

ತಮಿಳುನಾಡು, ಪುದುಚೇರಿ, ಆಂಧ್ರ ಪ್ರದೇಶದ ಕರಾವಳಿ ತೀರಕ್ಕೆ ದಿತ್ವಾ ಚಂಡಮಾರುತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು ಚಂಡಮಾರುತದ ಪರಿಣಾಮ ಬೆಂಗಳೂರು ಸೇರಿದಂತೆ ಕರ್ನಾಟಕದ ಮೇಲೂ ಇರಲಿದೆ. ನವೆಂಬರ್ 30ರಂದು ದಿತ್ವಾ ಚಂಡಮಾರುತ ತಮಿಳುನಾಡಿನ ಚೆನ್ನಿಂದ 750 ಕಿಲೋಮೀಟರ್ ದೂರದ ಪುಟ್ಟುವಿಲ್ ಬಳಿ ರೂಪುಗೊಂಡಿದೆ. ದಿತ್ವಾ ಚಂಡಮಾರುತ ಉತ್ತರ ತಮಿಳುನಾಡು ಕರಾವಳಿ ತೀರ ಭಾಗ ಹಾಗೂ ದಕ್ಷಿಣ ಆಂಧ್ರದ
ನೈಋುತ್ಯ ಬಂಗಾಳಕೊಲ್ಲಿಯಲ್ಲಿ ರೂಪುಗೊಂಡಿದ್ದು ಮುಂದಿನ 12 ಗಂಟೆಗಳಲ್ಲಿ ಇದು ಚಂಡಮಾರುತವಾಗಿ ಪರಿವರ್ತನೆಗೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಈ ಹೊಸ ಚಂಡಮಾರುತಕ್ಕೆ 'ದಿತ್ವಾ ಚಂಡಮಾರುತ' ಎಂದು ಹೆಸರಿಡಲಾಗುತ್ತದೆ. ಇದರ ಭೂಸ್ಪರ್ಶದ ಸಮಯ ಇನ್ನೂ ಖಚಿತವಾಗಿಲ್ಲ. ಆದರೆ, ಈ ವಾರದ ಅಂತ್ಯದಲ್ಲಿ ತಮಿಳುನಾಡು, ಪುದುಚೇರಿ ಮತ್ತು ದಕ್ಷಿಣ ಆಂಧ್ರಪ್ರದೇಶದ ಕರಾವಳಿಯಲ್ಲಿ ಭಾರೀ ಮಳೆ, ಗಂಟೆಗೆ 80-90 ಕಿ.ಮೀ ವೇಗದ ಗಾಳಿ ಮತ್ತು ಅಲೆಗಳ ಅಬ್ಬರ ಕಂಡುಬರುವ ನಿರೀಕ್ಷೆಯಿದೆ.
ಹೀಗಾಗಿ ಕರ್ನಾಟಕ, ತಮಿಳುನಾಡು, ಕೇರಳ ಹಾಗೂ ಆಂಧ್ರಪ್ರದೇಶದ ಕರಾವಳಿ ಪ್ರದೇಶಗಳಲ್ಲಿ ಡಿಸೆಂಬರ್ 1ರಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)ಯ ಎಚ್ಚರಿಕೆ ನೀಡಿದೆ.
Advertisement