

ಬೆಳಗಾವಿ: ರಾಜ್ಯದಲ್ಲಿ ಸಿಎಂ ಗದ್ದುಗೆ ಬದಲಾವಣೆ ವಿಚಾರದಲ್ಲಿ ಇದೀಗ ಸ್ವಾಮೀಜಿಗಳು ಅಖಾಡಕ್ಕಿಳಿದಿದ್ದು, ತಮ್ಮ ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.
ಡಿಕೆ ಶಿವಕುಮಾರ್ ಗೆ ಆದಿ ಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿ ನಂತರ ಇದೀಗ ಕಿತ್ತೂರು ತಾಲೂಕಿನ ದೇಗುಲಹಳ್ಳಿ ಮಡಿವಾಳೇಶ್ವರ ಮಠದ ವೀರೇಶ್ವರ ಸ್ವಾಮೀಜಿ ಬೆಂಬಲ ವ್ಯಕ್ತಪಡಿಸಿದ್ದಾರೆ.
ಡಿಕೆ ಶಿವಕುಮಾರ್ ಅವರಿಗೆ ಸಿಎಂ ಕುರ್ಚಿ ಬಿಟ್ಟಕೊಡದೇ ಇದ್ದಲ್ಲಿ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ.
ಮೊದಲನೇ ಅವಧಿಗೆ ಸಿದ್ದರಾಮಯ್ಯ ಸಿಎಂ ಆಗಲು ಡಿಕೆ ಶಿವಕುಮಾರ್ ಅವರು ಸಹಕಾರ ನೀಡಿದ್ದರು. ಎರಡನೇ ಅವಧಿಗೆ ಡಿ.ಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟು ಕೊಡಬೇಕು ಎಂದರು.ಅಧಿಕಾರ ಬಿಟ್ಟು ಕೊಡದಿದ್ದರೆ ವಚನ ಭ್ರಷ್ಟ ಸಿದ್ದರಾಮಯ್ಯ ಎಂದು ಜನರ ಮನಸಿನಲ್ಲಿ ಉಳಿಯುತ್ತದೆ. ಸಿದ್ದರಾಮಯ್ಯ ಮೊಂಡುತನ, ಹಠ ಬಿಟ್ಟು ಅಧಿಕಾರ ಹಸ್ತಾಂತರ ಮಾಡಬೇಕು ಎಂದು ಹೇಳಿದರು.
ಮುಖ್ಯಮಂತ್ರಿ ಸ್ಥಾನ ಹಸ್ತಾಂತರ ವಿಚಾರ ಮುಂದೂಡಿದರೆ ಸರ್ಕಾರವೇ ಅಸ್ಥಿರವಾಗುವ ಸಾಧ್ಯತೆಯಿದೆ ಎಂದು ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.
Advertisement