಾಡಿ ರೂಮಿಗೆ ಕರೆಸಿಕೊಂಡಿದ್ದ ಯುವಕನೋರ್ವ ಆಕೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ತಮ್ಮೇನಹಳ್ಳಿಯಲ್ಲಿ ನಡೆದಿದೆ. ಮೃತಳನ್ನು ಆಂಧ್ರದ ಅನ್ನಮಯ್ಯ ಜಿಲ್ಲೆಯ ಬಿಕ್ಕಿಂವರೀಪಲ್ಲಿ ಗ್ರಾಮದ ನಿವಾಸಿ 21 ವರ್ಷದ ದೇವಿಶ್ರೀ ಎಂದು ಗುರುತಿಸಲಾಗಿದೆ. ಕೊಲೆ ನಂತರ ಆರೋಪಿ ಪ್ರೇಮ್ ವರ್ಧನ್ ತಲೆಮರೆಸಿಕೊಂಡಿದ್ದಾನೆ.
ದೇವಿಶ್ರೀ ಕಳೆದ ಮೂರು ವರ್ಷಗಳಿಂದ ಬೆಂಗಳೂರಿನ ಪ್ರತಿಷ್ಠಿತ ಕಾಲೇಜೊಂದರಲ್ಲಿ ಬಿಬಿಎಂ ವ್ಯಾಸಂಗ ಮಾಡುತ್ತಿದ್ದಳು. ನಿನ್ನೆ ಬೆಳಗ್ಗೆ ಪ್ರೇಮ್ ವರ್ಧನ್ ಜೊತೆ ದೇವಿಶ್ರೀ ಸ್ನೇಹಿತೆಯ ರೂಂಗೆ ಹೋಗಿದ್ದಳು. ರೂಮಿನಲ್ಲಿ ಇಬ್ಬರ ಮಧ್ಯೆ ಏನು ನಡೆಯಿತೋ ಪ್ರೇಮ್, ದೇವಿಶ್ರೀಯನ್ನು ಕೊಲೆ ಮಾಡಿ ಪರಾರಿಯಾಗಿದ್ದು ಹತ್ಯೆ ಪ್ರಕರಣ ಇಂದು ಬೆಳಕಿಗೆ ಬಂದಿದೆ. ಕೊಲೆ ಪ್ರಕರಣ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು ಪ್ರೇಮ್ ವರ್ಧನ್ ಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
Advertisement