

ರಾಜ್ಯದಲ್ಲಿ ಈ ವರ್ಷ ಹೆಚ್ಚು ಮಳೆಯಿಂದಾಗಿ 14 ಲಕ್ಷ ಹೆಕ್ಟೇರ್‌ಗಳ ಬೆಳೆ ಹಾನಿಯಾಗಿದೆ. ರೈತರಿಗೆ ಪರಿಹಾರವಾಗಿ 1,033 ಕೋಟಿ ರೂಪಾಯಿ ಪರಿಹಾರ ಪ್ಯಾಕೇಜ್ ಘೋಷಿಸುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಬಾರಿ ರಾಜ್ಯದಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಸುಮಾರು 14 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ರೈತರಿಗೆ ಪರಿಹಾರ ನೀಡಬೇಕು. ನಾನು ಕಲಬುರಗಿ, ಯಾದಗಿರಿ ಮತ್ತು ಇತರ ಕೆಲವು ಜಿಲ್ಲೆಗಳಿಗೆ ಭೇಟಿ ನೀಡಿದ್ದೆ, ಅಲ್ಲಿ ಜೋಳ, ಕಬ್ಬು ಮತ್ತು ತೊಗರಿ ಬೆಳೆಗೆ ತೀವ್ರ ಹಾನಿಯಾಗಿದೆ.
ನಾವು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದೇವೆ. ಅವರು ಇಲ್ಲಿಗೆ ಕೇಂದ್ರ ತಂಡವನ್ನು ಕಳಿಸಿ ಹಾನಿಯ ಬಗ್ಗೆ ಪರಿಶೀಲನೆ ನಡೆಸಿ ಪರಿಹಾರ ನೀಡುತ್ತಾರೆ ಎಂಬ ಭರವಸೆ ನಮಗಿದೆ. 17 ಲಕ್ಷ ಹೆಕ್ಟೇರ್‌ಗೆ ಆರ್ಥಿಕ ನೆರವು ರಾಜ್ಯ ಸರ್ಕಾರದಿಂದ ನೀಡಲಾಗುವುದು ಎಂದು ಪ್ರಕಟಿಸಿದರು.
ಪ್ರಸ್ತುತ ವರ್ಷದ ಮಾನ್ಸೂನ್ ಅವಧಿಯಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದ ಬೆಳೆ ಹಾನಿಗೊಳಗಾದ ರೈತರಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ ಸಬ್ಸಿಡಿಗಾಗಿ 1033.60 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಲಾಗಿದ್ದು, ಇಂದು ಚಾಲನೆ ನೀಡಲಾಗಿದೆ.
ಬೆಳೆ ಹಾನಿಗೊಳಗಾದ ರೈತರಿಗೆ ಹೆಚ್ಚಿನ ನೆರವು ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಇನ್‌ಪುಟ್ ಸಬ್ಸಿಡಿಗಳ ದರಗಳನ್ನು ಹೆಚ್ಚಿಸಿದೆ. ಗರಿಷ್ಟ 2 ಹೆಕ್ಟೇರಿಗೆ ಸೀಮಿತವಾಗಿ, ಮಳೆಯಾಶ್ರಿತ ಬೆಳೆಗಳಿಗೆ ಹೆಕ್ಟೇರ್ ಒಂದಕ್ಕೆ ರೂ. 8500 ರಿಂದ ರೂ. 17 ಸಾವಿರ, ನೀರಾವರಿ ಬೆಳೆಗಳಿಗೆ ಹೆಕ್ಟೇರ್ ಒಂದಕ್ಕೆ ರೂ.17 ಸಾವಿರದಿಂದ ರೂ.25,500 ಹಾಗೂ ಬಹು ವಾರ್ಷಿಕ ಬೆಳೆಗಳಿಗೆ ಹೆಕ್ಟೇರ್ ಒಂದಕ್ಕೆ ರೂ.22,500ರಿಂದ ರೂ. 31 ಸಾವಿರಕ್ಕೆ ಹೆಚ್ಚಿಸಲಾಗಿದೆ ಎಂದರು.
ಒಂಭತ್ತು ಜಿಲ್ಲೆಗಳಲ್ಲಿ ಹೆಚ್ಚಿನ ಬೆಳೆ ಹಾನಿ ಉಂಟಾಗಿದೆ. ಮುಖ್ಯವಾಗಿ ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಬೆಳೆಗಳು ಕೊಯ್ಲಿನ ಹಂತಕ್ಕೆ ಬಂದ ಸಂದರ್ಭದಲ್ಲಿ ಭಾರೀ ಮಳೆಯಿಂದ ಹೆಚ್ಚಿನ ಹಾನಿ ಸಂಭವಿಸಿದೆ. ಕೃಷ್ಣಾ ಮತ್ತು ಭೀಮಾ ಜಲಾನಯನ ಪ್ರದೇಶಗಳಲ್ಲಿ ನಿರಂತರ ಒಳ ಹರಿವು ಹೆಚ್ಚಳದಿಂದ ಕಲಬುರಗಿ, ಯಾದಗಿರಿ ಮತ್ತು ಬೀದರ ಜಿಲ್ಲೆಗಳಲ್ಲಿ ತೊಗರಿ ಮತ್ತು ಹತ್ತಿ ಬೆಳೆಗಳಿಗೆ ವ್ಯಾಪಕ ಹಾನಿ ಉಂಟಾಗಿದೆ.
ಕೃಷ್ಣಾ ಮತ್ತು ಭೀಮಾ ಜಲಾನಯನ ಪ್ರದೇಶಗಳಲ್ಲಿ ನಿರಂತರ ಒಳ ಹರಿವು ಹೆಚ್ಚಳದಿಂದ ಕಲಬುರಗಿ, ಯಾದಗಿರಿ ಮತ್ತು ಬೀದರ ಜಿಲ್ಲೆಗಳಲ್ಲಿ ತೊಗರಿ ಮತ್ತು ಹತ್ತಿ ಬೆಳೆಗಳಿಗೆ ವ್ಯಾಪಕ ಹಾನಿ ಉಂಟಾಗಿದೆ ಎಂದರು.
ಬೆಳೆ ನಷ್ಟದ ಗ್ರಾಮವಾರು ಪಟ್ಟಿಯನ್ನು ಗ್ರಾಮ ಚಾವಡಿಗಳಲ್ಲಿ ಹಾಗೂ ಆನ್‌ಲೈನ್ ನಲ್ಲಿ ಪ್ರಕಟಿಸಿ, ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಿ, ಬಳಿಕ ನಷ್ಟ ಅನುಭವಿಸಿದ ರೈತರ ಪಟ್ಟಿಯನ್ನು ಅಂತಿಮಗೊಳಿಸಿದ ಬಳಿಕ ಇನ್‌ಪುಟ್ ಸಬ್ಸಿಡಿಯನ್ನು ನೇರವಾಗಿ ರೈತರಿಗೆ ವರ್ಗಾಯಿಸುವ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
Advertisement