ಶಾಸಕರ ಖರೀದಿ ಹಾಗೂ 'ಕುದುರೆ ವ್ಯಾಪಾರ' ಬಿಜೆಪಿ ಸಂಸ್ಕೃತಿ; CM ಮಾತು ನಮಗೆ ವೇದ ವಾಕ್ಯ: ಡಿಸಿಎಂ ಡಿ.ಕೆ ಶಿವಕುಮಾರ್

ಹೈಕಮಾಂಡ್ ಹೇಳಿದ್ದನ್ನು ನಾನು, ಶಿವಕುಮಾರ್ ಸೇರಿದಂತೆ ಎಲ್ಲರೂ ಒಪ್ಪಬೇಕು ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಅವರು ಹೇಳಿದ ಮೇಲೆ ಅದೇ ನಮಗೆ ವೇದವಾಕ್ಯ” ಎಂದು ತಿಳಿಸಿದರು.
DK Shivakumar- Siddaramaiah
ಡಿಕೆ ಶಿವಕುಮಾರ್- ಸಿದ್ದರಾಮಯ್ಯonline desk
Updated on

ಬೆಂಗಳೂರು: “ಶಾಸಕರ ಖರೀದಿ ಹಾಗೂ ಕುದುರೆ ವ್ಯಾಪಾರ ಬಿಜೆಪಿ ಸಂಸ್ಕೃತಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದರು.

ಶಿಡ್ಲಘಟ್ಟದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು.

ಕಾಂಗ್ರೆಸ್ ಶಾಸಕರನ್ನು ಕಾಂಗ್ರೆಸ್ ಪಕ್ಷದ ನಾಯಕರೇ ಖರೀದಿ ಮಾಡುವ ಪರಿಸ್ಥಿತಿ ಬಂದಿದೆ ಎಂಬ ಬಿಜೆಪಿ ನಾಯಕರ ಹೇಳಿಕೆ ಬಗ್ಗೆ ಕೇಳಿದಾಗ, “ಈ ಹಿಂದೆ ಬಿಜೆಪಿ ಸರ್ಕಾರ ರಚನೆಯಾದಾಗ ಅವರು ಎಷ್ಟು ಸಾವಿರ ಕೋಟಿ ಖರ್ಚು ಮಾಡಿದ್ದರು.

ಮುಖ್ಯಮಂತ್ರಿ ಹುದ್ದೆಗೆ ಎಷ್ಟು ಹಣ ನೀಡಬೇಕಾಗಿತ್ತು, ಮಂತ್ರಿ ಹುದ್ದೆಗೆ ಎಷ್ಟು ಹಣ ನೀಡಲಾಗಿದೆ ಎಂದು ಅವರದೇ ಪಕ್ಷದ ನಾಯಕರು ಬಹಿರಂಗ ಹೇಳಿಕೆ ನೀಡಿದ್ದಾರೆ. ಅವರು ಎಷ್ಟು ಹಣ ಆಮೀಷ ಒಡ್ಡಿದ್ದರು ಎಂದು ವಿಧಾನಸಭೆಯಲ್ಲೂ ಪ್ರಸ್ತಾಪವಾಗಿದ್ದು, ದಾಖಲೆಗಳಲ್ಲಿ ಸೇರಿವೆ. ಈಗ ಬಿಜೆಪಿಯವರು ತಮ್ಮ ಪ್ರವೃತ್ತಿಯನ್ನು ನೆನೆಸಿಕೊಳ್ಳುತ್ತಿದ್ದಾರೆ” ಎಂದು ಹರಿಹಾಯ್ದರು.

ಹೈಕಮಾಂಡ್ ಹೇಳಿದ್ದನ್ನು ನಾನು, ಶಿವಕುಮಾರ್ ಸೇರಿದಂತೆ ಎಲ್ಲರೂ ಒಪ್ಪಬೇಕು ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಅವರು ಹೇಳಿದ ಮೇಲೆ ಅದೇ ನಮಗೆ ವೇದವಾಕ್ಯ” ಎಂದು ತಿಳಿಸಿದರು.

DK Shivakumar- Siddaramaiah
ಹೈಕಮಾಂಡ್ ಏನೇ ನಿರ್ಧಾರ ತೆಗೆದುಕೊಂಡರೂ, ನಾನು ಮತ್ತು ಡಿ.ಕೆ ಶಿವಕುಮಾರ್ ಒಪ್ಪಿಕೊಳ್ಳಬೇಕು: ಸಿದ್ದರಾಮಯ್ಯ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com